ಪಠ್ಯ ಹಿಂಪಡೆಯದಿದ್ದರೆ ಪರಿಸ್ಥಿತಿ ಕೈಮೀರುತ್ತದೆ: ನಾರಾಯಣ ಗೌಡ ಎಚ್ಚರಿಕೆ

ನಾಡಿನಲ್ಲಿ ಹೊಸದೊಂದು ಸಂಘರ್ಷದ ವಾತಾವರಣ, ಸರ್ಕಾರ ಉಳಿಯುವುದಿಲ್ಲ

Team Udayavani, Jun 17, 2022, 5:13 PM IST

1-gdgdg

ಬೆಂಗಳೂರು : ಒಂದು ವೇಳೆ ಸರ್ಕಾರ ಕೂಡಲೇ ಪರಿಷ್ಕೃತ ಪಠ್ಯಗಳನ್ನು ಹಿಂದಕ್ಕೆ ಪಡೆಯದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುವುದು ಖಚಿತ. ಇಡೀ ರಾಜ್ಯದ ಶಾಂತಿ ಕದಡಿ ಹೋಗುತ್ತದೆ. ಅದರ ಹೊಣೆಯನ್ನು ಸರ್ಕಾರವೇ ಹೊರಬೇಕಾಗುತ್ತದೆ. ಜನರನ್ನು ಎದುರು ಹಾಕಿಕೊಂಡ ಸರ್ಕಾರಗಳು ಉಳಿಯುವುದಿಲ್ಲ. ಇದನ್ನು ಮರೆಯಬೇಡಿ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಅವರು ಸರಣಿ ಟ್ವೀಟ್ ಗಳನ್ನು ಮಾಡಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಅಸ್ಮಿತೆಗೆ ಧಕ್ಕೆ ತಂದಿರುವ ಪರಿಷ್ಕೃತ ಪಠ್ಯವನ್ನು ಹಿಂದಕ್ಕೆ ಪಡೆಯಲು ಮೇಲಿಂದ ಮೇಲೆ ಗೌರವಾನ್ವಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ವಿನಂತಿಸಿದ್ದೇನೆ. ಆದರೆ ಅವರು ಯಾರದೋ ಒತ್ತಡದಿಂದ ಸುಮ್ಮನಿದ್ದಾರೆ ಎನಿಸುತ್ತಿದೆ. ಇನ್ನು ತಡಮಾಡುವುದು ಸರಿಯಲ್ಲ. ಕೂಡಲೇ ಪರಿಷ್ಕೃತ ಪಠ್ಯ ಹಿಂದಕ್ಕೆ ಪಡೆಯಿರಿ‌ ಎಂದು ಆಗ್ರಹಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಹಲವಾರು ಮಂದಿ ಮಹಾಮಹಿಮರಿಗೆ, ದಾರ್ಶನಿಕರಿಗೆ ಅಪಮಾನಗಳಾಗಿವೆ. ಮಕ್ಕಳಿಗೆ ನಾವು ಈ ವಿಷವುಣಿಸುವುದು ಬೇಡ. ಸ್ವತಃ ಶಿಕ್ಷಣ ಸಚಿವರೇ ತಪ್ಪುಗಳು ಆಗಿದೆ ಎಂದು ಒಪ್ಪಿಕೊಂಡಿದ್ದಾರೆ. ಆಗಿರುವುದು ತಪ್ಪುಗಳಲ್ಲ, ಪ್ರಮಾದಗಳು. ಈ ಪಠ್ಯ ಬೇಡವೇ ಬೇಡ ಎಂದು ಟ್ವೀಟ್ ಮಾಡಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಆಗಿರುವ ವಿಕೃತಿಗಳ ವಿರುದ್ಧ ಇಡೀ ನಾಡಿನ ಸಾಹಿತಿಗಳು, ಶಿಕ್ಷಣ ತಜ್ಞರು, ಮಠಾಧೀಶರು, ಬುದ್ಧಿಜೀವಿಗಳು, ಹೋರಾಟಗಾರರು ಧ್ವನಿ ಎತ್ತಿದ್ದಾರೆ. ಆಗಿರುವ ಪ್ರಮಾದಗಳನ್ನು ಎತ್ತಿ ತೋರಿಸಿದ್ದಾರೆ. ಇನ್ನು ತಡ ಮಾಡುವುದರಲ್ಲಿ ಅರ್ಥವಿಲ್ಲ. ಪಠ್ಯ ಹಿಂದಕ್ಕೆ ಪಡೆಯಲಿ ಎಂದು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಪರಿಷ್ಕೃತ ಪಠ್ಯವನ್ನು ಹಿಂದಕ್ಕೆ ಪಡೆಯಲು ಮನವಿ ಮಾಡಿದ್ದೆ, ಈ ಕುರಿತು ಪರಿಶೀಲನೆ ನಡೆಸುವ ಭರವಸೆ ನೀಡಿದ್ದರು. ಆದರೆ ಕಾಣದ ಶಕ್ತಿಗಳು ಅವರ ಕೈಗಳನ್ನು ಕಟ್ಟಿಹಾಕಿವೆಯೇನೋ ಅನಿಸುತ್ತದೆ. ಸಮಸ್ಯೆ ಬಿಗಡಾಯಿಸುವುದಕ್ಕೆ ಮುನ್ನ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು‌ ಎಂದು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿಗಳು ಜನರ ಅಹವಾಲಿಗೆ ಕಿವಿಗೊಡಬೇಕು, ಪ್ರಜಾಪ್ರಭುತ್ವದಲ್ಲಿ ಜನರೇ ದೊರೆಗಳು. ಸಂವಿಧಾನೇತರ ಶಕ್ತಿಗಳು ಸರ್ಕಾರವನ್ನು ನಿಯಂತ್ರಿಸಬಾರದು. ನಾಡಿನಾದ್ಯಂತ ಪ್ರಜ್ಞಾವಂತ ಜನರು ಬೀದಿಗಿಳಿದು ಹೋರಾಡುತ್ತಿದ್ದಾರೆ. ಅವರ ಧ್ವನಿಯನ್ನು ಸರ್ಕಾರ ಗುರುತಿಸಬೇಕು. ಮಾನ್ಯತೆ ನೀಡಬೇಕು ಎಂದಿದ್ದಾರೆ.

ಬಸವಣ್ಣ, ಅಲ್ಲಮಪ್ರಭು, ವಾಲ್ಮೀಕಿ, ಕನಕದಾಸ, ಪುರಂದರದಾಸ, ಶಂಕರಾಚಾರ್ಯ, ಶಿಶುನಾಳ ಶರೀಫ, ಕುವೆಂಪು ಮೊದಲುಗೊಂಡು ಕರ್ನಾಟಕದ ದಾರ್ಶನಿಕರು, ಸಂತರಿಗೆ ಪರಿಷ್ಕೃತ ಪಠ್ಯದಲ್ಲಿ ಅಪಮಾನಿಸಲಾಗಿದೆ. ಕನ್ನಡತನ, ಕನ್ನಡಾಭಿಮಾನಕ್ಕೆ ಕುತ್ತು ತರಲಾಗಿದೆ. ಇದನ್ನು ಒಪ್ಪಿಕೊಳ್ಳುವುದು ಸಾಧ್ಯವೇ ಇಲ್ಲ ಎಂದಿದ್ದಾರೆ.

ದೇಶ ಇಂದು ಹಲವಾರು ಬಗೆಯ ಸಂಕಟ, ಸಂಘರ್ಷಗಳಲ್ಲಿ ಬೆಂದುಹೋಗುತ್ತಿದೆ. ಪಠ್ಯಪುಸ್ತಕ ಪರಿಷ್ಕರಣೆಯ ಹೆಸರಿನಲ್ಲಿ ಸರ್ಕಾರ ನಮ್ಮ ನಾಡಿನಲ್ಲಿ ಹೊಸದೊಂದು ಸಂಘರ್ಷದ ವಾತಾವರಣವನ್ನು ಮೈಮೇಲೆ ಎಳೆದುಕೊಳ್ಳುತ್ತಿದೆ. ಸರ್ಕಾರದ ಒಣಹಟ, ಪ್ರತಿಷ್ಠೆಗೆ ರಾಜ್ಯ ಬೇಯುವುದು ಬೇಡ ಎಂದು ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯದ ಸರ್ವ ಧರ್ಮ, ಜಾತಿ, ಸಮುದಾಯಗಳ ಜನರು ಅನ್ಯೋನ್ಯವಾಗಿ ಶಾಂತಿಯಿಂದ ಬದುಕುತ್ತಿದ್ದಾರೆ. ಅವರ ಸಮುದಾಯಗಳ ಮಹಾಮಹಿಮರಿಗೆ ಅಪಮಾನವೆಸಗುವ ಮೂಲಕ ಸಂಘರ್ಷದ ವಾತಾವರಣ ನಿರ್ಮಿಸಲಾಗಿದೆ. ಸರ್ಕಾರ ವಿವೇಕದಿಂದ ವರ್ತಿಸಿ ಪರಿಷ್ಕೃತ ಪಠ್ಯ ಹಿಂದಕ್ಕೆ ಪಡೆಯಲಿ ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.