ಕಾಪು: ಬಿಜೆಪಿ ಮುಖಂಡ ಯಶ್‌ಪಾಲ್ ಸುವರ್ಣಗೆ ಕೊಲೆ ಬೆದರಿಕೆ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

Team Udayavani, Jun 18, 2022, 8:58 PM IST

ಕಾಪು: ಬಿಜೆಪಿ ಮುಖಂಡ ಯಶ್‌ಪಾಲ್ ಸುವರ್ಣಗೆ ಕೊಲೆ ಬೆದರಿಕೆ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

ಕಾಪು  : ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕವಾಗಿ ಜೀವ ಬೆದರಿಕೆಯೊಡ್ಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ತಾಲೂಕು ಬಜ್ಪೆ ನಿವಾಸಿ ಮಹಮ್ಮದ್ ಶಾಫಿ (26) ಬಂಧಿತ ಆರೋಪಿಯಾಗಿದ್ದು ಈತನನ್ನು ಕಾಪು ಪೊಲೀಸರು ಬಜ್ಪೆಯಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ.

ಬಿಜೆಪಿ ಮುಖಂಡ ಯಶ್‌ಪಾಲ್ ಸುವರ್ಣ ಅವರ ವಿರುದ್ಧು ಸಾಮಾಜಿಕ ಜಾಲತಾಣ ಮಾರಿಗುಡಿ 6 ಎಂಬ ಇನ್‌ಸ್ಟಾ ಗ್ರಾಂನ ಖಾತೆಯಲ್ಲಿ ಜೀವ ಬೆದರಿಕೆಯೊಡ್ಡಿದ್ದು ಅವರನ್ನು ಹತ್ಯೆಗೈದವರಿಗೆ 10 ಲಕ್ಷ ರೂಪಾಯಿ ನೀಡುವುದಾಗಿ ಪೋಸ್ಟ್ ಹಾಕಲಾಗಿತ್ತು. ಯಶ್‌ಪಾಲ್ ಸುವರ್ಣ ಅವರ ಬಗ್ಗೆ ಈ ರೀತಿಯಾಗಿ ಪೋಸ್ಟ್ ಹಾಕಿದ್ದವರನ್ನು ಪತ್ತೆ ಹಚ್ಚಿ, ಶಿಕ್ಷೆಗೊಳಪಡಿಸುವಂತೆ ಕಾಪು ಕ್ಷೇತ್ರ ಬಿಜೆಪಿ ಯುವ ಮೋರ್ಚಾದ ಆಧ್ಯಕ್ಷ ಸಚಿನ್ ಸುವರ್ಣ ಅವರ ನೇತೃತ್ವದ ಯುವ ಮೋರ್ಚಾ ತಂಡ ಹಾಗೂ ಹಿಂದೂಪರ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಕಾಪು ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಒತ್ತಾಯಿಸಿದ್ದರು.

ಇದನ್ನೂ ಓದಿ : ಸಿಎಂ ಬೊಮ್ಮಾಯಿ ಪಂಚಮಸಾಲಿ ಮೀಸಲು ಪರವಾಗಿದ್ದಾರೆ: ಸಿ.ಸಿ.ಪಾಟೀಲ್

ಈ ಬಗ್ಗೆ ಕ್ಷಿಪ್ರ ಕಾರ್ಯಾಚರಣೆಗೆ ಇಳಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್ ಅಧಿಕ್ಷಕ ಎಸ್.ಟಿ. ಸಿದ್ಧಲಿಂಗಪ್ಪ, ಕಾರ್ಕಳ ಡಿವೈಎಸ್ಸಿ ವಿಜಯ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಕಾಪು ಸಿಐ ಪ್ರಕಾಶ್ ನೇತೃತ್ವದಲ್ಲಿ ಕಾಪು ಎಸ್ಸೈ ಶ್ರೀಶೈಲ ಮುರಗೋಡ, ಸಿಬಂದಿಗಳಾದ ಪ್ರವೀಣ್, ನಾರಾಯಣ, ರಾಜೇಶ್, ಹೇಮರಾಜ್ ಅವರ ನೇತೃತ್ವದ ತಂಡವು ಇನ್‌ಸ್ಟಾ ಗ್ರಾಂ ಖಾತೆಯಲ್ಲಿ ಯಶ್‌ಪಾಲ್ ಸುವರ್ಣ ಅವರಿಗೆ ಜೀವ ಬೆದರಿಕೆಯೊಡ್ಡಿದ್ದ ಆರೋಪಿ ಬಜ್ಪೆ ನಿವಾಸಿ ಮೊಹಮ್ಮದ್ ಶಾಫಿಯನ್ನು ಜೂ. ೧೮ರಂದು ಬಜ್ಪೆ ತಾರಿಕಂಬ ಬಸ್ ನಿಲ್ದಾಣದ ಬಳಿ ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಪೊಲೀಸ್ ವಿಚಾರಣೆಯ ವೇಳೆ ಬಂಧಿತ ಆರೋಪಿ ಮೊಹಮ್ಮದ್ ಶಾಫಿ ತನ್ನ ಸ್ನೇಹಿತ ಆಸಿಫ್ ಎಂಬಾತನೊಂದಿಗೆ ಸೇರಿಕೊಂಡು ಮಾರಿಗುಡಿ 6 ಎಂಬ ಇನ್‌ಸ್ಟಾ ಗ್ರಾಂ ಖಾತೆಯಲ್ಲಿ ಯಶ್‌ಪಾಲ್ ಸುವರ್ಣ ಮತ್ತು ಪ್ರಮೋದ್ ಮುತಾಲಿಕ್ ಅವರ ಫೋಟೊ ಇರುವ ಪೋಸ್ಟ್‌ನ್ನು ಸೃಷ್ಟಿಸಿ, ಅದರಲ್ಲಿ ಎರಡು ಹಂದಿಗಳ ತಲೆ ಕಡಿದರೆ 20 ಲಕ್ಷ.. ಒಂದು ತಲೆಗೆ 10 ಲಕ್ಷ ರೂಪಾಯಿ ಎಂದು ಘೋಷಣೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಮತ್ತೋರ್ವ ಆರೋಪಿ ಆಸಿಫ್‌ನ ಬಂಧನಕ್ಕೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.