ರಾಜಕೀಯ ದ್ವೇಷದ ಪ್ರಕರಣಗಳಿಂದ ನಮ್ಮ ಧ್ವನಿ ಅಡಗಿಸಲು ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್


Team Udayavani, Jun 21, 2022, 3:51 PM IST

ರಾಜಕೀಯ ದ್ವೇಷದ ಪ್ರಕರಣಗಳಿಂದ ನಮ್ಮ ಧ್ವನಿ ಅಡಗಿಸಲು ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

ಹೊಸದಿಲ್ಲಿ: ರಾಜಕೀಯ ದ್ವೇಷದಿಂದ ಸುಳ್ಳು ಪ್ರಕರಣ ದಾಖಲಿಸಿ ಕಾಂಗ್ರೆಸ್ ಪಕ್ಷದ ಧ್ವನಿ ಅಡಗಿಸಲು ಬಿಜೆಪಿ ಸರ್ಕಾರ ಪ್ರಯತ್ನಿಸುತ್ತಿದ್ದು, ಇದು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿ, ಪೂರ್ವಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಎಐಸಿಸಿ ಕಚೇರಿ ಮೇಲೆ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ಮೂಲಕ ದಾಳಿ ನಡೆಸುತ್ತಿದೆ. ಪಕ್ಷದ ಕಚೇರಿ ನಮಗೆ ದೇವಾಲಯವಿದ್ದಂತೆ. ಆದರೆ ಕೇಂದ್ರ ಸರ್ಕಾರ ಪೊಲೀಸರನ್ನು ಬಳಸಿಕೊಂಡು, ಅಲ್ಲಿಗೆ ಯಾರೂ ಬರಬಾರದು, ಅಲ್ಲಿ ಯಾರೂ ಸೇರುವಂತಿಲ್ಲ ಎಂದು ದಬ್ಬಾಳಿಕೆ ನಡೆಸುತ್ತಿದೆ. ಅದನ್ನು ಖಂಡಿಸಿ ಪ್ರತಿಭಟನೆ ವ್ಯಕ್ತಪಡಿಸಲು ಇಲ್ಲಿಗೆ ಬಂದಿದ್ದೇವೆ. ಇಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದು, ಅದರ ಬಗ್ಗೆಯೂ ಅರಿವಿದೆ ಎಂದಿದ್ದಾರೆ.

ಸೂರ್ಯ ಹುಟ್ಟುತ್ತಾನೆ, ಮುಳುಗುತ್ತಾನೆ. ಅದೇ ರೀತಿ ಎಲ್ಲರಿಗೂ ರಾಜಕೀಯದಲ್ಲಿ ದಿನಗಳು ಬದಲಾಗುತ್ತವೆ. ಬಿಜೆಪಿಯವರು ಇದನ್ನು ಅರ್ಥ ಮಾಡಿಕೊಂಡಂತೆ ಕಾಣುತ್ತಿಲ್ಲ. ಏನೇ ಆದರೂ ನಾವು ನಮ್ಮ ನಾಯಕರ ಜತೆ ಇರುತ್ತೇವೆ, ಕಷ್ಟಕಾಲದಲ್ಲಿ ಅವರ ಜತೆ ನಿಂತು, ಅವರಿಗೆ ಧೈರ್ಯ ತುಂಬುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ನಾಯಕರು, ಪರಿಷತ್ ಸದಸ್ಯರು ಸೇರಿದಂತೆ ಎಲ್ಲ ಶಾಸಕರನ್ನು ದೆಹಲಿಗೆ ಬರುವಂತೆ ಕರೆ ನೀಡಲಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ನಮ್ಮ ಸಂಸದರು ಈಗಾಗಲೇ ಬಂದು ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಮಾಡಿದ್ದಾರೆ. ಅವರನ್ನು ಬಂಧಿಸಿ ಮೂರು ದಿನ ದೆಹಲಿಯ ಹೊರಗಿರುವ ಠಾಣೆಯಲ್ಲಿ ಇಟ್ಟಿದ್ದರು. ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ಏಕೈಕ ಸಂಸದರನ್ನು ಪೊಲೀಸರು ಯಾವ ರೀತಿ ನಡೆಸಿಕೊಂಡಿದ್ದಾರೆ ಎಂದು ನೋಡಿದ್ದೇವೆ. ನಮ್ಮ ನಾಯಕರು, ಯುವ ಕಾಂಗ್ರೆಸ್ ಅಧ್ಯಕ್ಷರನ್ನು ಯಾವ ರೀತಿ ನಡೆಸಿಕೊಂಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಯುವ ಕಾಂಗ್ರೆಸ್ ಅಧ್ಯಕ್ಷರು ಹೋರಾಟ ಮಾಡದೇ ಇನ್ಯಾರು ಮಾಡಲು ಸಾಧ್ಯ? ಅವರು ದೇಶದ ಯುವಕರ ಪ್ರತಿನಿಧಿ. ಸರ್ಕಾರ ಇವರೆಲ್ಲರಿಗೂ ಯಾವ ರೀತಿ ಕಿರುಕುಳ ನೀಡುತ್ತಿದೆ ಎಂದು ನಾವು ನೋಡಿದ್ದೇವೆ. ರಾಹುಲ್ ಗಾಂಧಿ ಅವರನ್ನು 40 ತಾಸು ವಿಚಾರಣೆ ಮಾಡುವುದೇನಿತ್ತು? ಇದರಲ್ಲಿ ಷಡ್ಯಂತ್ರವಿದೆ. ಇದರಿಂದ ಒಳ್ಳೆಯದಾಗುವುದಿಲ್ಲ. ನಮ್ಮ ನಾಯಕರು ಎಲ್ಲವನ್ನು ಎದುರಿಸಲು ಸಿದ್ಧರಾಗಿದ್ದಾರೆ. ಸೋನಿಯಾ ಗಾಂಧಿ ಅವರು ನಿನ್ನೆ ರಾತ್ರಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಅವರನ್ನು 23 ರಂದು ವಿಚಾರಣೆಗೆ ಕರೆದಿದ್ದಾರೆ. ವಿಚಾರಣೆಗೆ ನಾವು ಹೆದರುವುದಿಲ್ಲ. ನಾವು ಅದನ್ನು ಗೌರವಿಸುತ್ತೇವೆ. ಆದರೆ ವಿಚಾರಣೆ ಮಾಡುತ್ತಿರುವ ಸಮಯ, ವಿಧಾನ ನೋಡಿದರೆ ಅಧಿಕಾರ ದುರ್ಬಳಕೆ ಮಾಡಿಕೊಂಡು ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಗೌರವ ತರುತ್ತಿದ್ದಾರೆ’ ಎಂದರು.

ವಿಚಾರಣೆಯನ್ನು ಸಾಮಾನ್ಯ ಪ್ರಕ್ರಿಯೆ ಎಂದು ಎದುರಿಸಬಹುದಲ್ಲವೇ? ಪ್ರತಿಭಟನೆ ಯಾಕೆ ಎಂಬ ಪ್ರಕ್ರಿಯೆಗೆ, ‘ಎಷ್ಟು ದಿನ ವಿಚಾರಣೆ ಮಾಡುತ್ತಾರೆ. ನಾವು ಈ ಪ್ರಕರಣ ಅಧ್ಯಯನ ಮಾಡಿದ್ದು, ಕಾಂಗ್ರೆಸ್ ಪಕ್ಷದ ವಿಚಾರ ಹಾಗೂ ಸ್ವಾತಂತ್ರ್ಯ ಹೋರಾಟದ ವಿಚಾರ ಪ್ರಚಾರ ಮಾಡುತ್ತಿದ್ದ ಪತ್ರಿಕೆ ಅದಾಗಿದ್ದು, ಅದನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಲಾಗಿದೆ. ಇದರಲ್ಲಿ ಒಂದು ರೂಪಾಯಿಯೂ ದುರ್ಬಳಕೆಯಾಗಿಲ್ಲ. ಅವರ ಆಸ್ತಿಯಲ್ಲೂ ಘೋಷಣೆ ಮಾಡಿಕೊಂಡಿಲ್ಲ. ಅವರು ಪಕ್ಷದ ಹುದ್ದೆಯಲ್ಲಿರುವ ಕಾರಣ ಅವರು ಷೇರು ಹೊಂದಿದ್ದು, ಅದರಲ್ಲಿ ಯಾವ ಹಣವನ್ನು ಉಪಯೋಗಿಸಿಕೊಂಡಿಲ್ಲ. ಬದಲಿಗೆ ಸಾರ್ವಜನಿಕ ಬದುಕಿನಲ್ಲಿ ಸೇವೆ ಮಾಡುತ್ತಿದ್ದಾರೆ. ಈ ಪ್ರಕರಣ ಮುಗಿದ ಅಧ್ಯಾಯ. ಹೀಗಾಗಿ ಈಗ ವಿಚಾರಣೆಗೆ ಕರೆದಿರುವುದೇ ತಪ್ಪು. ಕೇವಲ ಕಾಂಗ್ರೆಸ್ ನಾಯಕರ ವಿರುದ್ಧದ ಪ್ರಕರಣದ ವಿಚಾರಣೆ ಮಾತ್ರ ಯಾಕೆ? ಬೇರೆ ಪ್ರಕರಣಗಳ ವಿಚಾರಣೆ ಯಾಕಿಲ್ಲ?’ ಎಂದು ಪ್ರಶ್ನಿಸಿದರು.

ಗಾಂಧಿ ಕುಟುಂಬದವರು ಕಾನೂನಿಗೆ ಅತೀತರೇ ಎಂಬ ಬಿಜೆಪಿ ವಾದದ ಕುರಿತು ಕೇಳಿದ ಪ್ರಶ್ನೆಗೆ, ‘ಇದು ಆದಾಯ ತೆರಿಗೆ ಇಲಾಖೆ ವಿಚಾರವೇ ಹೊರತು, ಇದರಲ್ಲಿ ಹಣಕಾಸು ಅವ್ಯವಹಾರ ಏನಿದೆ? ಹಣ ಸಿಕ್ಕಿದೆಯೇ?’ ಎಂದು ಕೇಳಿದರು.

ರಾಹುಲ್ ಗಾಂಧಿ ಅವರ ಘನತೆ ಹೆಚ್ಚಿಸಲು ಈ ಹೋರಾಟ ಮಾಡುತ್ತಿದೆಯೇ ಎಂಬ ಪ್ರಶ್ನೆಗೆ, ‘ರಾಹುಲ್ ಗಾಂಧಿ ಅವರು ಈ ದೇಶ ಒಂದು ಮಾಡಲು ಭಾರತ್ ಜೋಡೋ ಯಾತ್ರೆ ಮಾಡಲು ಹೊರಟಿದ್ದಾರೆ. ಅದು ನಡೆದರೆ ಪಕ್ಷಕ್ಕೆ ಶಕ್ತಿ ಬರಲಿದೆ. ಹೀಗಾಗಿ ಇದನ್ನು ತಡೆಯಲು ಈ ರೀತಿ ಮಾಡುತ್ತಿದ್ದಾರೆ. ಉದಯಪುರ ಸಭೆಯಲ್ಲಿ ನಾವು ಈ ಘೋಷಣೆ ಮಾಡುತ್ತಿದ್ದಂತೆ, ಅವರ ಘನತೆಗೆ ಮಸಿ ಬಳಿಯಲು, ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸಲು ಸರ್ಕಾರ ಈ ಪ್ರಯತ್ನ ಮಾಡುತ್ತಿದೆ ಎಂದು ಉತ್ತರಿಸಿದರು.

ಮಹಾರಾಷ್ಟ್ರ ರಾಜಕೀಯ ಬೆಳವಣಿಗೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ’10 ಶಾಸಕರು ಸೂರತ್ ನಲ್ಲಿ ಇದ್ದಾರೆ ಎಂದು ಯಾರೋ ಕರೆ ಮಾಡಿ ಹೇಳಿದ್ದಾರೆ. ಆದರೆ ನನಗೆ ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನಾನು ಮಹಾರಾಷ್ಟ್ರದ ಉಸ್ತುವಾರಿಯೂ ಅಲ್ಲ. ನಾನು ಕರ್ನಾಟಕದಲ್ಲಿ ಪಕ್ಷದ ಅಧ್ಯಕ್ಷನಾಗಿದ್ದು, ರಾಜ್ಯಕ್ಕೆ ಸಂಬಂಧಿಸಿದ ವಿಚಾರ ಇದ್ದರೆ ಆ ಬಗ್ಗೆ ಮಾತ್ರ ಮಾತನಾಡುತ್ತೇನೆ’ ಎಂದು ಉತ್ತರಿಸಿದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.