ಬಾಲಕಾರ್ಮಿಕತೆ ನಿರ್ಮೂಲನೆಗೆ ಪಣ ತೊಡಿ: ಸುಷ್ಮಾ

ಬಾಲ್ಯವೆಂಬುದು ಜೀವನದ ಅತ್ಯಮೂಲ್ಯ ಘಟ್ಟ ; ಸರಕಾರಿ ಸಾಮಾಜಿಕ ರಕ್ಷಾ ವ್ಯವಸ್ಥೆಗಳ ಅಗತ್ಯತೆ

Team Udayavani, Jun 24, 2022, 10:51 AM IST

6

ರಬಕವಿ-ಬನಹಟ್ಟಿ: ಬಡತನ ಮತ್ತು ದುರ್ಬಲತೆ ವಿರುದ್ಧ ಹೋರಾಡಲು ಮತ್ತು ಬಾಲ ಕಾರ್ಮಿಕತೆ ನಿರ್ಮೂಲನೆ ಮಾಡಲು ಸರಕಾರಿ ಸಾಮಾಜಿಕ ರಕ್ಷಾ ವ್ಯವಸ್ಥೆಗಳು ಅತ್ಯಗತ್ಯ ಎಂದು ಬನಹಟ್ಟಿಯ ದಿವಾಣಿ ನ್ಯಾಯಾಧಿಧೀಶರಾದ ಸುಷ್ಮಾ ಟಿ.ಸಿ. ಹೇಳಿದರು.

ಚಿಮ್ಮಡ ಗ್ರಾಮದ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಮಾದರಿ ಶಾಲಾ ಸಭಾ ಭವನದಲ್ಲಿ ಜಿಪಂ., ತಾಪಂ ಹಾಗೂ ಚಿಮ್ಮಡ ಗ್ರಾಮ ಪಂಚಾಯಿತಿ ಅಶ್ರಯದಲ್ಲಿ ನಡೆದ ಮಕ್ಕಳ ವಿಶೇಷ ಗ್ರಾಮ ಸಭೆ, ವಿಶ್ವಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾದರು.

ಬಾಲ್ಯವೆಂಬುದು ಪ್ರತಿಯೊಬ್ಬರ ಜೀವನದ ಅತ್ಯಮೂಲ್ಯ ಘಟ್ಟವಾಗಿದೆ. ಬಾಲ್ಯದ ಘಟನಾವಳಿಗಳನ್ನು ಜೀವನಪರ್ಯಂತ ಮರೆಯಲು ಸಾಧ್ಯವಿಲ್ಲ. ಮಕ್ಕಳು ಬಾಲ್ಯವನ್ನು ಸಂತಸದಿಂದ ಕಳೆಯಬೇಕು. ಶಿಕ್ಷಣ ಪಡೆದು ಬೆಳೆದು, ಸಾಧಕರಾಗಿ ಹೊರಹೊಮ್ಮಬೇಕು ಎಂದರು.

ಗ್ರಾಮದ 16ಶಾಲೆಗಳ ಮಕ್ಕಳ ಧ್ವನಿ ಪೆಟ್ಟಿಗೆಯನ್ನು ರಬಕವಿ-ಬನಹಟ್ಟಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಂಜಯ ಹಿಪ್ಪರಗಿ ಉದ್ಘಾಟಿಸಿ, ಪೆಟ್ಟಿಗೆಯಲ್ಲಿದ್ದ ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಿದರು. ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು. ಗ್ರಾಮ ಪಂಚಾಯಿತಿಯಿಂದ ಶಾಲೆಗಳಿಗೆ ಅವಶ್ಯಕ ಸೌಲಭ್ಯಗಳನ್ನು ಒದಗಿಸುವುದಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆನಂದ ಕವಟಿ ಭರವಸೆ ನೀಡಿದರು.

ಬನಹಟ್ಟಿ ಠಾಣಾಧಿಕಾರಿ ಸುರೇಶ ಮಂಟೂರ ಮಾತನಾಡಿ, ಮಕ್ಕಳ ಹಕ್ಕುಗಳು, ರಕ್ಷಣೆ, ಜವಾಬ್ದಾರಿ ಕುರಿತು ಮಾತನಾಡಿದರು. ಬನಹಟ್ಟಿಯ ಸಹಾಯಕ ಸರಕಾರಿ ಅಭಿಯೋಜಕ ಮಹಾಂತೇಶ ಮಸಳಿ ಮಾತನಾಡಿದರು. ವಿದ್ಯಾರ್ಥಿನಿ ಸುಪ್ರಿಯಾ ಎಂ. ಬಡಿಗೇರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಮಿಕ ನಿರೀಕ್ಷಕರಾದ ಪಿ.ವ್ಹಿ.ಮಾವರ್ಕರ್‌ ಉಪನ್ಯಾಸ ನೀಡಿದರು.

ವಕೀಲರ ಸಂಘದ ಅಧ್ಯಕ್ಷ ಶ್ರೀಕಾಂತ ಕುಲಕರ್ಣಿ, ಉಪಾಧ್ಯಕ್ಷ ರಾಜು ಗೂಗಾಡ, ನ್ಯಾಯವಾದಿ ಪವನ ಢವಳೇಶ್ವರ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಭಾರತಿ ಬರಗಲ್ಲ, ಅಭಿವೃದ್ಧಿ ಅಧಿ ಕಾರಿ ಸಂಗಮೇಶ ಸೋರಗಾಂವಿ, ತೇರದಾಳ ಕಂದಾಯ ನಿರೀಕ್ಷಕ ಪಿ.ಆರ್‌. ಮಠಪತಿ, ವಿದ್ಯಾರ್ಥಿನಿ ರಶ್ಮಿ ಶೇಖರ ದಡೂತಿ ವೇದಿಕೆಯಲ್ಲಿದ್ದರು.

ಶಿಕ್ಷಣ ಸಂಯೋಜಕ ಎಸ್‌.ಬಿ.ಬುರ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಬನಶಂಕರಿ ಜನಪದ ಸಂಪ್ರದಾಯ ಕಲಾ ಸಂಘ ಕೆರೂರ ಇವರಿಂದ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಜಾಗೃತಿ ಮೂಡಿಸುವ ಕಿರುನಾಟಕ ಪ್ರದರ್ಶಿಸಿದರು. ಸಹನಾ ಉಪ್ಪಲದಿನ್ನಿ, ಸಹನಾ ಯರಗಟ್ಟಿಕರ ಪ್ರಾರ್ಥಿಸಿದರು. ಸಿಆರ್‌ಪಿ ದಾಕ್ಷಾಯಣಿ ಮಂಡಿ ಸ್ವಾಗತಿಸಿದರು. ಮಂಜುಳಾ ಹನಗಂಡಿ ನಿರೂಪಿಸಿದರು. ಶಿಕ್ಷಕ ಮ.ಕೃ. ಮೇಗಾಡಿ ವಂದಿಸಿದರು.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.