ರಾಕ್ಷಸಿ ಕೃತ್ಯ :ಮೂಡಲಗಿಯ ಹಳ್ಳದಲ್ಲಿ ಎಸೆದ ಏಳು ಭ್ರೂಣಗಳ ಪತ್ತೆ

ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ?? ಬೆಳಗಾವಿ ಜನರನ್ನು ಬೆಚ್ಚಿಬೀಳುವಂತೆ ಮಾಡಿದ ಘಟನೆ

Team Udayavani, Jun 24, 2022, 7:15 PM IST

1-FDSSAD

ಮೂಡಲಗಿ: ರಾಕ್ಷಸಿ ಕೃತ್ಯವೊಂದು ಪಟ್ಟಣದಲ್ಲಿ ಶುಕ್ರವಾರದಂದು ಬೆಳಕಿಗೆ ಬಂದಿದ್ದು, ಹಳ್ಳದಲ್ಲಿ ಪತ್ತೆಯಾಗಿದ್ದು ಒಂದಲ್ಲ, ಎರಡರಲ್ಲ, ಏಳು ಭ್ರೂಣಗಳ ಪತ್ತೆಯಾಗಿದ್ದು, ಇಡೀ ಬೆಳಗಾವಿ ಜಿಲ್ಲೆ ಜನರನ್ನೇ ಬೆಚ್ಚಿಬೀಳುವಂತೆ ಮಾಡಿದೆ. ಭ್ರೂಣಗಳ ಹತ್ಯೆಗೈದವರು ಯಾರು? ಹಳ್ಳದಲ್ಲಿ ಎಸೆದವರು ಯಾರು? ಎಂಬುದೇ ನಿಗೂಢವಾಗಿದೆ.

ಮೂಡಲಗಿ ಪಟ್ಟಣದ ಬಸ್ ನಿಲ್ದಾಣ ಹತ್ತಿರದ ಹಳ್ಳದಲ್ಲಿ 7 ಭ್ರೂಣಗಳು ಐದು ಡಬ್ಬಗಳಲ್ಲಿ ಪತ್ತೆಯಾಗಿವೆ. ಇದನ್ನು ಗಮನಿಸಿದ ಸ್ಥಳೀಯರು ಮೂಡಲಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಭ್ರೂಣಗಳನ್ನು ಹಳ್ಳದಿಂದ ಹೊರತೆಗೆದು ಸ್ಥಳೀಯ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಸ್ಥಳೀಯ ಆರೋಗ್ಯಾಧಿಕಾರಿಗಳು, ಮೂಡಲಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನಾ ಸ್ಥಳಕ್ಕೆ ಬೆಳಗಾವಿಯ ಡಿಹೆಚ್‌ಒ ಡಾ.ಮಹೇಶ್ ಕೋಣಿ ದೌಡಾಯಿಸಿ, ಇನ್ನು ಪ್ರಕರಣ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೂಡಲಗಿ ಪಟ್ಟಣದ ಸೇತುವೆ ಕೆಳಗೆ ಐದು ಡಬ್ಬಿಯಲ್ಲಿ ಏಳು ಭ್ರೂಣಗಳು ಪತ್ತೆಯಾಗಿವೆ. ಸ್ಥಳೀಯ ಆರೋಗ್ಯಾಧಿಕಾರಿಗಳನ್ನು ಸ್ಥಳಕ್ಕೆ ಭೇಟಿ ನೀಡಿದ್ದು, ಪುರಸಭೆಯವ ಕಡೆಯಿಂದ ಪೊಲೀಸರಿಗೆ ದೂರು ನೀಡಲಾಗುವುದು. ಶುಕ್ರವಾರ ಬೆಳಗ್ಗೆ 10.30 ಕ್ಕೆ ನಮಗೆ ಗೊತ್ತಾದ ಮೇಲೆ ಸ್ಥಳಕ್ಕೆ ಸಿಬ್ಬಂದಿಗಳನ್ನು ಕಳುಹಿಸಿದೆ ಎಂದರು.

ಇದು ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಎಂದು ಹೇಳಬಹುದು. ಫೋಟೋ ನೋಡಿದ್ರೆ ಪತ್ತೆಯಾದ ಭ್ರೂಣಗಳು ಐದು ತಿಂಗಳು ತುಂಬಿದ ಹಾಗೇ ಕಾಣುತ್ತಿದೆ. ಈಗಾಗಲೇ ಸ್ಥಳೀಯ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಕೇಸ್ ದಾಖಲಾದ ಬಳಿಕ ಅವುಗಳನ್ನ ಬೆಳಗಾವಿಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ತಂದು ಪರೀಕ್ಷೆ ನಡೆಸಲಾಗುವುದು. ಇದನ್ನ ಯಾರು ಮಾಡಿದ್ದಾರೆ, ಎಲ್ಲಿಂದ ಬಂದಿದ್ದು ಎಂಬ ಬಗ್ಗೆ ತನಿಖೆ ಮಾಡಲಾಗುವುದು. ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಒಂದು ತನಿಖಾ ತಂಡ ರಚನೆ ಮಾಡುತ್ತೇವೆ’ ಎಂದು ತಿಳಿಸಿದ್ದಾರೆ.

ಒಟ್ಟಾರೆಯಾಗಿ ಪಟ್ಟಣದಲ್ಲಿ ಏಳು ಭ್ರೂಣಲಿಂಗಳು ಪತ್ತೆಯಾದ ಸುದ್ದಿ ಹರಡುತ್ತಿದ್ದಂತೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಶಿಕ್ಷಾರ್ಹ ಅಪರಾಧವಾಗಿದ್ದರೂ ಈ ರೀತಿ ಒಂದೇ ಸ್ಥಳದಲ್ಲಿ ಏಳು ಭ್ರೂಣಗಳು ಪತ್ತೆಯಾಗಿದ್ದು ಇಡೀ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ. ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ ಪೊಲೀಸರ ಸಹಾಯದೊಂದಿಗೆ ಆರೋಪಿಗಳ ಪತ್ತೆಗೆ ಬಲೆ ಬೀಸಿದೆ.

ಮೂಡಲಗಿ ಪಟ್ಟಣದ ಬಸ್ ನಿಲ್ದಾಣದ ಬಳಿಯಲ್ಲಿ ಇರುವ ಹಳ್ಳಿ ಶುಕ್ರವಾರ ಪತ್ತೆಯಾದ ಏಳು ಭ್ರೂಣಗಳನ್ನು ಎಸೆದಿರುವ ಸಂಗತಿಯು ನನ್ನ ಗಮನಕ್ಕೆ ಬಂದಿದೆ. ಇದು ಹೀನ ಕೃತ್ಯವಾಗಿದ್ದು, ಸಮಾಜ ತಲೆ ತಗ್ಗಿಸುವಂತ ಸಂಗತಿಯಾಗಿದ್ದು, ಕಾನೂನು ಬಾಹಿರವಾಗಿ ಮಾಡಿರುವ ವ್ಯಕ್ತಿಗಳನ್ನು ಗುರುತಿಸಲು ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿರುವೆ. ಈ ತರಹ ಮತ್ತೆ ನಡೆಯದಂತೆ ಆರೋಗ್ಯ ಇಲಾಖೆಯವರು ಕಟ್ಟೆಚ್ಚರ ವಹಿಸಬೇಕು ಎಂದು ಸೂಚಿಸಿರುವೆ.

ಬಾಲಚಂದ್ರ ಜಾರಕಿಹೊಳಿ, ಕೆಎಮ್‌ಎಫ್ ಅಧ್ಯಕ್ಷ, ಅರಭಾವಿ ಶಾಸಕ

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.