ಚಿತ್ರದುರ್ಗ: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಬೆದರಿಸಿ ಮದುವೆಯಾದವನಿಂದಲೇ ಕೃತ್ಯ
Team Udayavani, Jun 26, 2022, 2:12 PM IST
ಚಿತ್ರದುರ್ಗ: ಅಪ್ರಾಪ್ತ ಬಾಲಕಿ ಮೇಲೆ ನಾಲ್ವರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರ್ಷದ ಹಿಂದೆ ಬಾಲಕಿಯನ್ನು ಬೆದರಿಸಿ ಬಲವಂತವಾಗಿ ಮದುವೆಯಾಗಿದ್ದ ಯುವಕ ಹಾಗೂ ಮೂವರು ಸ್ನೇಹಿತರು ಜೂನ್ 7ರಂದು ನಗರದ ಹೊರವಲಯಕ್ಕೆ ಬಾಲಕಿಯನ್ನು ಕರೆದೊಯ್ದು ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದರು. ಕೃತ್ಯದ ಬಗ್ಗೆ ದೂರು ನೀಡದಂತೆ ಬಾಲಕಿಗೆ ಕೊಲೆ ಬೆದರಿಕೆ ಹಾಕಿ, ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆದಿತ್ತು ಎಂದು ದೂರಿನಲ್ಲಿ ಹೇಳಲಾಗಿದೆ.
ವರ್ಷದ ಹಿಂದೆ ತನ್ನನು ಬೆದರಿಸಿ ಮದುವೆಯಾಗಿದ್ದ ವ್ಯಕ್ತಿ ,ಮದುವೆಯ ಬಳಿಕ ಶೀಲ ಶಂಕಿಸಿ ಆಗಾಗ ಗಲಾಟೆ ಮಾಡುತ್ತಿದ್ದ. ಜೂ. 7 ರಂದು ಸ್ನೇಹಿತರ ಜತೆಗೂಡಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾಳೆ.
ಈ ಕುರಿತು ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
MUST WATCH
ಹೊಸ ಸೇರ್ಪಡೆ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ
Belagavi: ಗಡಿ ಹೋರಾಟದಲ್ಲಿ ಯಶಸ್ವಿಯಾಗಲು ಒಂದಾಗಿ: ಮನೋಜ್ ಜರಾಂಗೆ ಪಾಟೀಲ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ