ಪಕ್ಷಾಂತರ ನಿಷೇಧ ಕಾಯ್ದೆಗೆ ಇನ್ನಷ್ಟು ತಿದ್ದುಪಡಿ ಅಗತ್ಯ: ಖರ್ಗೆ

ಪಕ್ಷಾಂತರಿಗಳಿಗೆ ತಕ್ಕಶಾಸ್ತಿ ಮಾಡಲು ರಾಜಕೀಯ ಪಕ್ಷಗಳು ಒಗ್ಗಟ್ಟಾಗಬೇಕು

Team Udayavani, Jul 1, 2022, 6:49 PM IST

Kharge

ಕಲಬುರಗಿ: ದೇಶದಲ್ಲಿ ಪಕ್ಷಾಂತರ ನಿಷೇಧ ಕಾಯ್ದೆಗೆ ಇನ್ನಷ್ಟು ತಿದ್ದುಪಡಿ ತರುವುದು ಅಗತ್ಯವಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತಂದು ಪಕ್ಷಾಂತರಿಗಳಿಗೆ ತಕ್ಕಶಾಸ್ತಿ ದೊರಕುವಂತಾಗಲು ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದರು.

ಒಂದು ವೇಳೆ ಯಾರೇ ಪಕ್ಷ ಬಿಡುವುದಾದ್ರೆ , ಬೇರೆ ಪಕ್ಷಕ್ಕೆ ತಗೋಬಾರದು, ಐದು ವರ್ಷ ಸ್ಪರ್ಧಿಸುವ ಅವಕಾಶ ನೀಡಬಾರದು. ಅಂದಾಗ ಮಾತ್ರ ಬುದ್ದಿ ಕಲಿತಾರೆ.‌ ಇಲ್ಲದಿದ್ರೆ ಇದೇ ರೀತಿ ಮಾಡಕೊಂತ ಹೋದ್ರೆ ದೇಶದ ಗತಿ ಏನು ಎಂಬುದೇ ತಿಳಿಯುತ್ತಿಲ್ಲ. ಈ ವಿಷಯದ ಬಗ್ಗೆ ಸಂದರ್ಭ ಬಂದಾಗ ಲೋಕಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸುತ್ತೇನೆ ಎಂದು ಖರ್ಗೆ ತಿಳಿಸಿದರು.

ಮಹಾರಾಷ್ಟ್ರದಲ್ಲಿ ಶಿವಸೇನೆ ನಮ್ಮ ಮೈತ್ರಿ ಸರಕಾರ ಬಂದಾಗಿನಿಂದ ಬೀಳಿಸುವ ಪ್ರಯತ್ನ ನಡೆಯುತ್ತಲೇ ಬಂದಿವೆ. ಅದರಲ್ಲೂ ಬಿಜೆಪಿಯಿಂದ ಒಂದು ಹವ್ಯಾಸವಾಗಿ ಬಿಟ್ಡಿದೆ. ಏನಾದರು ಮಾಡಿ ನಡೆಯೋ ಸರ್ಕಾರ ಉರುಳಿಸುವುದೇ ಆಗಿದೆ.ಸಿಂಧೆಯನ್ನು ಸಿಎಂ ಮಾಡಿದ್ದು ಪೂರ್ವ ನಿಯೋಜಿತ ಯೋಜನೆಯಾಗಿದೆ.‌ ಅವರ ಸರಕಾರ ಬೀಳಿದಿ ನಿಮ್ಮನ್ನೆ ಸಿಎಂ ಮಾಡ್ತಿವಿ ಅಂತ ಹೇಳಿದ್ರು ಅನ್ನಿಸುತ್ತದೆಯಲ್ಲದೇ
ಮಹಾರಾಷ್ಟ್ರದಲ್ಲಿ ಬಿಜೆಪಿ ಕುತಂತ್ರದಿಂದ ಅಧಿಕಾರ ಕಿತ್ತುಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಪಕ್ಷವು ಕರ್ನಾಟಕ, ಮಧ್ಯಪ್ರದೇಶ, ಮಣಿಪುರ್, ಗೋವಾದಲ್ಲಿಯೂ ಸಹ ಬಿಜೆಪಿ ಇದೇ ರೀತಿ ಅಧಿಕಾರ ಕಿತ್ತುಕೊಂಡಿದೆ. ನಾವು ಅಧಿಕಾರ ಕಳೆದುಕೊಂಡಿದ್ದು ಜನರಿಂದ ಅಲ್ಲ. ಅಧಿಕಾರ ಮತ್ತು ಹಣ ಬಲದಿಂದ ಬಿಜೆಪಿ ಈ ರೀತಿ ಮಾಡುತ್ತಿದೆ.‌ ಒಟ್ಟಾರೆ ಇಂತಹ ನಡೆಯು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಪೆಟ್ಟು. ಲೋಕಸಭೆಯಲ್ಲಿ 330 ಸೀಟು ಗೆದ್ರು, ಅನೇಕ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ರೂ ಮೋದಿಗೆ ತೃಪ್ತಿ ಇಲ್ಲ ಎಂದು ಖರ್ಗೆ ಟೀಕಿಸಿದರು.

ರಾಜಸ್ಥಾನದಲ್ಲಿ ಕನ್ಹಯ್ಯಲಾಲ್ ಹತ್ಯೆ ಪ್ರಕರಣ: ರಾಜಸ್ತಾನದಲ್ಲಿನ ಟ್ರೈಲರ್ ಹತ್ಯೆ ಘಟನೆ ನಾವೆಲ್ಲರೂ ತೀವ್ರವಾಗಿ ಖಂಡಿಸಿದ್ದೇವೆ. ಯಾರೇ ತಪ್ಪು ಮಾಡಲಿ, ಯಾವ ಪಂಗಡದವನೆ ಆಗಿರಲಿ.. ಅವರಿಗೆ ಕಾನೂನಿನ ಪ್ರಕಾರ ಶಿಕ್ಷೆ ಕೊಡಲೆಬೇಕು.‌ ಘಟನೆ ನಂತರ ಅಲ್ಲಿಯ ಸಿಎಂ ಆರೋಪಿಗಳನ್ನ ತಕ್ಷಣ ಬಂಧಿಸಲು ಕ್ರಮ ಕೈಗೊಂಡಿದ್ದಾರೆ. ಜೊತೆಗೆ ಸಿಎಂ ಕೊಲೆಯಾದ ವ್ಯಕ್ತಿ ಮನೆಗೆ ಹೋಗಿ ಸಾಂತ್ವನ ಹೇಳಿದ್ದಾರೆ. ಹೀಗಾಗಿ ಅಲ್ಲಿನ ಸರಕಾರ ವಜಾ ಮಾಡುವ ಅವಶ್ಯಕತೆ ಇಲ್ಲ. ಹತ್ಯೆಗೆ ಸಂಬಂಧಿಸಿದ ಈಗಾಗಲೇ ಉನ್ನತಮಟ್ಟದ ತನಿಖೆಗೆ ಆದೇಶಿಸಲಾಗಿದೆ. ಆರೋಪಿಗಳು ಪಾಕಿಸ್ಥಾನದ ಜೊತೆ ನಂಟಿದೆ ಎಂಬ ಬಿಜೆಪಿ ಆರೋಪದ ಮೂಲಕ ರಾಜಕೀಯ ಮಾಡಲು ಹೊರಟಿದೆ. ಉತ್ತರ ಪ್ರದೇಶದಲ್ಲಿ ಎಷ್ಟೋ ಘಟನೆಗಳು ನಡೆದಿವೆ. ಅಲ್ಲಿನ ಸರಕಾರ ವಜಾ ಮಾಡಲಾಗಿದೆಯೇ?. ಧರ್ಮದ ಹೆಸರಿನಲ್ಲಿನ ಸಂಘರ್ಷ ಬಿಟ್ಟು ಶಾಂತಿಯಿಂದ ಇರುವಂತೆ ಮಾತಾಡಿ ಎಂದು ಪ್ರಧಾನಿ ಮೋದಿಗೆ ಹೇಳಿದರೆ ಬಾಯಿನೇ ತೆರೆಯಂಗಿಲ್ಲ. ಕಾಂಗ್ರೆಸ್ ಬಗ್ಗೆ ವಿದೇಶದಲ್ಲಿ ಪ್ರಧಾನಿ ಮೋದಿ ಮಾತಾಡ್ತಾರೆ. ಅದೇ ಬೇರೆಯವರು ಮಾತಾಡಿದ್ರೆ ದೇಶಕ್ಕೆ ಅವಮಾನ ಆಯ್ತು ಅಂತಾರೆ. ಹೀಗಾದರೆ ಹೇಗೆ? ಎಂದು ಖರ್ಗೆ ಪ್ರಶ್ನಿಸಿದರು.

ಮಾಜಿ ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.