ಸಂಶೋಧಕ ಯೋಧರು ಅಗತ್ಯ; ಎನ್‌.ಆರ್‌.ನಾರಾಯಣಮೂರ್ತಿ ಸಲಹೆ

ಉತ್ತಮ ಸಮಾಜ ನಿರ್ಮಾಣಕ್ಕೆ ಹೊಸ ಸಂಶೋಧನೆಗಳನ್ನು ನಡೆಸುವ ಕೆಲಸ ಮಾಡಲಾಗುತ್ತದೆ

Team Udayavani, Jul 15, 2022, 1:26 PM IST

ಸಂಶೋಧಕ ಯೋಧರು ಅಗತ್ಯ; ಎನ್‌.ಆರ್‌.ನಾರಾಯಣಮೂರ್ತಿ ಸಲಹೆ

ಬೆಂಗಳೂರು: ದೇಶದ ಪ್ರಗತಿ ಎಂದರೆ ಶ್ರೀಮಂತರ ಪಟ್ಟಿಗೆ ಸೇರುವುದಲ್ಲ. ದುರ್ಬಲ ವರ್ಗದ ಜನರಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸುವುದಾಗಿದೆ. ಈ ನಿಟ್ಟಿನಲ್ಲಿ ನಮ್ಮ ಬದ್ಧತೆ ತೋರಬೇಕಿದೆ ಎಂದು ಇನ್ಫೋಸಿಸ್‌ ಸಂಸ್ಥಾಪಕ ಎನ್‌.ಆರ್‌. ನಾರಾಯಣಮೂರ್ತಿ ಸಲಹೆ ನೀಡಿದರು.

ಜಯನಗರದ ಸೌತ್‌ ಎಂಡ್‌ ವೃತ್ತದಲ್ಲಿ ಇನ್ಫೋಸಿಸ್‌ ವಿಜ್ಞಾನ ಪ್ರತಿಷ್ಠಾನದ (ಐಎಸ್‌ಎಫ್) ನೂತನ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ದೇಶವು ಎದುರಿಸುತ್ತಿರುವ ದೊಡ್ಡ ದೊಡ್ಡ ಸಮಸ್ಯೆಗಳ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಸಂಶೋಧಕ ಯೋಧರನ್ನು ಗುರುತಿಸಬೇಕಾಗಿದೆ ಎಂದರು.

ದೇಶವು ವಿಜ್ಞಾನ ಮತ್ತು ಎಂಜಿನಿಯರಿಂಗ್‌ ಕ್ಷೇತ್ರಗಳಲ್ಲಿ ಉತ್ತಮ ಪ್ರಗತಿ ಸಾಧಿಸುತ್ತಿದೆ. ನಾವು ರಾಕೆಟ್‌ ಮತ್ತು ಉಪಗ್ರಹಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಿದ್ದೇವೆ. ಉಕ್ಕಿನ ಸ್ಥಾವರಗಳು, ವಿದ್ಯುತ್‌ ಸ್ಥಾವರಗಳು ಮತ್ತು ಬೃಹತ್‌ ಅಣೆಕಟ್ಟುಗಳನ್ನು ನಿರ್ಮಿಸಿದ್ದೇವೆ. ಕೊರೊನಾ ಲಸಿಕೆ ತಯಾರಿಸಿದ್ದೇವೆ, ಹೃದಯ ಮತ್ತು ಮೂತ್ರಪಿಂಡ ಕಸಿ ಮಾಡುತ್ತೇವೆ. ಆದರೂ, ದೇಶದ 140 ಕೋಟಿ ಭಾರತೀಯರಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ, ಆರೋಗ್ಯ, ಪೋಷಣೆ ಮತ್ತು ಆಶ್ರಯದ ದೊಡ್ಡ ಸಮಸ್ಯೆಗಳನ್ನು ಪರಿಹರಿಸುವ ವಿಚಾರದಲ್ಲಿ ಸಾಕಷ್ಟು ದೂರದಲ್ಲಿದ್ದೇವೆ ಎಂದರು.

ಐಎಸ್‌ಎಫ್ ಟ್ರಸ್ಟಿ ಕ್ರಿಶ್‌ ಗೋಪಾಲಕೃಷ್ಣ ಮಾತನಾಡಿ, ಬೆಂಗಳೂರು, ಕರ್ನಾಟಕ ಮತ್ತು ಭವಿಷ್ಯದ ಭಾರತವನ್ನು ಕುರಿತು ಕೆಲಸ ಮಾಡಲಾಗುತ್ತದೆ. ಇದಕ್ಕಾಗಿ ಕಾಲೇಜುಗಳು, ನವೋದ್ಯಮಗಳು, ವಿಶ್ವವಿದ್ಯಾಲಯಗಳೊಂದಿಗೆ ಸಹಯೋಗ ಹೊಂದುವ ಮೂಲಕ ಉತ್ತಮ ಪರಿಸರ ಮತ್ತು ಉತ್ತಮ ಸಮಾಜ ನಿರ್ಮಾಣಕ್ಕೆ ಹೊಸ ಸಂಶೋಧನೆಗಳನ್ನು ನಡೆಸುವ ಕೆಲಸ ಮಾಡಲಾಗುತ್ತದೆ ಎಂದು ಹೇಳಿದರು.

ಇದೇ ವೇಳೆ ಎಂಜಿನಿಯರಿಂಗ್‌ ಮುಗಿಸಿ ಸಂಶೋಧನೆಗಳಲ್ಲಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳು ಆವಿಷ್ಕರಿಸಿರುವ ಪ್ರಯೋಗಗಳನ್ನು ಪ್ರಸ್ತುತಪಡಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಟ್ರಸ್ಟಿಗಳಾದ ಮೋಹನ್‌ದಾಸ್‌ ಪೈ, ನಂದನ್‌ ನಿಲೇಕಣಿ, ಬಾಟ್ನಿ, ಕೆ. ದಿನೇಶ್‌ ಹಾಗೂ ಎಸ್‌.ಡಿ. ಶಿಬುಲಾಲ್‌ ಉಪಸ್ಥಿತರಿದ್ದರು.

ಐಎಸ್‌ಎಫ್ ನ 25ನೇ ವರ್ಷಾಚರಣೆಗೆ ಸಿದ್ಧತೆ

2006ರಲ್ಲಿ ಇನ್ಫೋಸಿಸ್‌ ವಿಜ್ಞಾನ ಪ್ರತಿಷ್ಠಾನ(ಐಎಸ್‌ಎಫ್) ವನ್ನು ಸ್ಥಾಪಿಸಿದ್ದು, ಅದರ 25ನೇ ವರ್ಷಾಚರಣೆಯನ್ನು ಸ್ಮರಣೀಯವಾಗಿಸಲು ಬಯಸಿದ್ದೇವೆ. ವಿಜ್ಞಾನ ಮತ್ತು ಎಂಜಿನಿಯರಿಂಗ್‌ ಕ್ಷೇತ್ರಗಳಿಗೆ ಕೊಡುಗೆ ನೀಡಲು ಗಮನ ಹರಿಸಲಾಗುತ್ತಿದೆ. ವಿಜ್ಞಾನ, ಗಣಿತ ಮತ್ತು ಎಂಜಿನಿಯರಿಂಗ್‌ ಸಂಶೋಧಕರನ್ನು ಪೋ›ತ್ಸಾಹಿಸಿ ಸಂಶೋಧನೆಯನ್ನು ವೃತ್ತಿ ಜೀವನವಾಗಿ ಆಯ್ಕೆ ಮಾಡಿಕೊಳ್ಳುವ ಯುವಕರಿಗೆ ವೇದಿಕೆ ಕಲ್ಪಿಸಲಾಗುತ್ತದೆ ಎಂದು ಎನ್‌.ಆರ್‌. ನಾರಾಯಣ
ಮೂರ್ತಿ ತಿಳಿಸಿದರು.

ಟಾಪ್ ನ್ಯೂಸ್

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

6

Bengaluru: ಬಕ್ರೀದ್‌ ನಿಮಿತ್ತ ನಾಳೆ ಹಲವೆಡೆ ಸಂಚಾರ ನಿರ್ಬಂಧ

5

Bengaluru City: ಬೆಂಗಳೂರು ವಿಭಜನೆ ಅಲ್ಲ, ವಿಸ್ತಾರಕ್ಕೆ ಶಿಫಾರಸು

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

3

Annapurneshwari Police station: ಠಾಣೆಗೆ ಶಾಮಿಯಾನ ಹಾಕಿರುವ ಕುರಿತು ಸಾರ್ವಜನಿಕರ ಆಕ್ರೋಶ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-aasdsadsa-dad

Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.