ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ನಿಷೇಧ: ತಡರಾತ್ರಿ ಆದೇಶ ಹಿಂಪಡೆದ ಸರ್ಕಾರ
Team Udayavani, Jul 16, 2022, 7:35 AM IST
ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ಮತ್ತು ವಿಡಿಯೋ ತೆಗೆಯುವಂತಿಲ್ಲ ಎಂಬ ಆದೇಶವನ್ನು ತಡರಾತ್ರಿ ಸರ್ಕಾರ ಹಿಂಪಡೆದಿದೆ.
ಸರಕಾರಿ ಕಚೇರಿಗೆ ಭೇಟಿ ನೀಡುವ ಸಾರ್ವಜನಿಕರು, ಖಾಸಗಿ ವ್ಯಕ್ತಿಗಳು ಅನುಮತಿ ಇಲ್ಲದೇ ಮೊಬೈಲ್ ನಲ್ಲಿ ವಿಡಿಯೋ ಚಿತ್ರಿಕರಣ ಮಾಡುವಂತಿಲ್ಲ ಎಂದು ಶುಕ್ರವಾರ ಆದೇಶ ಹೊರಡಿಸಲಾಗಿತ್ತು.
ಇದಕ್ಕೆ ಸಂಬಂಧಿಸಿದಂತೆ ಹಲವಾರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಶುಕ್ರವಾರ ತಡರಾತ್ರಿ ಸರ್ಕಾರ ಆದೇಶ ಹಿಂಪಡೆದಿದೆ.