ಜಮ್ಮು- ಕಾಶ್ಮೀರದಲ್ಲಿ ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟ: ಇಬ್ಬರು ಸೇನಾಧಿಕಾರಿಗಳು ಬಲಿ
Team Udayavani, Jul 18, 2022, 10:17 AM IST
ಜಮ್ಮು- ಕಾಶ್ಮೀರ: ಇಲ್ಲಿನ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟಗೊಂಡು ಸೇನಾ ಕ್ಯಾಪ್ಟನ್ ಮತ್ತು ಜೂನಿಯರ್ ಕಮಿಷನ್ಡ್ ಅಧಿಕಾರಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಭಾನುವಾರ ತಡರಾತ್ರಿ ಪೂಂಚ್ನ ಮೆಂಧರ್ ಸೆಕ್ಟರ್ನಲ್ಲಿ ಘಟನೆ ನಡೆದಿದ್ದು, ಇಬ್ಬರು ಸೇನಾ ಸಿಬ್ಬಂದಿ ಕರ್ತವ್ಯದಲ್ಲಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ಸೇನಾ ಪಿಆರ್ಒ ತಿಳಿಸಿದ್ದಾರೆ.
ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ಖಾಸಗಿ ಹೋಟೆಲ್ ನಲ್ಲಿರುವ ರಾಜ್ಯದ ಬಿಜೆಪಿ ಶಾಸಕರು
ಸೇನಾ ಕ್ಯಾಪ್ಟನ್ ಮತ್ತು ನೈಬ್-ಸುಬೇದಾರ್ (ಜೆಸಿಒ) ಅವರನ್ನು ತಕ್ಷಣ ಹೆಲಿಕಾಪ್ಟರ್ನಲ್ಲಿ ಚಿಕಿತ್ಸೆಗಾಗಿ ಉಧಮ್ಪುರಕ್ಕೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ವೇಳೆ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.