ಹರ್‌ಘರ್‌ ತಿರಂಗಾ ಅಭಿಯಾನ

ಜಿಲ್ಲೆಯ ನಾಗರಿಕರು ಸ್ವಯಂಪ್ರೇರಿತರಾಗಿ ಭಾಗವಹಿಸಲು ಮನವಿ

Team Udayavani, Jul 19, 2022, 2:54 PM IST

15

ಬಾಗಲಕೋಟೆ: ದೇಶ ಸ್ವಾತಂತ್ರ್ಯ ಪಡೆದು 75 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಹರ್‌ ಘರ್‌ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲೆಯ ನಾಗರಿಕರು ಕೂಡ ಇದರಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಆ. 11ರಿಂದ 17ರವರೆಗೆ ದೇಶದ ಪ್ರತಿ ಮನೆಯಲ್ಲೂ ರಾಷ್ಟ್ರ ಧ್ವಜ ಹಾರಿಸಿ ದೇಶದ ಜನತೆ ತಮ್ಮ ರಾಷ್ಟ್ರಭಕ್ತಿಯನ್ನು ಅಭಿವ್ಯಕ್ತಗೊಳಿಸಲು ಹರ್‌ ಘರ್‌ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ರಾಜ್ಯ ಸರಕಾರದ ಸರಕಾರಿ, ಅರೆ ಸರಕಾರಿ, ನಿಗಮ ಮಂಡಳಿ, ಶಾಲಾ ಕಾಲೇಜು ಸೇರಿದಂತೆ ಸಾರ್ವಜನಿಕರು ಕೂಡ ತಮ್ಮ ಮನೆಯ ಮೇಲೆ ರಾಷ್ಟ್ರ ಧ್ವಜ ಹಾರಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ನಾಗರಿಕರು ಸ್ವಯಂಪ್ರೇರಿತರಾಗಿ ಭಾಗವಹಿಸುವ ಮೂಲಕ ತಮ್ಮ ರಾಷ್ಟ್ರಪ್ರೇಮ ಮೆರೆಯಬಹುದಾಗಿದೆ ಎಂದರು.

ಗೃಹ ವ್ಯವಹಾರಗಳ ಮಂತ್ರಾಲಯ ದ್ವಜ ಸಂಹಿತೆ ಕಾಯ್ದೆಗೆ ತಿದ್ದುಪಡಿ ತಂದಿದ್ದು, ಕೈಯಲ್ಲಿ ತಯಾರಿಸಿದ ಅಥವಾ ಯಂತ್ರದಿಂದ ತಯಾರಿಸಿದಂತಹ ಪಾಲಿಸ್ಟರ್‌ ಹತ್ತಿ ಉಣ್ಣೆ, ರೇಷ್ಮೆ, ಖಾದಿಯಿಂದ ತಯಾರಿಸಿದ ರಾಷ್ಟ್ರ ಧ್ವಜ ಹಾರಿಸಬಹುದಾಗಿದೆ. ಧ್ವಜದ ಅಳತೆಯು 20×30 ಅಥವಾ ಈ ಅಳತೆಯ ಅರ್ಧದಷ್ಟು ಆಗಿರುವಂತಹ ಧ್ವಜ ಆರಿಸಬಹುದೆಂದು ಕೇಂದ್ರ ಸರಕಾರ ಸುತ್ತೋಲೆ ಹೊರಡಿಸಿದ್ದು, ಧ್ವಜದ ಘನತೆಗೆ ಧಕ್ಕೆ ಆಗದಂತೆ ನಾಗರಿಕರು ಎಚ್ಚರಿಕೆ ವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ರಾಷ್ಟ್ರಧ್ವಜಗಳ ಹಂಚಿಕೆ ಮತ್ತು ಮಾರಾಟ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಗ್ರಾಮ ಪಂಚಾಯಿತಿಗಳು, ಮತ್ತು ನಗರ ಪ್ರದೇಶಗಳಲ್ಲಿ ನಗರ ಸ್ಥಳಿಯ ಸಂಸ್ಥೆಗಳನ್ನು ಗುರುತಿಸಿ, ಜವಾಬ್ದಾರಿಯುತ ವ್ಯಕ್ತಿಗಳಿಗೆ ಈ ಅಭಿಯಾನದ ನೇತೃತ್ವ ವಹಿಸಿಕೊಟ್ಟು ಎಲ್ಲೂ ಆಚಾತುರ್ಯ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿಕೊಂಡು ಯಶಸ್ವಿಗೊಳಿಸಬೇಕು ಎಂದರು.

ಸಿಇಒ ಟಿ. ಭೂಬಾಲನ್‌, ಎಸ್ಪಿ ಜಯಪ್ರಕಾಶ ಅಕ್ಕರಕಿ, ಹೆಚ್ಚುವರಿ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕಿರಣಕುಮಾರ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

3-mahalingapur

Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

This time 2004 result will repeat: Jairam Ramesh

Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್‌

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.