ಸ್ವಲ್ಪ ಮಳೆ ಬಂದರೂ “ತಲೆ ಮೇಲೆ ನೀರು’


Team Udayavani, Jul 21, 2022, 6:02 PM IST

20school

ಸೈದಾಪುರ: ಪಟ್ಟಣದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ 15 ಕೋಣೆಗಳು ಶಿಥಿಲಗೊಂಡಿದ್ದು ವಿದ್ಯಾರ್ಥಿಗಳು ಭಯದಲ್ಲೇ ಪಾಠ ಕೇಳುವಂತಾದರೆ, ಶಿಕ್ಷಕರು ಭೀತಿಯಿಂದಲೇ ಪಾಠ ಹೇಳುವಂತಾಗಿದೆ.

1959ರಲ್ಲಿ ಸುಮಾರು 11826 ಚದರ ಅಡಿ ವಿಸ್ತಾರದಲ್ಲಿ ಈ ಶಾಲಾ ಕಟ್ಟಡ ನಿರ್ಮಾಣಗೊಂಡಿದೆ. ಈ ಶಾಲೆಯಲ್ಲಿ ಒಂದರಿಂದ ಏಳನೇ ತರಗತಿಗಳು ನಡೆಯುತ್ತಿದ್ದು, ಸುಮಾರು 220 ವಿದ್ಯಾರ್ಥಿಗಳು ಇಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ಗೋಡೆಗಳು ಮತ್ತು ಛಾವಣಿಯ ಸಿಮೆಂಟ್‌ ಪದರು ಕೆಲವೊಮ್ಮೆ ಶಾಲಾವಧಿಯಲ್ಲಿಯೇ ಉದುರಿ ಬೀಳುತ್ತಿದೆಯಲ್ಲದೇ ಕಬ್ಬಿಣದ ರಾಡ್‌ಗಳು ಹೊರಗಡೆ ಕಾಣುತ್ತಿವೆ.

15 ಕೋಣೆಗಳಲ್ಲಿ 4 ಕೋಣೆಗಳು ಸ್ವಲ್ಪ ಉತ್ತಮವಿದ್ದು, ಉಳಿದ 8 ಕೋಣೆಗಳು ಶಿಥಿಲಗೊಂಡಿವೆ. ಅದರಲ್ಲಿ 3 ಕೋಣೆಗಳು ಸಂಪೂರ್ಣ ಶಿಥಿಲಗೊಂಡಿದ್ದು, ತರಗತಿ ನಡೆಸಲು ಯೋಗ್ಯವಾಗಿಲ್ಲ. ಇದರಿಂದ ಅವುಗಳನ್ನು ಮುಚ್ಚಲಾಗಿದೆ. ಮಳೆಗಾಲದಲ್ಲಿ ಸ್ವಲ್ಪ ಮಳೆ ಬಂದರೆ ಸಾಕು ತರಗತಿಗಳಲ್ಲಿ ನೀರು ಸೋರುತ್ತದೆ. ಮಳೆ ನಿಲ್ಲುವವರೆಗೂ ಸೋರದಿರುವ ಕೋಣೆಯ ಯಾವುದಾದರೊಂದು ಮೂಲೆಯಲ್ಲಿ ಮಕ್ಕಳು ಪುಸ್ತಕ, ಚೀಲಗಳನ್ನು ಹಿಡಿದು ನಿಲ್ಲಬೇಕಾಗಿದೆ.

ಆಟದ ಮೈದಾನವಿಲ್ಲ: ಈ ಶಾಲೆಯಲ್ಲಿ ದೈಹಿಕ ಶಿಕ್ಷಕರಿದ್ದರೂ ಮಕ್ಕಳಿಗೆ ಆಟವಾಡಲು ಆಟದ ಮೈದಾನವಿಲ್ಲ. ಇದೇ ಶಾಲೆಯ ಹಿಂದೆ ಅಕ್ಕಪಕ್ಕದ ಖಾಲಿ ಜಾಗದಲ್ಲಿ ಮಕ್ಕಳು ಆಟವಾಡುತ್ತಾರೆ. ಇಲ್ಲಿಯೇ ತರಬೇತಿ ಪಡೆದ ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡೆಗಳಲ್ಲೂ ಭಾಗವಹಿಸಿ ಗ್ರಾಮದ ಕೀರ್ತಿ ಹೆಚ್ಚಿಸಿದ್ದಾರೆ. ಒಂದು ಕಾಲದಲ್ಲಿ ಈ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಇಂದು ದೇಶ-ವಿದೇಶಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರಿಂದ ಅದೇ ಶಾಲೆಯ ಪರಿಸ್ಥಿತಿ ಗಮನಿಸಿದರೆ ಸಂಬಂಧಪಟ್ಟ ಅಧಿಕಾರಿಗಳ ಜಾಣ ಕುರುಡುತನಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಪ್ರತಿ ವರ್ಷವೂ ಶಾಲೆ ಮುಖ್ಯ ಗುರುಗಳು ಶಾಲಾವಸ್ಥೆ ಬಗ್ಗೆ ಸಂಬಂಧಪಟ್ಟ ಶಿಕ್ಷಣ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ಮನವಿ ನೀಡಿದರೂ ಪ್ರಯೋಜನವಾಗಿಲ್ಲಈ ಶಾಲೆ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸುವೆ. ಗ್ರಾಮದ ಮುಖಂಡರು ಸಹಕಾರ ನೀಡಿದರೆ ಮಕ್ಕಳ ವಿದ್ಯಾಭ್ಯಾಸಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಪ್ರಯತ್ನಿಸುತ್ತೇವೆ. ಸ್ನೇಹಲ್ಆರ್‌, ಜಿಲ್ಲಾಧಿಕಾರಿ

ಈ ಭಾಗದಲ್ಲಿ ಮಾದರಿ ಶಾಲೆ ಎಂಬ ಖ್ಯಾತಿ ಪಡೆದು ಸಮಾಜಕ್ಕೆ ಉತ್ತಮ ವ್ಯಕ್ತಿಗಳನ್ನು ನೀಡಿದ ಶಾಲೆ ಇಂದು ಶಿಥಿಲಾವಸ್ಥೆ ತಲುಪಿರುವುದು ದುರ್ದೈವ ಸಂಗತಿ. ಶಾಸಕರು, ಸಂಬಂಧಪಟ್ಟ ಅಧಿಕಾರಿಗಳು ನೂತನ ಕಟ್ಟಡ ನಿರ್ಮಿಸಲು ಸಹಾಯ-ಸಹಕಾರ ನೀಡಬೇಕು. ಬಸವರಾಜ ನಾಯಕ, ಎಸ್ಡಿಎಂಸಿ ಅಧ್ಯಕ್ಷ

-ಭೀಮಣ್ಣ . ವಡವಟ್

ಟಾಪ್ ನ್ಯೂಸ್

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

4-yadagiri

Eknath Shindeಗೆ ತಾಕತ್ ಇದ್ದರೆ ನಮ್ಮ ರಾಜ್ಯಕ್ಕೆ ಬರಲಿ: ಸಚಿವ ದರ್ಶನಾಪುರ ಸವಾಲ್

1-wewwe

Yadgir: ಸಿಡಿಲು ಬಡಿದು ಕುರಿಗಾಹಿ ಮೃತ್ಯು, 17 ಕುರಿಗಳು ಸಾವು

yadagiri

SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.