ಉಳ್ಳಾಲ : ಮಲತಂದೆಯಿಂದಲೇ 9 ವರ್ಷದ ಮಗಳ ಮೇಲೆ ಅತ್ಯಾಚಾರ; ಆರೋಪಿ ವಶಕ್ಕೆ
ಪತ್ನಿ ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭ ನಡೆದ ಪೈಶಾಚಿಕ ಕೃತ್ಯ
Team Udayavani, Jul 27, 2022, 7:30 AM IST
ಉಳ್ಳಾಲ : ಮಲತಂದೆಯೋರ್ವ 9 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ರಕ್ತಸ್ರಾವವಾಗಿ ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಕೊಣಾಜೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಅಶ್ವತ್ಥ್ (25) ಆರೋಪಿ. ಕೇರಳ ಗಡಿಭಾಗದ, ಪತಿಯನ್ನು ತ್ಯಜಿಸಿರುವ ಮಹಿಳೆಯನ್ನು ಮದುವೆಯಾಗಿದ್ದ. ಈಕೆಗೆ ಒಂಬತ್ತು ವರ್ಷದ ಮಗಳಿದ್ದು, ಒಟ್ಟಿಗೆ ಪಾವೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಮಹಿಳೆ ಗರ್ಭಿಣಿಯಾಗಿದ್ದು, ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಅಶ್ವತ್ಥ್ ಹಾಗೂ ಬಾಲಕಿ ಮನೆಯಲ್ಲಿದ್ದರು. ಈ ವೇಳೆ ಬಾಲಕಿ ಮೇಲೆ ಆರೋಪಿ ಅತ್ಯಾಚಾರವೆಸಗಿದ್ದು, ವಿಪರೀತ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸುವಾಗ ಪ್ರಕರಣ ಬೆಳಕಿಗೆ ಬಂದಿದೆ.
ಕೊಣಾಜೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು ಪಾಂಡೇಶ್ವರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ
ICSE: ರಾಜ್ಯದ ವಿದ್ಯಾರ್ಥಿಗಳಿಗೆ ಶೇ. 99 ಮೀರಿದ ಫಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ
Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ
ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ
Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ