ಸಾವಿರ ಸಲ ಹೇಳುತ್ತೇನೆ ಅಂಜನಾದ್ರಿಯೇ ಹನುಮನ ಜನ್ಮ ಸ್ಥಳ : ಸಿಎಂ ಬೊಮ್ಮಾಯಿ ಘೋಷಣೆ

ಅಂಜನಾದ್ರಿ ಬೆಟ್ಟ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿ

Team Udayavani, Aug 1, 2022, 2:32 PM IST

1-asdsd

ಕೊಪ್ಪಳ: ಅಂಜನಾದ್ರಿಯೇ ಹನುಮನ ಜನ್ಮ ಸ್ಥಳ ಇದನ್ನು ಸಾವಿರ ಸಾವಿರ ಸಾರಿ ಒತ್ತಿ ಹೇಳುವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮೆಲ್ಲರ ಆರಾಧ್ಯ ದೈವ ಅಂಜನಾದ್ರಿಯ ಹನುಮಂತನ ದರ್ಶನಕ್ಕೆ ಆಗಮಿಸಿದ್ದೇವೆ. ಅಂಜನಾದ್ರಿಯ ಸಮಗ್ರ ಅಭಿವೃದ್ಧಿಗೆ ಈಗಾಗಲೆ ಬಜೆಟ್ ನಲ್ಲಿ 100 ಕೋಟಿ ರೂಪಾಯಿ ಅನುದಾನ‌ ಘೋಷಣೆ ಮಾಡಿದ್ದೇನೆ. ಅಂಜನಾದ್ರಿಗೆ ಪ್ರತಿವರ್ಷವೂ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಆಗಮಿಸುವ ಭಕ್ತರಿಗೆ ಮೂಲ ಸೌಕರ್ಯ ಕಲ್ಪಿಸುವುದು ನಮ್ಮ‌ಕರ್ತವ್ಯ. ಬರುವ ದಿನಗಳಲ್ಲಿ ಯಾತ್ರಿಗಳು ಆಗಮಿಸುವ ಸಂಖ್ಯೆ ಹೆಚ್ಚಳವಾಗಲಿದೆ. ಹೀಗಾಗಿ ಅಂಜನಾದ್ರಿ ಬೆಟ್ಟದ ಮೇಲೂ ಮತ್ತು ಕೆಳಗೂ ಅಭಿವೃದ್ಧಿ ಆಗಬೇಕಾದ ಅಗತ್ಯವಿದೆ ಎಂದರು.

ಈಗಾಗಲೇ ಸರ್ಕಾರದ ಆದೇಶದೊಂದಿಗೆ ಅಂಜನಾದ್ರಿಗೆ ಬಂದಿದ್ದೇನೆ. ಅಂಜನಾದ್ರಿಗೆ ಎಲ್ಲ ರೀತಿಯ ಸೌಕರ್ಯಗಳನ್ನು ಕಲ್ಪಿಸುವ ದೊಡ್ಡ ಗುರಿ ನಮ್ಮದಾಗಿದೆ. ಇಲ್ಲಿ ಯಾತ್ರಿಕರಿಗೆ ಆಸ್ಪತ್ರೆ, ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವುದು ನಮ್ಮ ಚಿಂತನೆಯಾಗಿದೆ. ಬೆಟ್ಟಕ್ಕೆ ರೋಪ್ ವೇ ವ್ಯವಸ್ಥೆ ಮಾಡಿ ವಯಸ್ಸಾದವರಿಗೂ ಸಹ ಹನುಮಂತನ ದರ್ಶನ ಕಲ್ಪಿಸುವ ಚಿಂತನೆ ಇದೆ . ಬಜೆಟ್ ನಲ್ಲಿ ಜಿಲ್ಲೆಗೆ ನೀಡಿದ ಅನುದಾನದ ಕಾಮಗಾರಿಗಳಿಗೆ ಚಾಲನೆ ಕೊಡಲು ಬಂದಿದ್ದೇನೆ ಎಂದರು.

ಅಂಜನಾದ್ರಿಯಲ್ಲಿ ರೋಪ್ ವೇ ಗೆ ಮುಂದಿನ ಮುಂದಿನ ದಿನಗಳಲ್ಲಿ ಟೆಂಡರ್ ಕರೆಯಲಯ ಸೂಚನೆ‌ ನೀಡಿದ್ದೇನೆ. ಅಂಜನಾದ್ರಿಯ ಅಭಿವೃದ್ಧಿಗೆ ಈಗಾಗಲೆ ಮಾಸ್ಟರ್ ಪ್ಲ್ಯಾನ್ ರೂಪಿಸಿದ್ದೇವೆ. ಅಂಜನಾದ್ರಿಯ ಜೊತೆಗೆ ಸುತ್ತಲಿನ ಪ್ರದೇಶಗಳನ್ನು ಅಭಿವೃದ್ಧಿ ಮಾಡಲಾಗುವುದು. ಬಜೆಟ್ ನಲ್ಲಿ ಘೋಷಿಸಿದಂತೆ ಅಂತಾರಾಷ್ಟ್ರೀಯ ಮಟ್ಟದ ಹಂಪಿ ಟೂರಿಸಂ ಸರ್ಕಿಟ್ ನ್ನು ಮಾಡಲು ಯೋಜಿಸಲಾಗಿದೆ. ಹಂಪಿ ಮತ್ತು ಮೈಸೂರನ್ನು ಪ್ರವಾಸೋದ್ಯಮ ದೃಷ್ಟಿಯಿಂದ ಅಂತಾರಾಷ್ಟ್ರೀಯ ಸರ್ಕಿಟ್ ಮಾಡಲು ಚಿಂತಿಸಿದ ಕಾರಣ ಯೋಜನೆ ರೂಪಿಸಲಾಗಿದೆ.
ಪುರಾತತ್ವ ಇಲಾಖೆ ವ್ಯಾಪ್ತಿಯ ಪ್ರದೇಶಗಳನ್ನು ಹೊರತುಪಡಿಸಿ ಉಳಿದೆಲ್ಲವುಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಇದರ ಜತೆಗೆ ಅಂತಾರಾಷ್ಟ್ರೀಯ ಪ್ರವಾಸಿಗರಿಗೂ ವ್ಯವಸ್ಥೆ ಕಲ್ಪಿಸಲಾಗುವುದು. ಈ ಭಾಗದ ಐತಿಹಾಸಿಕ ಪ್ರವಾಸಿತಾಣಗಳ ಅಭಿವೃದ್ಧಿಗೆ ಒತ್ತುಕೊಡಲಿದ್ದೇವೆ ಎಂದರು.

ಹನುಮ ಜನಿಸಿದ್ದು ಅಂಜನಾದ್ರಿಯಲ್ಲಿಯೇ ಎಂದು ನಾನು ಸಾವಿರ ಸಲ ಹೇಳುತ್ತೇನೆ. ಸಾವಿರಾರು ವರ್ಷಗಳಿಂದ ಇರುವ ಕಿಷ್ಕಿಂದ ಪುರಾವೆಗಳೆ ಹನುಮ ಹುಟ್ಟಿದ್ದು ಇಲ್ಲೇ ಎಂದು ಸಾರಿ ಸಾರಿ ಹೇಳುತ್ತವೆ. ಇದನ್ನು ಬಿಟ್ಟು ಹೇಳಲು ಬೇರೆ ಪುರಾವೆಗಳು ಬೇಕಿಲ್ಲ. ಇತ್ತೀಚಿನ ದಿನಗಳಲ್ಲಿ ಆಂಜನೇಯ ಅಲ್ಲಿ ಜನಿಸಿದ್ದ ಇಲ್ಲಿ ಜನಸಿದ್ದ ಎಂಬ ವಿವಾದಗಳು ಕೇಳಿಬರುತ್ತಿವೆ. ಅಂಜನಾದ್ರಿಯೇ ಹನುಮಂತನು ಜನಸಿದ ಪ್ರದೇಶವಾಗಿದೆ ಎಂದು ಹೇಳುವುದುಕ್ಕೆ ಎರಡು ಮಾತಿಲ್ಲ. ಹಾಗಾಗಿ ಈ ಅಂಜನಾದ್ರಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿ ಮಾಡಲು ನಾವು ಬಜೆಟ್ ನಲ್ಲಿ ಅನುದಾನ ಮೀಸಲಿಟ್ಟಿದ್ದೇವೆ ಎಂದರು.

ಹನುಮ ಜನ್ಮಭೂಮಿ ಅಂಜನಾದ್ರಿ ಎನ್ನುವ ನಮ್ಮ ನಂಬಿಕೆಯೆ ಘೋಷಣೆಯಾಗಿದೆ. ಕರ್ನಾಟಕ, ಅಂಧ್ರ ಅಥವಾ ಬೇರೆ ರಾಜ್ಯ ಎಂಬ ಮಾತೇ ಇಲ್ಲ. ಇಡೀ ಭಾರತಕ್ಕೆ ಗೊತ್ತಿದೆ ಅಂಜನಾದ್ರಿಯೇ ಹನುಮನ ಜನ್ಮಸ್ಥಳ ಎಂದು. ಇದನ್ನು ಸಾವಿರ ಬಾರಿ ಸಾರಿ ಸಾರಿ ಹೇಳುತ್ತೇನೆ. ಅಂಜನಾದ್ರಿಯ ಅಭಿವೃದ್ಧಿಗೆ ಬೇಕಾದ ಜಮೀನು ಸ್ವಾಧೀನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಈಗಾಗಲೆ ಒಂದು ಸಭೆ ಮಾಡಿರುವೆ ಎಂದರು.

ಆಂಜನೇಯ ಮೂರ್ತಿಗೆ ಸಿಎಂ ಸಾಷ್ಟಾಂಗ ನಮಸ್ಕಾರ

ಬೆಟ್ಟದ ಕೆಳಗೆ ಹನುಮಂತನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದರು. ಹನುಮಾನ್ ಚಾಲೀಸಾ ಪಠಣ ಮಾಡಿದರು. ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತಿಯಿಂದ ಆಂಜಿನೇಯನ ಮೂರ್ತಿಗೆ ಸಾಷ್ಟಾಂಗ ನಮಸ್ಕಾರ ಹಾಕಿ ಗಮನ ಸೆಳೆದರು. ಅಂಜನಾದ್ರಿ ಆಡಳಿತ ಮಂಡಳಿಯಿಂದ ಸಿಎಂಗೆ ಸನ್ಮಾನ ಮಾಡಿ ಆಂಜನೇಯನ ಭಾವಚಿತ್ರ ಕಾಣಿಕೆಯಾಗಿ ನೀಡಿದರು. ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರು ಸಿಎಂ ಬೊಮ್ಮಾಯಿ ಅವರಿಗೆ ಆಂಜನೇಯನ ಬೆಳ್ಳಿ ಮೂರ್ತಿ ಕಾಣಿಕೆಯಾಗಿ ನೀಡಿದರು.

Koo App

ಮುಖ್ಯಮಂತ್ರಿ @bsbommai ಅವರು ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ 100 ಕೋಟಿ ರೂ. ವೆಚ್ಚದಲ್ಲಿ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಕುರಿತಂತೆ ಅಧಿಕಾರಿ ಹಾಗೂ ಜನಪ್ರತಿನಿಧಿಗಳ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಸಚಿವರಾದ ಹಾಲಪ್ಪ ಆಚಾರ್, ಬೈರತಿ ಬಸವರಾಜ್, ಡಾ. ಕೆ ಸುಧಾಕರ್, ಶಶಿಕಲಾ ಜೊಲ್ಲೆ, ಆನಂದ ಸಿಂಗ್, ಸಂಸದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಡೆಸುಗೂರ, ಕೊಪ್ಪಳ ಜಿಲ್ಲಾಧಿಕಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

CM of Karnataka (@CMOKarnataka) 1 Aug 2022

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.