ಬೆಲ್ಲಕ್ಕೆ ಶೇ.5 ಜಿಎಸ್ಟಿ ಬೇಡ: ಕೇಂದ್ರಕ್ಕೆ ಸಂಸದೆ ಸುಮಲತಾ ಮನವಿ
Team Udayavani, Aug 4, 2022, 8:14 PM IST
ನವದೆಹಲಿ: ಬೆಲ್ಲದ ಮೇಲೆ ಶೇ.5 ಜಿಎಸ್ಟಿ ವಿಧಿಸಿರುವುದನ್ನು ವಾಪಸ್ ಪಡೆಯಬೇಕೆಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಉತ್ತರ ಪ್ರದೇಶ, ಮಹಾರಾಷ್ಟ್ರ ಸೇರಿ ಇತರ ರಾಜ್ಯಗಳಲ್ಲಿನ ಕಬ್ಬು ಬೆಳೆಗಾರರಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿನ ಬೆಳೆಗಾರರಿಗೆ ಮುಕ್ತ ಹಾಗೂ ನ್ಯಾಯ ಸಮ್ಮತ ದರ (ಎಫ್ಆರ್ಪಿ) ಕಡಿಮೆಯೇ ಇದೆ ಎಂದಿದ್ದಾರೆ.
ನವದೆಹಲಿಯಲ್ಲಿ ಗುರುವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಈ ಸಮಸ್ಯೆಗಳನ್ನು ಪರಿಹರಿಸಬೇಕೆಮದು ಮನವಿ ಸಲ್ಲಿಸಿದರು. ಉತ್ತರದ ರಾಜ್ಯಗಳನ್ನು ಹೋಲಿಕೆ ಮಾಡಿದಾಗ ಕರ್ನಾಟಕದಲ್ಲಿ ಇರುವ ಬೆಲ್ಲ ತಯಾರಿಕಾ ಘಟಕಗಳ ಪರಿಸ್ಥಿತಿ ಚೆನ್ನಾಗಿಲ್ಲ ಎಂದು ವಿವರಿಸಿದರು. ಮಂಡ್ಯ ಜಿಲ್ಲೆ ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಕೂಡ ಕಬ್ಬು ಬೆಳೆಗಾರರು ಹಲವು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ ಎಂದು ವಿತ್ತ ಸಚಿವರಿಗೆ ವಿವರಿಸಿದರು.
ಮನವಿಯನ್ನು ಪರಿಶೀಲಿಸಿದ ನಿರ್ಮಲಾ ಸೀತಾರಾಮನ್ ಅವರು, ಬೆಲ್ಲಕ್ಕೆ ಶೇ.5 ಜಿಎಸ್ಟಿ ವಿಧಿಸಿದ ಬಗ್ಗೆ ಮಂಡಳಿಯ ಗಮನಕ್ಕೆ ತಂದು ಪರಿಶೀಲಿಸಲಾಗುತ್ತದೆ. ಜತೆಗೆ ಇತರ ಕೋರಿಕೆಗಳಿಗೆ ಸ್ಪಂದಿಸಿ ಪರಿಹಾರ ಸೂತ್ರ ಪ್ರಕಟಿಸುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್