ಬಿಜೆಪಿ ಯುವ ಮೋರ್ಚಾ ವಿಶೇಷ ಸಭೆ: ಪ್ರವೀಣ್ ನೆಟ್ಟಾರುಗೆ ಪುಷ್ಪನಮನ
Team Udayavani, Aug 5, 2022, 2:19 PM IST
ಬೆಂಗಳೂರು: ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಅವರು ಶುಕ್ರವಾರ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಯುವ ಮೋರ್ಚಾ ವಿಶೇಷ ಸಭೆ ನಡೆಸಿದರು.
ಸಭೆಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದಕ್ಷಿಣ ಕನ್ನಡ ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮೌನ ಪ್ರಾರ್ಥನೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಯುವ ಮೋರ್ಚಾ ಪ್ರಭಾರಿ ಮಹೇಶ್ ಟೆಂಗಿನಕಾಯಿ, ಯುವ ಮೋರ್ಚಾ ರಾಜ್ಯ ಅಧ್ಯಕ್ಷರಾದ ಡಾ. ಸಂದೀಪ್ ಕುಮಾರ್, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ, ಡಾ. ಮಲ್ಲಿಕಾರ್ಜುನ ಬಾಳಿಕಾಯಿ, ಅಜಿತ್ ಹೆಗಡೆ ಬೆಳ್ಳೆಕೇರಿ ಮತ್ತು ಯುವ ಮೋರ್ಚಾ ರಾಜ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ
Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್
Pen drive case; ಇಂದೇ ಪ್ರಜ್ವಲ್ ರೇವಣ್ಣ ಎಸ್ಐಟಿ ಮುಂದೆ ಶರಣು?
Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ