ರಾಜ್ಯದಲ್ಲಿ ಮಂಕಿಪಾಕ್ಸ್‌ ಪ್ರಕರಣ ಕಂಡುಬಂದಿಲ್ಲ: ಸಚಿವ ಡಾ.ಕೆ.ಸುಧಾಕರ್‌ ಸ್ಪಷ್ಟನೆ

Team Udayavani, Aug 6, 2022, 12:07 PM IST

ರಾಜ್ಯದಲ್ಲಿ ಮಂಕಿಪಾಕ್ಸ್‌ ಪ್ರಕರಣ ಕಂಡುಬಂದಿಲ್ಲ: ಸಚಿವ ಡಾ.ಕೆ.ಸುಧಾಕರ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ ಮಂಕಿಪಾಕ್ಸ್‌ ಪ್ರಕರಣ ಕಂಡುಬಂದಿಲ್ಲ. ಆರಂಭದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು.

ವಿಶ್ವ ವ್ಯಾಸ್ಕ್ಯುಲರ್‌ ದಿನ ಪ್ರಯುಕ್ತ, ವ್ಯಾಸ್ಕ್ಯುಲರ್‌ ಸರ್ಜನ್ಸ್‌ ಅಸೋಸಿಯೇಶನ್‌ ವತಿಯಿಂದ ಆಯೋಜಿಸಿದ್ದ, ಟೌನ್‌ಹಾಲ್‌ನಿಂದ ಕಂಠೀರವ ಸ್ಟೇಡಿಯಂವರೆಗಿನ ಜಾಗೃತಿ ನಡಿಗೆ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡರು. ಬಳಿಕ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಮಂಕಿಪಾಕ್ಸ್‌ ಹಿನ್ನೆಲೆಯಲ್ಲಿ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರು ರಾಜ್ಯಕ್ಕೆ ಬಂದಾಗ ಮಾರ್ಗಸೂಚಿಯನ್ನು ಪಾಲಿಸಬೇಕು. ಇಥಿಯೋಪಿಯಾದಿಂದ ಬಂದಿದ್ದ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್‌ ಇರುವ ಅನುಮಾನದ ಮೇಲೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆದರೆ ಅದು ಮಂಕಿಪಾಕ್ಸ್‌ ಅಲ್ಲ, ಸ್ಮಾಲ್‌ ಪಾಕ್ಸ್‌ ಎಂದು ದೃಢಪಟ್ಟಿದೆ ಎಂದರು.

ಇದನ್ನೂ ಓದಿ:ಮಂಗಳೂರು ವಿಶ್ವವಿದ್ಯಾನಿಲಯ : ತುರ್ತಾಗಿ ಫಲಿತಾಂಶ ನೀಡಲು “ಆದ್ಯತೆ ಪರೀಕ್ಷೆ’ ಸೂತ್ರ!

ವಿಮಾನ ನಿಲ್ದಾಣ ಹಾಗೂ ಬಂದರುಗಳಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು 24 ಗಂಟೆಯೂ ಪಾಳಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೂರು ಬಗೆಯ ಪಾಳಿಯನ್ನು ನಿಗದಿ ಮಾಡಲಾಗಿದೆ. ಬೇರೆ ರಾಜ್ಯಗಳಲ್ಲೂ ಈ ಪ್ರಕರಣ ಕಂಡುಬಂದರೂ, ರಾಜ್ಯದಲ್ಲಿ ಈವರೆಗೆ ಪ್ರಕರಣ ಕಂಡುಬಂದಿಲ್ಲ. ಸ್ಕಿನ್‌ ರಾಶಸ್‌ ಸೇರಿದಂತೆ ಹಲವಾರು ಲಕ್ಷಣಗಳಿಂದ ಮಂಕಿ ಪಾಕ್ಸ್‌ ಗೊತ್ತಾಗುತ್ತದೆ. ಆದರೂ ಕೋವಿಡ್‌ನಂತೆಯೇ ಇದು ಕೂಡ ಮೂರು ನಾಲ್ಕು ದಿನಗಳಾದ ನಂತರ ಪತ್ತೆಯಾಗುತ್ತದೆ. ಇದು ಒಂದು ಚಿಂತಿಸುವ ವಿಷಯ ಎಂದರು.

ಅರಿವು ಅಗತ್ಯ: ದೇಶದಲ್ಲಿ ವ್ಯಾಸ್ಕ್ಯುಲರ್‌ ತಜ್ಞರು ಬಹಳ ಕಡಿಮೆ ಇದ್ದಾರೆ. ಈ ಆರೋಗ್ಯದ ಸಮಸ್ಯೆ ಬಗ್ಗೆ ನಗರ ಪ್ರದೇಶಗಳಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕಿದೆ. ವ್ಯಾಸ್ಕ್ಯುಲರ್‌ ಸಮಸ್ಯೆಗಳು ಬೇರೆ ಅನಾರೋಗ್ಯಕ್ಕೂ ದಾರಿ ಮಾಡಿಕೊಡುತ್ತವೆ. ಯುವಜನರಲ್ಲಿ ಹಾಗೂ ವೃತ್ತಿಪರರಿಗೆ ಈ ವಿಚಾರದಲ್ಲಿ ನೆರವಾಗಬೇಕಿದೆ. ಟ್ರಾಫಿಕ್‌ ಪೊಲೀಸರು ಸಾಮಾನ್ಯ ಜನರಿಗಿಂತ ಹೆಚ್ಚು ಕಾಲ ನಿಂತುಕೊಳ್ಳುತ್ತಾರೆ. ಹಾಗೆಯೇ ಶಿಕ್ಷಕರು, ಸರ್ಜನ್‌ಗಳು ಮತ್ತಿತರರು ಕೂಡ ಹೆಚ್ಚು ಸಮಯ ನಿಂತುಕೊಳ್ಳುತ್ತಾರೆ. ಇದರಿಂದಾಗಿ ವ್ಯಾಸ್ಕ್ಯುಲರ್‌ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಜಗತ್ತಿನಲ್ಲಿ ಪ್ರತಿ 6 ಸೆಕೆಂಡ್‌ಗೆ ಒಬ್ಬ ವ್ಯಕ್ತಿ ಕಾಲನ್ನು ಕಳೆದುಕೊಳ್ಳುವ ಸ್ಥಿತಿ ಇದೆ ಎಂದು ಅಂದಾಜಿಸಲಾಗಿದೆ. ರಕ್ತನಾಳದ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಬೇಕು. ಲಘು ವ್ಯಾಯಾಮವನ್ನು ಮಾಡುವಂತೆ ಎಲ್ಲರಿಗೂ ಉತ್ತೇಜಿಸಬೇಕು. ವಿಶೇಷವಾಗಿ ಮಧುಮೇಹಿಗಳು ಈ ಬಗ್ಗೆ ಗಮನಹರಿಸಬೇಕು ಎಂದರು.

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.