ಹೊಸ ಪೋಸ್ಟರ್ನಲ್ಲಿ ‘ತೋತಾಪುರಿ’ ಕಮಾಲ್
Team Udayavani, Aug 7, 2022, 11:53 AM IST
ಜಗ್ಗೇಶ್ ನಟನೆಯ “ತೋತಾಪುರಿ’ ಚಿತ್ರ ಸೆ.30ರಂದು ತೆರೆಕಾಣುತ್ತಿದೆ. ಈಗಾಗಲೇ ಪ್ರಚಾರ ಕಾರ್ಯದಲ್ಲಿ ಬಿಝಿಯಾಗಿರುವ ಚಿತ್ರತಂಡ ವರಮಹಾಲಕ್ಷ್ಮೀ ಹಬ್ಬಕ್ಕೆ ಚಿತ್ರದ ಹೊಸ ಪೋಸ್ಟರ್ವೊಂದನ್ನು ಬಿಟ್ಟಿದ್ದು, ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಇನ್ನು, ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ “ಬಾಗ್ಲು ತೆಗಿ ಮೇರಿ ಜಾನ್’ ಹಾಗೂ ಟ್ರೇಲರ್ ದೊಡ್ಡ ಮಟ್ಟದಲ್ಲಿ ಹಿಟ್ ಆಗಿದೆ. ಈ ಮೂಲಕ ಚಿತ್ರದ ಮೇಲಿನ ನಿರೀಕ್ಷೆ ಕೂಡಾ ಹೆಚ್ಚಾಗಿದೆ. ನವರಸ ನಾಯಕ ಜಗ್ಗೇಶ್ ಹಾಗೂ ನಿರ್ದೇಶಕ ವಿಜಯಪ್ರಸಾದ್ “ನೀರ್ದೋಸೆ’ ಬಳಿಕ ಮತ್ತೂಮ್ಮೆ “ತೋತಾಪುರಿ’ ಮೂಲಕ ಕಮಾಲ್ ಮಾಡಲು ಬರುತ್ತಿದ್ದಾರೆ.
ಇದೇ ಮೊದಲ ಬಾರಿಗೆ ಎರಡು ಭಾಗಗಳಲ್ಲಿ ಜಗ್ಗೇಶ್ ಅವರ ಸಿನಿಮಾ ಮೂಡಿಬರುತ್ತಿದ್ದು, ಎರಡೂ ಭಾಗದ ಚಿತ್ರೀಕರಣ ರಿಲೀಸ್ಗೂ ಮೊದಲೇ ಶೂಟಿಂಗ್ ಆಗಿರುವುದು ಈ ತಂಡದ ಹೆಚ್ಚುಗಾರಿಕೆ. ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂನಲ್ಲಿ ಮೂಡಿಬರುತ್ತಿರುವ ಮೊದಲ ಪ್ಯಾನ್ ಇಂಡಿಯಾ ಕಾಮಿಡಿ ಸಿನಿಮಾ ಇದಾಗಿದೆ.
ಜಗ್ಗೇಶ್ ಮಾತ್ರವಲ್ಲದೇ “ಡಾಲಿ’ ಧನಂಜಯ್ ಸಹ ಚಿತ್ರದ ಪ್ರಮುಖ ಪಾತ್ರದಲ್ಲಿರುವುದು “ತೋತಾಪುರಿ’ ವಿಶೇಷ. ಅದಿತಿ ಪ್ರಭುದೇವ, ಸುಮನ್ ರಂಗನಾಥ್, ದತ್ತಣ್ಣ, ವೀಣಾ ಸುಂದರ್ ಸೇರಿದಂತೆ ಅನೇಕರು ಚಿತ್ರದಲ್ಲಿದ್ದಾರೆ.
ಅತಿಹೆಚ್ಚು ದಿನಗಳ ಚಿತ್ರೀಕರಣ, ಬಹುತಾರಾಗಣವಿರುವ ಈ ಚಿತ್ರಕ್ಕೆ ವಿದೇಶದಿಂದ ಈಗಾಗಲೇ ಬೇಡಿಕೆಯಿದೆ. ಸುಮಾರು 40 ದೇಶಗಳಿಂದ “ತೋತಾಪುರಿ’ ಬಿಡುಗಡೆ ಬಗ್ಗೆ ಮಾತುಕತೆ ನಡೆಯುತ್ತಿದೆ. ಕರ್ನಾಟಕದಲ್ಲೂ ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡುವ ಯೋಜನೆ ಚಿತ್ರತಂಡಕ್ಕಿದೆ.
ಮೋನಿಫಿಕ್ಸ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಸಿನಿಮಾವನ್ನು ಕೆ.ಎ. ಸುರೇಶ್ ನಿರ್ಮಿಸಿದ್ದಾರೆ. ಅನೂಪ್ ಸೀಳಿನ್ ಸಂಗೀತದ ಈ ಚಿತ್ರಕ್ಕೆ ನಿರಂಜನ್ ಬಾಬು ಛಾಯಾಗ್ರಹಣವಿದೆ. ಮೋನಿಫಿಕ್ಸ್ ಆಡಿಯೋಸ್ ಯೂ ಟ್ಯೂಬ್ ಚಾನೆಲ್ನಲ್ಲಿ “ತೋತಾಪುರಿ’ ಹಾಡು ಬಿಡುಗಡೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…