ಹೆಸರು ಕಾಳು ಖರೀದಿ ಕೇಂದ್ರಕ್ಕೆ ಪ್ರಸ್ತಾವನೆ

ಟಾಸ್ಕ್ ಫೋರ್ಸ್‌ ಸಮಿತಿ ಸಭೆ; 21,307 ಹೆಕ್ಷೇರ್ ಪ್ರದೇಶದಲ್ಲಿ ಹೆಸರು ಕಾಳು ಬಿತ್ತನೆ

Team Udayavani, Aug 7, 2022, 4:58 PM IST

20

ಕೊಪ್ಪಳ: ಜಿಲ್ಲೆಯಲ್ಲಿ ಹೆಸರು ಕಾಳು ಖರೀದಿ ಕೇಂದ್ರಗಳನ್ನು ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಟಾಸ್ಕ್ ಫೋರ್ಸ್‌ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ಎಂ. ಸುಂದರೇಶ್‌ ಬಾಬು ಅವರು ಹೇಳಿದರು.

ಪ್ರಸಕ್ತ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿ ಕೇಂದ್ರಗಳ ತೆರೆಯುವ ಕುರಿತಂತೆ ಜಿಲ್ಲಾ ಕೃಷಿ ಉತ್ಪನ್ನಗಳ ಮಾರುಕಟ್ಟೆ ಸಮಿತಿ ವತಿಯಿಂದ (ಎಪಿಎಂಸಿ) ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಟಾಸ್ಕ್ಫೋರ್ಸ್‌ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಂಗಾರು ಹೆಸರು ಕಾಳು ಪ್ರಸ್ತುತ ಕಾಟಾವಿನ ಹಂತದಲ್ಲಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹೆಸರು ಖರೀದಿಸಬೇಕಾಗಿದೆ. ಬಿತ್ತನೆ ಕ್ಷೇತ್ರವನ್ನು ಆಧಾರವಾಗಿಟ್ಟುಕೊಂಡು ಇಳುವರಿ ಪ್ರಮಾಣ ಅಂದಾಜಿಸಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕಾಗಿದೆ. ಖರೀದಿ ಕೇಂದ್ರ ಪ್ರಾರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಕುರಿತಂತೆ ಹಾಗೂ ಖರೀದಿ ಕೇಂದ್ರಗಳ ಬಗ್ಗೆ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡುವ ಜೊತೆಗೆ ಬೆಂಬಲ ಬೆಲೆ ಯೋಜನೆಯ ಲಾಭ ಸಿಗುವ ನಿಟ್ಟಿನಲ್ಲಿ ರೈತರಿಗೆ ಮಾಹಿತಿ ನೀಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಖರೀದಿ ಕೇಂದ್ರಗಳ ಪ್ರಾರಂಭಿಸುವ ಹಿನ್ನೆಲೆಯಲ್ಲಿ ಸರ್ಕಾರದಿಂದ ನಿರ್ದೇಶನ ಬಂದ ತಕ್ಷಣ ಗುರುತಿಸಿದ ಸ್ಥಳಗಳಲ್ಲಿ ಹೆಸರು ಕಾಳು ಖರೀದಿ ಕೇಂದ್ರ ಪ್ರಾರಂಭಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಅಲ್ಲದೇ ಖರೀದಿಸುವ ಹೆಸರು ಕಾಳಿನ ದಾಸ್ತಾನು ಮಾಡುವ ಕುರಿತಂತೆ ಗೋದಾಮುಗಳ ಸ್ಥಳಗಳ ಲಭ್ಯತೆ ಹಾಗೂ ಅಗತ್ಯ ಮುಂಜಾಗ್ರತಾ ಕ್ರಮವಹಿಸಿ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಟಾಸ್ಕ್ ಫೋರ್ಸ್‌ ಸಮಿತಿ ಸದಸ್ಯ ಕಾರ್ಯದರ್ಶಿ ಎಸ್‌. ಶ್ಯಾಮ್‌ ಮಾತನಾಡಿ, ಕೃಷಿ ಇಲಾಖೆ ಮಾಹಿತಿ ಆಧಾರದ ಮೇಲೆ ಪ್ರಸ್ತುತ ಜಿಲ್ಲೆಯಲ್ಲಿ 21,307 ಹೆಕ್ಟೇರ್‌ ಪ್ರದೇಶದಲ್ಲಿ ಹೆಸರು ಕಾಳು ಬಿತ್ತನೆ ಮಾಡಲಾಗಿದೆ. ಒಂದು ಹೆಕ್ಟೇರ್‌ಗೆ ಅಂದಾಜು 8 ಕ್ವಿಂಟಲ್‌ ನಂತೆ ಹೆಸರು ಕಾಳು ಸುಮಾರು 1.80 ಲಕ್ಷ ಕ್ವಿಂಟಲ್‌ ಇಳುವರಿ ಬರುವ ಸಾಧ್ಯತೆ ಇದೆ. ಪ್ರಸ್ತುತ ಹೆಸರು ಕಾಳಿನ ದರವು ರೂ. 6400 ರಿಂದ 7400ವರೆಗೆ ಇದ್ದು, ಕಳೆದ ಬಾರಿಯಂತೆಯೇ ಖರೀದಿ ಕೇಂದ್ರಗಳನ್ನು ಜಿಲ್ಲೆಯ ಕೊಪ್ಪಳ ಎಪಿಎಂಸಿ ಹಾಗೂ ತಾಲೂಕಿನ ಹಿರೇ ಸಿಂಧೋಗಿ, ಕುಷ್ಟಗಿ ತಾಲೂಕಿನ ತಾವರಗೇರಾ ಹಾಗೂ ಹನುಮಸಾಗರ, ಕುಕನೂರು ಹಾಗೂ ಯಲಬುರ್ಗಾ ಟಿಎಪಿಎಂಸಿಗಳು ಸೇರಿ ಜಿಲ್ಲೆಯಲ್ಲಿ ಒಟ್ಟು ಆರು ಖರೀದಿ ಕೇಂದ್ರ ಪ್ರಾರಂಭಿಸಿಬೇಕಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಎಸಿ ಬಸವಣ್ಣಪ್ಪ ಕಲಶೆಟ್ಟಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಸದಾಶಿವ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಖರೀದಿ ಏಜೆನ್ಸಿಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.