ಧಾರವಾಡ ಜಿಲ್ಲೆಯಲ್ಲಿ 89 ಸಾವಿರ ಹೆಕ್ಟೇರ್ ಕೃಷಿ ಬೆಳೆ ಹಾನಿ : ಕೃಷಿ ಸಚಿವ ಬಿ.ಸಿ ಪಾಟೀಲ


Team Udayavani, Aug 9, 2022, 6:29 PM IST

ಧಾರವಾಡ ಜಿಲ್ಲೆಯಲ್ಲಿ 89 ಸಾವಿರ ಹೆಕ್ಟೇರ್ ಕೃಷಿ ಬೆಳೆ ಹಾನಿ : ಕೃಷಿ ಸಚಿವ ಬಿ.ಸಿ ಪಾಟೀಲ

ಧಾರವಾಡ : ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಅಂದಾಜು ೮೯,೧೪೮ ಹೆಕ್ಟೇರ್ ಪ್ರದೇಶದ ಕೃಷಿ ಬೆಳೆಗಳು ಹಾನಿಯಾಗಿದ್ದು, ಹೆಸರು, ಉದ್ದು ಕೊಯ್ಲು ಮಾಡಲು ಸಾಧ್ಯವಾಗದೇ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಈ ಬಗ್ಗೆ ಜಂಟಿ ಸಮೀಕ್ಷೆ ಸಮರ್ಪಕವಾಗಿ ಕೈಗೊಂಡು ಹಾನಿಯ ನಿಖರ ಮಾಹಿತಿ ದಾಖಲಿಸಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ನಗರದ ಡಿಸಿ ಕಚೇರಿಯಲ್ಲಿ ಪ್ರವಾಹ ಪರಿಸ್ಥಿತಿ ಮತ್ತು ಬೆಳೆಹಾನಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಿ ರೈತರಿಗೆ ಸ್ಪಂದಿಸಬೇಕು. ಬೆಳೆವಿಮಾ ಕಂಪೆನಿಗಳ ಪ್ರತಿನಿಧಿಗಳು ಸ್ಥಳೀಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಲಭ್ಯ ಇರಬೇಕು. ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮಾರ್ಗಸೂಚಿಗಳನ್ವಯ ಪರಿಹಾರಕ್ಕೆ ಜಂಟಿ ಸಮೀಕ್ಷೆ ಸಮರ್ಪಕವಾಗಿ ನಡೆಯಬೇಕು ಎಂದು ಸೂಚಿಸಿದರು.

ಈ ವರ್ಷ ಅಧಿಕ ಮಳೆಯಿಂದ ತುರ್ತು ಪರಿಸ್ಥಿತಿಯ ಸನ್ನಿವೇಶ ಸೃಷ್ಟಿಯಾಗಿದ್ದು, ಅಽಕಾರಿಗಳು ಸಮರೋಪಾದಿಯಲ್ಲಿ ಕರ್ತವ್ಯ ನಿರ್ವಹಿಸಿ, ರೈತರಿಗೆ ಸಕಾಲದಲ್ಲಿ ಸ್ಪಂದಿಸಬೇಕು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್, ಕರ್ನಾಟಕ ರೈತ ಸುರಕ್ಷಾ ಫಸಲ್ ವಿಮಾ ಯೋಜನೆಯಡಿ ನೋಂದಾಯಿಸಿಕೊಂಡಿರುವ ರೈತರು ಇ-ಕೆವೈಸಿ ಮಾಡಿಕೊಳ್ಳಬೇಕು. ರಾಜ್ಯದಲ್ಲಿಯೇ ಧಾರವಾಡ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ ೩೪ ಸಾವಿರ ಲೀಟರ್‌ನ್ಯಾನೋ ಯೂರಿಯಾ ಬಳಸಿದ್ದಾರೆ. ಜಾಗತಿಕ ತಾಪಮಾನ ನಿಯಂತ್ರಣ ಹಾಗೂ ಭೂಮಿಯ ಫಲವತ್ತತೆ ಹೆಚ್ಚಳಕ್ಕೆ ಇದು ಪೂರಕವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯ ಪ್ರಶಂಸನೀಯ ಎಂದರು.

ಇದು ಗಂಭೀರವಾದ ಸಭೆ ಇಂತಹ ಸಭೆಗೆ ಗೈರು ಹಾಜರಾಗಿರುವ ರೇಷ್ಮೆ ಹಾಗೂ ತೋಟಗಾರಿಕೆ ಇಲಾಖೆ ಅಽಕಾರಿಗಳಿಗೆ ನೋಟೀಸ್ ಜಾರಿ ಮಾಡುವಂತೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶಾಸಕ ಅಮೃತ ದೇಸಾಯಿ ಮಾತನಾಡಿ, ಈ ಬಾರಿ ಉತ್ತಮ ಬೆಳೆ ಬಂದಿತ್ತು ಅತಿವೃಷ್ಟಿಯಿಂದಾಗಿ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಬೆಳೆವಿಮಾ ಕಂಪೆನಿಗಳ ಬಗ್ಗೆ ರೈತರು ಅಸಮಾಧಾನ ಹೊಂದಿದ್ದು, ಕಂಪೆನಿಗಳು ರೈತ ಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ಜಂಟಿ ಕೃಷಿ ನಿರ್ದೇಶಕ ರಾಜಶೇಖರ ಐ.ಬಿ.ಮಾತನಾಡಿ, ಜೂನ್ ಹಾಗೂ ಜುಲೈ ತಿಂಗಳಲ್ಲಿ ವಾಡಿಕೆಗಿಂತ ಅಽಕ ಮಳೆಯಾಗಿದೆ. ಜಿಲ್ಲೆಯಲ್ಲಿ ಸುಮಾರು ೮೯ ಸಾವಿರ ಹೆಕ್ಟೇರ್‌ಗೂ ಅಽಕ ಕೃಷಿ ಬೆಳೆ ಹಾನಿಯಾಗಿದೆ. ಇದರಲ್ಲಿ ಹೆಸರು ಬೆಳೆ ಹಾನಿಯ ಪ್ರಮಾಣವೇ ೬೧ ಸಾವಿರ ಹೆಕ್ಟೇರಿನಷ್ಟಿದೆ. ಹೆಚ್ಚಿನ ಮಳೆಯಿಂದ ಹೆಸರು ಮತ್ತು ಉದ್ದು ಬೆಳೆಯ ಕೋಯ್ಲು ಕಷ್ಟಸಾಧ್ಯವಾಗಿದೆ. ಅಧಿಕ ತೇವಾಂಶದಿಂದ ಶೇಂಗಾ ಕೊಳೆಯುವ ಹಂತದಲ್ಲಿದೆ. ಹತ್ತಿ, ಮೆಕ್ಕೆಜೋಳ ಬೆಳೆಗಳ ಬೆಳವಣಿಗೆ ಕುಂಠಿತವಾಗಿದೆ. 1,48,166 ರೈತರು ಬೆಳೆವಿಮೆ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ.ಜಿಲ್ಲೆಯಲ್ಲಿ ಬೀಜ, ರಸಗೊಬ್ಬರ ಪೂರೈಕೆ ಸಮರ್ಪಕವಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ಉಪವಿಭಾಗಾಧಿಕಾರಿ ಅಶೋಕ ತೇಲಿ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಇದ್ದರು.

 

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.