ವಿಶ್ವಸಂಸ್ಥೆಯ ಉಗ್ರ ನಿಷೇಧ ಸಮಿತಿಗಿಲ್ಲ ಕಿಮ್ಮತ್ತು
ಚೀನ ಅಧ್ಯಕ್ಷತೆಯ ಸಭೆಯಲ್ಲೇ ಭಾರತದ ಪ್ರತಿನಿಧಿ ಕಟು ಟೀಕೆ
Team Udayavani, Aug 11, 2022, 7:25 AM IST
ವಿಶ್ವಸಂಸ್ಥೆ: ಸೂಕ್ತ ಸಾಕ್ಷ್ಯಾಧಾರಗಳು ಇದ್ದರೂ ಕೂಡ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಪಾಕಿಸ್ತಾನದ ಉಗ್ರ ಅಬ್ದುಲ್ ರೆಹಮಾನ್ ಮಕ್ಕಿಯನ್ನು ನಿಷೇಧಿತ ಪಟ್ಟಿಗೆ ಸೇರಿಸಲು ಚೀನ ಆಕ್ಷೇಪ ಮಾಡಿದೆ. ಇದು ಆ ದೇಶದ ದ್ವಂದ್ವ ನಿಲುವನ್ನು ತೋರಿಸುತ್ತದೆ ಎಂದು ಭಾರತ ಕಟುವಾಗಿ ಆಕ್ಷೇಪಿಸಿದೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಮಾತನಾಡಿದ ಭಾರತದ ಶಾಶ್ವತ ರಾಯಭಾರಿಯ ಪ್ರತಿನಿಧಿ ರುಚಿರಾ ಕಾಂಭೋಜ್ “ಪಾಕಿಸ್ತಾನದ ಉಗ್ರನನ್ನು ನಿಷೇಧಿತ ಪಟ್ಟಿಗೆ ಸೇರಿಸಲು ಚೀನ ತಡೆಯೊಡ್ಡಿದೆ. ಇದರಿಂದಾಗಿ ವಿಶ್ವಸಂಸ್ಥೆಯ 1267- ಅಲ್ ಖೈದಾ ನಿಷೇಧ ಸಮಿತಿಯ ಮೇಲಿನ ವಿಶ್ವಾಸಾರ್ಹತೆಯೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಇಳಿದಿದೆ ಎಂದು ಟೀಕಿಸಿದ್ದಾರೆ.
ಗಮನಾರ್ಹವೆಂದರೆ, ಮಂಗಳವಾರ ತಡರಾತ್ರಿ ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯ ಅಧ್ಯಕ್ಷತೆಯನ್ನು ಚೀನಾವೇ ವಹಿಸಿಕೊಂಡಿತ್ತು. ಅದೇ ಸಂದರ್ಭದಲ್ಲಿ ಚೀನ ವಿರುದ್ಧವೇ ಭಾರತ ಹರಿಹಾಯ್ದಿದೆ.
ಪ್ರಬಲ ಸಾಕ್ಷ್ಯಗಳನ್ನು ನೀಡಿದ್ದರೂ ಪಾಕಿಸ್ತಾನದ ಉಗ್ರನ ಸೇರ್ಪಡೆಗೆ ತಡೆಯೊಡ್ಡಿದ್ದ ಕ್ರಮ ಸಮರ್ಥನೀಯ ಅಲ್ಲ ಎಂದು ಅವರು ವಾದಿಸಿದ್ದಾರೆ.
ಇದರಿಂದಾಗಿಯೇ ಅಂತಾರಾಷ್ಟ್ರೀಯ ಭದ್ರತೆ ಮತ್ತು ಶಾಂತಿಗೆ ಧಕ್ಕೆಯಾಗಿ ಪರಿಣಮಿಸಲಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ