ಮಕ್ಕಳು ತಪ್ಪು ಮಾಡಿದರೆ ಶಿಕ್ಷಕರು ತಿದ್ದುವ ಕೆಲಸ ಮಾಡಬೇಕೆ ಹೊರತು ಅವಮಾನ ಮಾಡುವುದಲ್ಲ

Team Udayavani, Aug 12, 2022, 8:23 AM IST

If children make mistakes, teachers should correct them, not humiliate them: High Court

ಬೆಂಗಳೂರು: ಪೋಕ್ಸೋ ಕಾಯ್ದೆಯಡಿ ಒಬ್ಬ ವ್ಯಕ್ತಿಯು ತನ್ನ ದೇಹವನ್ನು ಅಥವಾ ಅವನ ಅಥವಾ ಅವಳ ದೇಹದ ಯಾವುದೇ ಭಾಗವನ್ನು ಇತರ ವ್ಯಕ್ತಿಗಳು ನೋಡುವಂತೆ ಮತ್ತು ಪ್ರದರ್ಶಿಸುವಂತೆ ಹೇಳಿದರೆ ಅದು ಲೈಂಗಿಕ ದೌರ್ಜನ್ಯ ಹಾಗೂ ಅಪರಾಧವಾಗುತ್ತದೆ ಎಂದು ಹೇಳಿರುವ ಹೈಕೋರ್ಟ್‌, ನಗರದ ಖಾಸಗಿ ಶಾಲೆಯ ಐದು ವರ್ಷದ ಮಗುವನ್ನು ಅವಮಾನ ಮಾಡಿದ್ದ ಶಿಕ್ಷಕಿಯ ವಿರುದ್ಧದ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ.

ಈ ವಿಚಾರವಾಗಿ ಸಂತ್ರಸ್ತ ಮಗುವಿನ ತಾಯಿ 2017ರಲ್ಲಿ ಹಲಸೂರು ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ತನ್ನ ವಿರುದ್ಧ ಸಲ್ಲಿಸಿರುವ ಆರೋಪಪಟ್ಟಿ ರದ್ದು ಕೋರಿ 41 ವರ್ಷದ ಶಿಕ್ಷಕಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣ ವಜಾಗೊಳಿಸಲು ನಿರಾಕರಿಸಿ ಆದೇಶಿಸಿದೆ.

ಶಿಕ್ಷಕಿಯು ಬಾಲಕಿಯ ಪ್ಯಾಂಟ್‌ ಅನ್ನು ಇತರ ಮಕ್ಕಳ ಮುಂದೆ ಎಳೆದು ಆ ಮಗು ನಾಚಿಕೆಯಿಂದ ತಲೆ ತಗ್ಗಿಸುವಂತೆ ಮಾಡಿದ್ದಾರೆ. ಶಿಕ್ಷಕರಾಗಿ ಮಕ್ಕಳು ತಪ್ಪು ಮಾಡಿದಾಗ ತಿದ್ದುವ ಬದಲು, ಎಳೆಯ ವಯಸ್ಸಿನಲ್ಲಿಯೇ ಮಕ್ಕಳನ್ನು ಈ ರೀತಿ ನಡೆಸಿಕೊಳ್ಳುವ ಆಘಾತ ಉಂಟು ಮಾಡಿದರೆ ಅದು ಮಗುವಿನ ಮನಸ್ಥಿತಿ ಮೇಲೆ ಗಂಭೀರ ಪರಿಣಾಮವನ್ನು ಬೀರುತ್ತದೆ ಎಂದು ನ್ಯಾಯಪೀಠ ಎಂದು ಹೇಳಿದೆ.

ಶಿಕ್ಷೆಯಾಗಿ ತನ್ನ ಮಗಳನ್ನು ಸುಮಾರು ಎರಡು ನಿಮಿಷಗಳ ಕಾಲ ಕತ್ತಲೆಯ ಕೋಣೆಯಲ್ಲಿ ಲಾಕ್‌ ಮಾಡಲಾಗಿದೆಯೆಂದು ದೂರುದಾರರು ಆರೋಪಿಸಿದ್ದರು. ವಿಚಾರಣಾ ನ್ಯಾಯಾಲಯ ಮಗುವಿನ ಹೇಳಿಕೆ ದಾಖಲಿಸಿದ್ದು, ದೂರಿನಲ್ಲಿ ಮಾಡಿರುವ ಆರೋಪಗಳಿಗೂ ಹೇಳಿಕೆಗೂ ಸಾಮ್ಯತೆ ಇದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಪ್ರಕರಣದ ಹಿನ್ನೆಲೆ:  ಸಂತ್ರಸ್ತ ಮಗುವಿನ ತಾಯಿ 2017ರಲ್ಲಿ ಹಲಸೂರು ಠಾಣೆಯಲ್ಲಿ ಶಿಕ್ಷಕಿ ವಿರುದ್ಧ ದೂರು ನೀಡಿದ್ದರು. ಆರೋಪಿ ಶಿಕ್ಷಕಿ ಆರಂಭದಲ್ಲಿ ಮಗುವಿಗೆ ಥಳಿಸುತ್ತಿದ್ದರು ಎಂದು ದೂರಿದ್ದರು. ಆ ನಡವಳಿಕೆಯನ್ನು ಪೋಷಕರು ವಿರೋಧಿಸಿದ ನಂತರ,  ಶಿಕ್ಷಕರು ಶಿಕ್ಷೆಯಾಗಿ ಮಕ್ಕಳ ಪ್ಯಾಂಟ್‌ ಅನ್ನು ಕೆಳಕ್ಕೆ ಎಳೆಯಲು ಪ್ರಾರಂಭಿಸಿದರು ಮತ್ತು ತರಗತಿಯ ಇತರ ಮಕ್ಕಳನ್ನು ಮಗುವನ್ನು ನಿಂದಿಸುವಂತೆ ಮಾಡಿದ್ದರಲ್ಲದೆ, ನಾಯಿಯನ್ನು ಸಾಕಿರುವ ಕತ್ತಲ ಕೋಣೆಯಲ್ಲಿ ಕೂಡಿ ಹಾಕುವುದಾಗಿ ಹೇಳಿ ಮಕ್ಕಳನ್ನು ಬೆದರಿಸಿದ್ದಾರೆ ಎಂದು ಆರೋಪಿಸಿದ್ದರು. ಅದರಂತೆ ಪೋಕ್ಸೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.