ರಾಜ್ಯಾದ್ಯಂತ ಉಚಿತ ಕೋರ್ಬಿವ್ಯಾಕ್ಸ್ ವಿತರಣೆ
Team Udayavani, Aug 12, 2022, 8:00 PM IST
ಬೆಂಗಳೂರು: ರಾಜ್ಯದಲ್ಲಿ ಕೊವಿಶೀಲ್ಡ್ ಹಾಗೂ ಕೊವ್ಯಾಕ್ಸಿನ್ ಲಸಿಕೆಯ ಎರಡು ಡೋಸ್ ಪಡೆದು 6 ತಿಂಗಳು ಪೂರ್ಣಗೊಂಡ 18 ವರ್ಷ ಮೇಲ್ಪಟ್ಟ ಎಲ್ಲರೂ ಕೋರ್ಬಿವ್ಯಾಕ್ಸ್ ಲಸಿಕೆ ಪಡೆಯಬಹುದಾಗಿದೆ ಎಂದು ರಾಷ್ಟ್ರೀಯ ಅಭಿಯಾನದ ನಿರ್ದೇಶಕಿ ಆರುಂಧತಿ ತಿಳಿಸಿದ್ದಾರೆ.
ಲಭ್ಯವಿದ್ದರೆ ಕೊವಿಶೀಲ್ಡ್ ಹಾಗೂ ಕೊವ್ಯಾಕ್ಸಿನ್ ಅನ್ನೂ ಪಡೆಯಬಹುದು. ಮುನ್ನೆಚ್ಚರಿಕೆ ಡೋಸ್ ಲಸಿಕೆ ರಾಜ್ಯದ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿದೆ ಎಂದು ಅವರು ತಿಳಿಸಿದ್ದಾರೆ.