ಟಿಪ್ಪು ಭಿತ್ತಿಚಿತ್ರಕ್ಕೆ ಹಾನಿ ಘಟನೆಯಿಂದ ಮನಸ್ಸಿಗೆ ನೋವಾಗಿದೆ: ಡಿಕೆ ಶಿವಕುಮಾರ್

Team Udayavani, Aug 14, 2022, 9:34 AM IST

ಡಿಕೆ ಶಿವಕುಮಾರ್

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಟಿಪ್ಪು ಸುಲ್ತಾನ್ ಅವರ ಕಟೌಟನ್ನು ಕಿಡಿಗೇಡಿಗಳು ನಾಶ ಮಾಡಿದ್ದಾರೆ. ಸರ್ಕಾರದ ಪುರಾತತ್ವ ಇಲಾಖೆ ಅಡಿಯಲ್ಲಿ ಟಿಪ್ಪು ಸುಲ್ತಾನ್ ಅರಮನೆಯಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಶೇಷ ಅಲಂಕಾರ ಮಾಡಿ ಆಚರಣೆ ಮಾಡಲಾಗುತ್ತಿದೆ. ಆ ಮೂಲಕ ಕೇಂದ್ರ ಸರ್ಕಾರ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹೋರಾಟ ಮಾಡಿದವರಿಗೆ ಗೌರವ ನೀಡುತ್ತಿದೆ. ಆದರೂ ಈ ರೀತಿ ಘಟನೆಗಳು ನಡೆಯುತ್ತಿರುವುದು ಮನಸ್ಸಿಗೆ ನೋವು ತಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ.

ಟಿಪ್ಪು ಸುಲ್ತಾನ್ ಭಾವಚಿತ್ರವನ್ನು ಹರಿದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಪೊಲೀಸ್ ಅಧಿಕಾರಿಗಳು ಇದ್ದರೂ ಅದನ್ನು ಹರಿದಿದ್ದಾರೆ. ಈ ವಿಚಾರವಾಗಿ ಪೊಲೀಸ್ ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ಅವರು ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಈ ಕೃತ್ಯ ಯಾರು ಎಸಗಿದ್ದಾರೆ ಎನ್ನುವುದು ನಮಗೆ ಗೊತ್ತಿದೆ. ಕೂಡಲೇ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದೊಂದು ದೇಶದ ಪಾಲಿನ ಸಂಭ್ರಮದ ಸಂದರ್ಭ. ಈ ಸಮಯದಲ್ಲಿ ನಾವು ಶಾಂತಿ ಕಾಪಾಡಬೇಕು. ಕೆಲ ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎಂದು ನಾವು ವಿಚಲಿತರಾಗಬಾರದು ಎಂದರು.

ಇದನ್ನೂ ಓದಿ:“ಕಿಂಗ್ ಆಫ್ ಬುಲ್ ಮಾರ್ಕೆಟ್” ಶೇರು ಮಾರುಕಟ್ಟೆ ದಿಗ್ಗಜ ರಾಕೇಶ್ ಜುಂಜುನ್‌ವಾಲಾ ಇನ್ನಿಲ್ಲ

ಟಿಪ್ಪು ಅವರ ಸ್ಮರಣೆ ಅಲ್ಪಸಂಖ್ಯಾತರ ಓಲೈಕೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, ಸ್ವಾತಂತ್ರ್ಯಕ್ಕಾಗಿ ಎಲ್ಲಾ ಸಮುದಾಯದವರೂ ಹೋರಾಟ ಮಾಡಿದ್ದಾರೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವ ವಿಚಾರ ಹೋರಾಟಗಾರರಲ್ಲಿ ಇತ್ತು, ಜಾತಿ ಧರ್ಮದ ವಿಚಾರ ಅಲ್ಲ ಎಂದು ತಿರುಗೇಟು ನೀಡಿದರು.

ಈ ವಿಚಾರವಾಗಿ ದೂರು ದಾಖಲಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ,  ನಾವು ದೂರು ನೀಡುವ ಅಗತ್ಯವಿಲ್ಲ. ಪೊಲೀಸರು ಸ್ಥಳದಲ್ಲೇ ಇದ್ದರು.  ಅವರು ಕ್ರಮ ಕೈಗೊಳ್ಳಬೇಕು ಎಂದರು.

ಆ.15 ರ ಮಧ್ಯಾಹ್ನ ನಡೆಯಲಿರುವ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮಕ್ಕೆ ಮೆಟ್ರೋ ಸಂಸ್ಥೆ ಎಲ್ಲಾ ಸಹಕಾರ ನೀಡಿದೆ. ನಾವು ಪಕ್ಷದ ವತಿಯಿಂದ ಹಣ ಪಾವತಿಸಿ ಟಿಕೆಟ್ ಖರೀದಿ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುವವರಿಗೆ ಉಚಿತವಾಗಿ ನೀಡುತ್ತಿದ್ದೇವೆ. ಬೆಂಗಳೂರಿಗೆ ವಿವಿಧ ಭಾಗಗಳಿಂದ ಬರುವವರು ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಆಗಮಿಸಲು ಹಾಗೂ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ಮುಕ್ತಾಯದ ನಂತರ ಹಿಂದಿರುಗಲು ಮೆಟ್ರೋ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. ಇದನ್ನು ಎಲ್ಲಾ ಸಾರ್ವಜನಿಕರು ಬಳಸಿಕೊಳ್ಳಬೇಕು ಎಂದು ಡಿಕೆ ಶಿವಕುಮಾರ್ ಮನವಿ ಮಾಡಿದರು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.