ಅನಾರೋಗ್ಯ ಸಮಸ್ಯೆ; ಮಗನಿಗೆ ವಿಷ ಕುಡಿಸಿ ಬಳಿಕ ಆತ್ಮಹತ್ಯೆಗೆ ಶರಣಾದ ದಂಪತಿ

ಒಂದೇ ಕುಟುಂಬ ಮೂವರು ಸಾವು; ಪುತ್ರನ ಕೊಂದು ದಂಪತಿ ನೇಣಿಗೆ ಶರಣು

Team Udayavani, Aug 19, 2022, 11:33 AM IST

10

ಬೆಂಗಳೂರು: ಅನಾರೋಗ್ಯಕ್ಕೀಡಾಗಿದ್ದ ವ್ಯಕ್ತಿಯೊಬ್ಬ ಪತ್ನಿ ಜತೆ ಸೇರಿ ಪುತ್ರನನ್ನು ಕೊಂದು ಬಳಿಕ ಡೆತ್‌ನೋಟ್‌ ಬರೆದಿಟ್ಟು ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಣನಕುಂಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೋಣನ ಕುಂಟೆಯ ಚುಂಚನಕಟ್ಟೆಯ ಎಸ್‌ಬಿಐ ಲೇಔಟ್‌ ನಲ್ಲಿ ವಾಸವಾಗಿದ್ದ ಮಹೇಶ್‌ ಕುಮಾರ್‌ (44), ಜ್ಯೋತಿ (29) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೂ ಮೊದಲು ಮಗ ನಂದೀಶ್‌ಗೌಡ (9) ಗೆ ವಿಷ ಕುಡಿಸಿ ಕೊಂದಿದ್ದಾರೆ ಎಂದು ಪೊಲೀಸರು ಹೇಳಿದರು.

ಮಂಡ್ಯ ಜಿಲ್ಲೆ ಮಳ್ಳವಳ್ಳಿ ತಾಲೂಕಿನ ಮಹೇಶ್‌ ಕುಮಾರ್‌, ಬಿಬಿಎಂಪಿಯಲ್ಲಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದರು. ಜ್ಯೋತಿ ಕೂಡ ಮನೆ ಸಮೀಪದಲ್ಲಿಯೇ ಸಣ್ಣ-ಪುಟ್ಟ ಕೆಲಸ ಮಾಡುತ್ತಿದ್ದರು. ಈ ಮಧ್ಯೆ ಮಹೇಶ್‌ಗೆ ಕೆಲ ತಿಂಗಳ ಹಿಂದೆ ಹರ್ನಿಯಾ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಅಲ್ಲದೆ, ಎರಡು ತಿಂಗಳ ಹಿಂದೆ ಹೊಟ್ಟೆ ನೋವು ತೀವ್ರಗೊಂಡಿದ್ದು, ಆಸ್ಪತ್ರೆಗೆ ಚಿಕಿತ್ಸೆಗೆಂದು ಹೋದಾಗ, ಪರೀಕ್ಷಿಸಿದ ವೈದ್ಯರು, ಕ್ಯಾನ್ಸರ್‌ ಇರುವುದಾಗಿ ಹೇಳಿದ್ದರು.

ಅದರಿಂದ ಮಾನಸಿಕವಾಗಿ ನೊಂದಿದ್ದ ರಮೇಶ್‌ ಕುಮಾರ್‌, ಆರ್ಥಿಕವಾಗಿಯೂ ಕಷ್ಟದಲ್ಲಿದ್ದರು. ಹೀಗಾಗಿ “ತಾನು ಸತ್ತ ನಂತರ ತನ್ನ ಪತ್ನಿ, ಮಗ ಅನಾಥರಾಗುತ್ತಾರೆ ಎಂದು ಭಾವಿಸಿದ್ದ ರಮೇಶ್‌ ಕುಮಾರ್‌, ಗುರುವಾರ ಮೂವರು ಸಾಮೂಹಿಕವಾಗಿ ಸಾಯಲು ಪತ್ನಿಗೆ ಮನವೊಲಿಸಿದ್ದಾರೆ. ಮೊದಲಿಗೆ ಜ್ಯೋತಿ ಪುತ್ರ ನಂದಿಶ್‌ಗೌಡಗೆ ವಿಷ ಕುಡಿಸಿ ಕೊಂದಿದ್ದಾರೆ. ನಂತರ ಜ್ಯೋತಿ ಅದೇ ಕೋಣೆಯ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ರಮೇಶ್‌ ಕುಮಾರ್‌ ಮತ್ತೂಂದು ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುರುವಾರ ಬೆಳಗ್ಗೆಯಿಂದ ರಮೇಶ್‌ ಕುಮಾರ್‌ ಮನೆಯಿಂದ ಹೊರಗಡೆ ಬಾರದಿದ್ದರಿಂದ ಅನುಮಾನಗೊಂಡ ಸ್ಥಳೀಯರು ಮನೆ ಬಾಗಿಲು ತಟ್ಟಿದ್ದರೂ ಸ್ಪಂದನೆ ಇರಲಿಲ್ಲ. ಬಳಿಕ ಪೊಲೀಸ್‌ ಸಹಾಯವಾಣಿಗೆ 112ಗೆ ಕರೆ ಮಾಡಿ, ವಿಷಯ ತಿಳಿಸಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಬಾಗಿಲು ಒಡೆದು ಒಳ ಹೋದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.

ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ: ತನಗೆ ಕ್ಯಾನ್ಸರ್‌ ರೋಗವಿದ್ದು, ಅದನ್ನು ಗುಣಪಡಿಸಿಕೊಳ್ಳಲು ಬೇಕಾದಷ್ಟು ಹಣವಿಲ್ಲ. ಒಂದು ವೇಳೆ ತಾನೂ ಸತ್ತರೆ, ತನ್ನ ಹೆಂಡತಿ, ಮಗ ಅನಾಥರಾಗುತ್ತಾರೆ. ಹೀಗಾಗಿ ಮೂವರು ಒಟ್ಟಿಗೆ ಸಾಯುತ್ತಿದ್ದೇವೆ ಎಂದು ಉಲ್ಲೇಖೀಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.