ಆನೆಗೊಂದಿ ಭಾಗದ ರೈತರಿಗೆ ತಲೆಬೇನೆ: ಅರಣ್ಯ ಭೂಮಿ ತೆರವುಗೊಳಿಸುವಂತೆ ಅರಣ್ಯ ಇಲಾಖೆ ನೋಟಿಸ್

Team Udayavani, Aug 20, 2022, 2:00 PM IST

ಆನೆಗೊಂದಿ ಭಾಗದ ರೈತರಿಗೆ ತಲೆಬೇನೆ: ಅರಣ್ಯ ಭೂಮಿ ತೆರವುಗೊಳಿಸುವಂತೆ ಅರಣ್ಯ ಇಲಾಖೆ ನೋಟಿಸ್

ಗಂಗಾವತಿ : ತಾಲ್ಲೂಕಿನ ಆನೆಗೊಂದಿ ಭಾಗದ ರೈತರು ಪದೇಪದೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅಂಜನಾದ್ರಿ ಅಭಿವೃದ್ಧಿಗಾಗಿ ಸುಮಾರು 62  ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರಕಾರ ನಿರ್ಧರಿಸಿರುವ ಬೆನ್ನಲ್ಲೇ ಅರಣ್ಯ ಇಲಾಖೆ ಸಾಣಾಪುರದ ಸರ್ವೆ ನಂ 1 ಹಾಗೂ ಹನುಮನಹಳ್ಳಿ ಗ್ರಾಮದ ಸರ್ವೆ ನಂ  20 ರಲ್ಲಿ ನೂರಾರು ಎಕರೆ ಅರಣ್ಯ  ಭೂಮಿಯನ್ನು ರೈತರು ಒತ್ತುವರಿ ಮಾಡಿಕೊಂಡಿದ್ದು ಕಂದಾಯ ಇಲಾಖೆಯ ಪಹಣಿ ಎದೆ ಅರಣ್ಯ ಇಲಾಖೆಯ ಮೀಸಲು ಭೂಮಿ ಎಂದು ಇರುವುದರಿಂದ ಕೂಡಲೇ ರೈತರು ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ತಾಲ್ಲೂಕು ಅರಣ್ಯ ಸಂರಕ್ಷಣಾಧಿಕಾರಿ   ಸುಮಾರು ನೂರಕ್ಕೂ ಹೆಚ್ಚು ರೈತರಿಗೆ ನೋಟಿಸ್ ಜಾರಿ ಮಾಡಿದೆ.

ಇದರಿಂದ ಆನೆಗೊಂದಿ ಭಾಗದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ  60-70  ದಶಕದಿಂದಲೂ ಆನೆಗೊಂದಿ ಭಾಗದಲ್ಲಿ ರೈತರು ಭೂಮಿಯನ್ನು ಉಳುಮೆ ಮಾಡಿ ಬದುಕು ನಡೆಸುತ್ತಿದ್ದಾರೆ ಇದರಲ್ಲಿ ಕೆಲವರಿಗೆ 1973 ಮತ್ತು 2003-04 ರಲ್ಲಿ  ಕಂದಾಯ ಇಲಾಖೆ ಸಾಗುವಳಿ ಚೀಟಿ ನೀಡಿದ್ದು ಇದರಿಂದ ರೈತರು ಬ್ಯಾಂಕುಗಳು ಸೇರಿದಂತೆ ಆತ ಸಂಸ್ಥೆಯಲ್ಲಿ ಭೂಮಿಯನ್ನು ಅಡವಿಟ್ಟು ಕೃಷಿ ಮಾಡುತ್ತಿದ್ದಾರೆ.

2008-09 ವರೆಗೂ ರೈತರ ರಲ್ಲಿ ಪಹಣಿಗಳಿದ್ದು ನಂತರ ಅರಣ್ಯ ಭೂಮಿ ಸರಕಾರಿ ಭೂಮಿ ಎಂದು ಪಹಣಿಯಲ್ಲಿ ತಿದ್ದುಪಡಿಯಾಗಿವೆ .ಆನೆಗೊಂದಿ ಭಾಗದಲ್ಲಿ ಕೃಷಿ ಉಳಿದ ಮಾಡಲು ಕೇವಲ 10 ಸಾವಿರ ಎಕರೆ ಕೃಷಿ ಭೂಮಿ ಇದ್ದು ಉಳಿದ ಸಾವಿರಾರು ಎಕರೆ ಭೂಮಿಯಲ್ಲಿ ಬೆಟ್ಟಗುಡ್ಡಗಳಿವೆ. ಇದರಿಂದ ಈ ಭಾಗದಲ್ಲಿ ಕೃಷಿ ಭೂಮಿ ಕಡಿಮೆ ಇದ್ದು ಅರಣ್ಯ ಇಲಾಖೆ ಕಂದಾಯ ಇಲಾಖೆಯವರು ಕೂಡಲೇ ರೈತರಿಗೆ ಅಧಿಕೃತವಾಗಿ ಪಟ್ಟ ಪಹಣಿ ವಿತರಣೆ ಮಾಡುವ ಮೂಲಕ ಅವರಿಗೆ ಸಾಮಾಜಿಕ ಭದ್ರತೆ ನೀಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ತೆರವಿಗೆ ಸೂಚನೆ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ನ್ಯಾಯಾಲಯ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿ ಸಾಗುವಳಿ ಮಾಡುವ ರೈತರಿಗೆ ನೋಟಿಸ್ ನೀಡಿ ಕೂಡಲೇ ಅರಣ್ಯ ಭೂಮಿಯನ್ನು ತೆರವು ಮಾಡಿಸುವಂತೆ ಸೂಚನೆ ನೀಡಿದ್ದರಿಂದ ನ್ಯಾಯಾಲಯದ ಆದೇಶವನ್ನು ಪಾಲಿಸಿ ಅರಣ್ಯ ಒತ್ತುವರಿ ಮಾಡಿದ ರೈತರಿಗೆ ನೋಟಿಸ್ ನೀಡಲಾಗಿದೆ ಸಾಣಾಪುರ ಹನುಮನ ಹಿನ್ನಲೆಯಲ್ಲಿ ಅರಣ್ಯ ಭೂಮಿಯನ್ನು ರೈತರು ಒತ್ತುವರಿ ಮಾಡಿ ಕಳೆದ ಹಲವು ವರ್ಷಗಳಿಂದ ಕೃಷಿ ಮಾಡುತ್ತಿದ್ದಾರೆ ಇದರಿಂದ ಅರಣ್ಯದ ವಿಸ್ತೀರ್ಣ ಕಡಿಮೆಯಾಗಿದ್ದು ಕೂಡಲೇ ರೈತರು ಒತ್ತುವರಿ ತೆರವು ಮಾಡಿ ಅರಣ್ಯ ಇಲಾಖೆ ಸಹಕರಿಸುವಂತೆ ತಾಲ್ಲೂಕು ಅರಣ್ಯ ಸಂರಕ್ಷಣಾಧಿಕಾರಿ ಶಿವರಾಜ ಮೇಟಿ ಉದಯವಾಣಿಗೆ ತಿಳಿಸಿದ್ದಾರೆ .

ಸರ್ಕಾರ ನೆರವಿಗೆ ಬರಬೇಕು: ಕಳೆದ ಹಲವು ದಶಕಗಳಿಂದ ಹನುಮನಹಳ್ಳಿ ಸಣಾಪುರ ಭಾಗದಲ್ಲಿ ಸರ್ಕಾರಿ ಭೂಮಿಯನ್ನು ಸಾಗುವಳಿ ಮಾಡುತ್ತಿದ್ದು ಸಾಗುವಳಿ ಚೀಟಿ ನೀಡಲು ಸರ್ಕಾರ ವಿಸ್ತರಿಸಿದೆ. ಈಗ ಅರಣ್ಯ ಇಲಾಖೆಯವರು ಅರಣ್ಯ ಭೂಮಿ ಒತ್ತುವರಿ ಮಾಡಿದ್ದು ಕೂಡಲೇ ತೆರವು ಮಾಡಿಸುವಂತೆ ಅರಣ್ಯ ಸಂರಕ್ಷಣಾ ನ್ಯಾಯಾಲಯದ ಮೂಲಕ ನೋಟಿಸ್ ಜಾರಿ ಮಾಡಿದ್ದು ರಾಜ್ಯ ಸರಕಾರ ಮತ್ತು ಕಂದಾಯ ಇಲಾಖೆ ರೈತರ ನೆರವಿಗೆ ಬರಬೇಕಿದೆ. ರೈತರಿಗೆ ಸಾಗುವಳಿ ಚೀಟಿಯನ್ನು ವಿತರಣೆ ಮಾಡಿದ್ದು ಈಗ ಒಕ್ಕಲೆಬ್ಬಿಸಿದರೆ ರೈತರ ಬದುಕು ಮೂರಾಬಟ್ಟೆಯಾಗುತ್ತದೆ. ದಯವಿಟ್ಟು ಸರ್ಕಾರ ರೈತ ನೆರವಿಗೆ ಬರುವಂತೆ ಹನುಮನಹಳ್ಳಿ ಸಣಾಪುರ ಜಂಗ್ಲಿ ಭಾಗದ ರೈತರಾದ ಸಣ್ಣಲಿಂಗಪ್ಪ, ತಮ್ಮಣ್ಣ, ಕಾಶೀಮಲಿ, ನಾಗರಾಜು ಕೋರಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.