ಕರಾವಳಿಯಾದ್ಯಂತ ಉತ್ತಮ ಮಳೆ : ಆ. 24, 25 ಎಲ್ಲೋ ಅಲರ್ಟ್‌

Team Udayavani, Aug 24, 2022, 9:16 AM IST

ಕರಾವಳಿಯಾದ್ಯಂತ ಉತ್ತಮ ಮಳೆ : ಆ. 24, 25 ಎಲ್ಲೋ ಅಲರ್ಟ್‌

ಮಂಗಳೂರು/ಉಡುಪಿ : ಕರಾವಳಿ ಭಾಗದಲ್ಲಿ ಮುಂಗಾರು ತುಸು ಬಿರುಸು ಪಡೆದಿದೆ. ಸೋಮವಾರ ರಾತ್ರಿ ಮತ್ತು ಮಂಗಳವಾರ ಕರಾವಳಿಯ ಹೆಚ್ಚಿನ ಕಡೆ ಉತ್ತಮ ಮಳೆಯಾಗಿದೆ.
ದ.ಕ. ಜಿಲ್ಲೆಯ ಹಲವು ಕಡೆಗಳಲ್ಲಿ ಮಂಗಳವಾರ ಹಗಲಿನಲ್ಲಿ ಮತ್ತು ರಾತ್ರಿ ವೇಳೆ ಉತ್ತಮ ಮಳೆಯಾಗಿದೆ.

ಸುಳ್ಯ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಬೆಳಗ್ಗೆಯಿಂದಲೇ ಉತ್ತಮ ಮಳೆ ಸುರಿದಿದೆ. ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿಯೂ ಉತ್ತಮ ಮಳೆ ಸುರಿದಿದೆ. ಬಂಟ್ವಾಳ ತಾಲೂಕಿನ ವಿವಿಧೆಡೆ ಸೋಮವಾರ ರಾತ್ರಿ ಬಳಿಕ ಭಾರೀ ಮಳೆ ಸುರಿದಿದೆ. ಮಂಗಳವಾರ ಬೆಳಗ್ಗೆ 8.30ರ ವರೆಗಿನ ಹಿಂದಿನ 24 ತಾಸುಗಳಲ್ಲಿ ಮಾಣಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ ಎನಿಸಿದ 16 ಸೆಂ.ಮೀ. ಮಳೆ ಸುರಿದಿದೆ. ತಾಲೂಕಿನ ವಿವಿಧೆಡೆ ಮಂಗಳವಾರ ಹಗಲಿನಲ್ಲಿ ಕೂಡ ಉತ್ತಮ ಮಳೆಯಾಗಿದೆ. ಮಂಗಳೂರು ನಗರ ಪ್ರದೇಶಗಳ‌ಲ್ಲಿ ಬೆಳಗ್ಗೆ ಆರಂಭವಾದ ಮಳೆ ಮಧ್ಯಾಹ್ನ ವೇಳೆ ತುಸು ಬಿಡುವು ನೀಡಿತ್ತು. ರಾತ್ರಿ ಮತ್ತೆ ಉತ್ತಮ ಮಳೆಯಾಗಿದೆ.

ಉಡುಪಿ ಜಿಲ್ಲೆ: ಧಾರಾಕಾರ ಮಳೆ
ಉಡುಪಿ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ, ಮಂಗಳವಾರ ಧಾರಾಕಾರ ಮಳೆ ಸುರಿದಿದೆ. ಉಡುಪಿ, ಮಣಿಪಾಲ, ಮಲ್ಪೆ, ಕಾಪು, ಕಟಪಾಡಿ ಸುತ್ತಮುತ್ತ ಮಂಗಳವಾರ ಮಧ್ಯಾಹ್ನ ಬಳಿಕ ನಿರಂತರ ಮಳೆ ಸುರಿದಿದೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಸಾಧಾರಣ ಮಳೆಯಾಗಿತ್ತು. ಆದರೆ ಸಂಜೆಯ ವೇಳೆ ಬಿರುಸಾಗಿ ಮಳೆ ಸುರಿಯಲಾರಂಭಿಸಿತು. ಸೋಮವಾರ ರಾತ್ರಿ ಕೂಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿತ್ತು.

ನಗರದಲ್ಲಿ ಚರಂಡಿ ಅವ್ಯವಸ್ಥೆಯಿಂದಾಗಿ ರಸ್ತೆ ಮೇಲೆ ನೀರು ಹರಿಯಿತು. ಲಕ್ಷ್ಮೀಂದ್ರ ನಗರ, ಇಂದ್ರಾಳಿ ಸೇತುವೆ ಬಳಿ ವಾಹನ ಸವಾರರು ಸಂಕಷ್ಟ ಅನುಭವಿಸಿದರು. ಕೃಷಿ ಭೂಮಿ, ತಗ್ಗು ಪ್ರದೇಶದಲ್ಲಿ ಕೃತಕ ನೆರೆ ಆವರಿಸಿದೆ.

ಎಲ್ಲೋ ಅಲರ್ಟ್‌
ಕರಾವಳಿ ಭಾಗದಲ್ಲಿ ಮಳೆ ಮುಂದುವರಿಯುವ ನಿರೀಕ್ಷೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಆ. 24 ಮತ್ತು 25ನೇ ತಾರೀಖೀಗೆ “ಎಲ್ಲೋ ಅಲರ್ಟ್‌’ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿಯೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಇರುವು ದರಿಂದ ಕೆಲವೊಮ್ಮೆ ರಭಸವಾಗಿ ಗಾಳಿ ಬೀಸುವ ಸಾಧ್ಯತೆ ಇರುತ್ತದೆ. ಮೀನುಗಾರರು ಎಚ್ಚರಿಕೆ ಯಿಂದ ಇರಬೇಕೆಂದು ಇಲಾಖೆ ತಿಳಿಸಿದೆ. ಆ. 25ರ ಬಳಿಕ ಮಳೆ ಕಡಿಮೆಯಾಗುವ ನಿರೀಕ್ಷೆ ಹೊಂದಲಾಗಿದೆ.

ಟಾಪ್ ನ್ಯೂಸ್

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.