ನಿರ್ಲಕ್ಷ್ಯ ವಹಿಸಿದ್ದ ವೈದ್ಯ-ಸಿಬ್ಬಂದಿಗೆ 15 ಲಕ್ಷ ರೂ ದಂಡ

Team Udayavani, Aug 26, 2022, 6:09 PM IST

16court

ವಿಜಯಪುರ: ಸರ್ಕಾರಿ ಆಸ್ಪತ್ರೆಯಲ್ಲಿ ಬೇಜವಾಬ್ದಾರಿಯಿಂದ ಹೆರಿಗೆ ಮಾಡಿ, ಮಹಿಳೆಯೊಬ್ಬಳು ಮೃತಪಟ್ಟಿದ್ದಳು. ಈ ಕುರಿತು ದಾಖಲಾದ ದೂರಿನಂತೆ ಪ್ರಕರಣದ ವಿಚಾರಣೆ ನಡೆಸಿದ ವಿಜಯಪುರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ನಿರ್ಲಕ್ಷ್ಯ ವಹಿಸಿದ ಸರ್ಕಾರಿ ವೈದ್ಯರಿಗೆ 15 ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

ವಿಜಯಪುರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಅಂಬಾದಾಸ ಕುಲಕರ್ಣಿ ಈ ಆದೇಶ ನೀಡಿದ್ದಾರೆ. ದೂರು ದಾಖಲಾದ ಬಳಿಕ ಎದುರಾಳಿಗಳಿಗೆ ತಮ್ಮ ಪರ ಅಗತ್ಯ ಸಾಕ್ಷ್ಯಾಧಾರ, ಆಕ್ಷೇಪವಿದ್ದಲ್ಲಿ ಸಲ್ಲಿಸುವಂತೆ ಸಾಕಷ್ಟು ಅವಕಾಶ ನೀಡಿದ್ದರೂ ಸ್ಪಂದಿಸಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಣಮಾಪುರ ಗ್ರಾಮದ ಸುರೇಶ ಮಜ್ಜಗಿ, ಮತ್ತವರ ಮಗಳು ಸುಮಿತಾ ಇಬ್ಬರೂ 20-11-2019 ರಂದು ಜಂಟಿಯಾಗಿ ವಿಜಯಪುರ ಜಿಲ್ಲೆಯ ತಿಕೋಟಾ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ 4 ಜನ ಸಿಬ್ಬಂದಿ ವಿರುದ್ಧ ವಿಜಯಪುರ ಜಿಲ್ಲಾ ಗ್ರಾಹಕರ ಆಯೋಗದಲ್ಲಿ ದೂರು ಸಲ್ಲಿಸಿದ್ದರು. ದೂರಿಗೆ ಸಂಬಂಧಿಸಿದಂತೆ ಹಾಜರುಪಡಿಸಿದ ಎಲ್ಲ ದಾಖಲೆ ಪರಿಶೀಲಿಸಿದ ಗ್ರಾಹಕರ ಆಯೋಗ, ಪ್ರಾಥಮಿಕ ಆರೋಗ್ಯ ಕೇಂದ್ರದ ನಾಲ್ವರು ಸಿಬ್ಬಂದಿ ನಿಷ್ಕಾಳಜಿಯಿಂದ ಸೇವಾ ನ್ಯೂನತೆ ಜರುಗಿದೆ. ನಾಲ್ವರೂ ಸಿಬ್ಬಂದಿ ಸೇರಿ ಬಾಧಿತ ದೂರುದಾರರಿಗೆ 15 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದೆ.

15 ಲಕ್ಷ ರೂ. ಪರಿಹಾರದಲ್ಲಿ ಜವಾಬ್ದಾರಿಯುತ ಹುದ್ದೆಯಲ್ಲಿನ ಅಧಿಕಾರಿ 11 ಲಕ್ಷ ರೂ. ಪರಿಹಾರಧನ, 2 ರಿಂದ 4 ಜನ ಸಿಬ್ಬಂದಿ ಪ್ರತ್ಯೇಕವಾಗಿ ಅಥವಾ ಕೂಡಿಕೊಂಡು ಪರಿಹಾರದ ಮೊತ್ತ 4 ಲಕ್ಷ ರೂ. ಸೇರಿಸಿ ನೀಡಬೇಕು. 15 ಲಕ್ಷ ರೂ. ಪರಿಹಾರ ಮೊತ್ತಕ್ಕೆ ಶೇ.9ರಂತೆ ಬಡ್ಡಿಯೊಂದಿಗೆ ದೂರು ದಾಖಲಾದ ದಿನಾಂಕದಿಂದ ನೀಡಬೇಕು. ಇದಲ್ಲದೇ ನಿರ್ಲಕ್ಷ್ಯ ವಹಿಸಿದ ನಾಲ್ವರೂ ಸೇರಿ 25 ಸಾವಿರ ರೂ. ಮಾನಸಿಕ ವ್ಯಥೆಗೆ ಮತ್ತು 10 ಸಾವಿರ ರೂ. ದೂರಿನ ಖರ್ಚನ್ನು ದೂರುದಾರರಿಗೆ ನೀಡಬೇಕು ಎಂದು ಆದೇಶಿಸಿದೆ.

ಪರಿಹಾರದ ಮೊತ್ತ ಇಬ್ಬರೂ ಅರ್ಜಿದಾರರು ಸಮಾನಾಗಿ ಹಂಚಿಕೆ ಮಾಡಿಕೊಳ್ಳಬೇಕು. ಆದೇಶ ಹೊರಬಿದ್ದ 1 ತಿಂಗಳಲ್ಲಿ ಪರಿಹಾರ ವಿತರಿಸಬೇಕು. ತಪ್ಪಿದ್ದಲ್ಲಿ ಸದರಿ ಪರಿಹಾರದ ಮೊತ್ತಕ್ಕೆ ಶೇ.12 ರೂ. ಬಡ್ಡಿ ಸಹಿತ ನೀಡಬೇಕು. 2ನೇ ದೂರುದಾರಳು ಅಪ್ರಾಪ್ತಳಾಗಿದ್ದು, ಆಕೆ ವಯಸ್ಕಳಾಗುವವರೆಗೆ ಅವಳ ಪಾಲಿನ ಸಮಾನ ಹಂಚಿಕೆ ಹಣ ಯಾವುದಾದರೂ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಠೇವಣಿ ಮಾಡಬೇಕು ಎಂದು ಆದೇಶಿಸಿದೆ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ವಿ.ಬಿ. ಮುತಾಲಿಕ ದೇಸಾಯಿ, ಕಮಲಕಿಶೋರ್‌ ಜೋಶಿ ಅವರನ್ನೊಳಗೊಂಡ ಆಯೋಗ ಈ ಆದೇಶ ನೀಡಿದೆ.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.