ಗುತ್ತಿಗೆ ಆಧಾರದ ಮೇಲೆ ಇಂಜಿನಿಯರ್ ನೇಮಕಕ್ಕೆ ಸಿಎಂ ಸಮ್ಮತಿ: ಶಾಸಕ ಹಾಲಪ್ಪ

Team Udayavani, Sep 1, 2022, 6:16 PM IST

1-dadadada

ಸಾಗರ: ತಾಲೂಕಿನಲ್ಲಿ ಸಹಾಯಕ ಕಾರ್ಯಪಾಲಕ ಮತ್ತು ಕಿರಿಯ ಅಭಿಯಂತರರ ಕೊರತೆ ಇದೆ. ಕೊರತೆ ಇರುವ ಇಂಜಿನೀಯರ್‌ಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಮುಖ್ಯಮಂತ್ರಿಗಳು ಸಮ್ಮತಿಸಿದ್ದಾರೆ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ ಸಾಗರ, ಹೊಸನಗರ ಅಭಿಯಂತರರ ಜೊತೆ ಸಮಾಲೋಚನೆ ಮತ್ತು ಸೊರಬ ರಸ್ತೆ ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಮಾತನಾಡಿದ ಅವರು, ಗುತ್ತಿಗೆ ಅಭಿಯಂತರರಿಗೆ 21 ರಿಂದ 28 ಸಾವಿರ ರೂಪಾಯಿವರೆಗೆ ವೇತನ ನೀಡಲಾಗುತ್ತದೆ ಎಂದರು.

ತಾಲೂಕಿನಲ್ಲಿ ಇಂಜಿನಿಯರ್‌ಗಳ ಕೊರತೆಯಿಂದ ಮತ್ತು ಕೆಲವು ತಾಂತ್ರಿಕ ಸಮಸ್ಯೆಯಿಂದ ಕಾಮಗಾರಿಗಳು ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಗುರುವಾರ ಅಧಿಕಾರಿಗಳ ಸಭೆ ನಡೆಸಿ ಬಾಕಿ ಇರುವ ಕಾಮಗಾರಿಗಳನ್ನು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲು ಚರ್ಚೆ ನಡೆಸಲಾಗಿದೆ. ನೆರೆಹಾನಿಯಿಂದ ಸಂಕಷ್ಟದಲ್ಲಿರುವವರಿಗೆ ಸರ್ಕಾರ ಪೂರಕವಾಗಿ ಸ್ಪಂದಿಸುತ್ತಿದೆ. ಪರಿಹಾರ ಮೊತ್ತವನ್ನು ಹಂತಹಂತವಾಗಿ ವಿತರಣೆ ಮಾಡಲಾಗುತ್ತಿದೆ. ೧೯೨ಎ ಕಾಯ್ದೆ ತಿದ್ದುಪಡಿಯಿಂದ ಸಾಕಷ್ಟು ರೈತರಿಗೆ ಅನುಕೂಲವಾಗುತ್ತದೆ. ಇದನ್ನು ಚುನಾವಣೆ ಗಿಮಿಕ್ ಎನ್ನುವ ಕಾಂಗ್ರೆಸ್ಸಿಗರು ತಮ್ಮ ಅವಧಿಯಲ್ಲಿ ಏಕೆ ಜಾರಿಗೆ ತರಲಿಲ್ಲ ಎಂದು ಪ್ರಶ್ನಿಸಿದರು.

ಸೊರಬ ರಸ್ತೆ ಅಗಲೀಕರಣ ಶೀಘ್ರ
ಮಳೆ ಹಿನ್ನೆಲೆಯಲ್ಲಿ ಸೊರಬ ರಸ್ತೆ ಅಗಲೀಕರಣಕ್ಕೆ ಸ್ವಲ್ಪ ತೊಂದರೆಯಾಗಿದೆ. ರಸ್ತೆ ಅಗಲೀಕರಣಕ್ಕೆ ೨೦ ಕೋಟಿ ರೂ. ಮಂಜೂರಾಗಿದ್ದು ಈ ಪೈಕಿ ೧೬ ಕೋಟಿ ರೂ. ಪರಿಹಾರ ನೀಡಲಾಗಿದ್ದು, ಇನ್ನು ೪ ಕೋಟಿ ರೂ. ಇದ್ದು ಅದನ್ನು ಪರಿಹಾರಕ್ಕೆ ವಿನಿಯೋಗಿಸಲಾಗುತ್ತಿದೆ. ರಸ್ತೆ ನಿರ್ಮಾಣಕ್ಕೆ 10 ಕೋಟಿ ರೂ. ಮೀಸಲಿರಿಸಲಾಗಿದೆ. ರಸ್ತೆ ಅಗಲೀಕರಣಕ್ಕೆ ಹಣಕಾಸಿನ ಸಮಸ್ಯೆ ಇಲ್ಲ. ನಿವಾಸಿಗಳು ತಮ್ಮ ಜಾಗ ಬಿಟ್ಟು ಕೊಡಲು ಸ್ವಲ್ಪ ವಿಳಂಬವಾಗಿತ್ತು. ಅವರ ಮನವೊಲಿಸುವ ಪ್ರಯತ್ನ ನಡೆಸಲಾಗುತ್ತಿದೆ. ಈತನಕ ಅಗಲೀಕರಣಕ್ಕೆ ಜಾಗ ಬಿಟ್ಟು ಕೊಡದೆ ಇರುವವರು ತಕ್ಷಣ ಜಾಗ ಬಿಟ್ಟು ಕೊಟ್ಟರೆ ಅಗಲೀಕರಣ ಕಾಮಗಾರಿ ತಕ್ಷಣ ನಡೆಯುತ್ತದೆ ಎಂದು ಹೇಳಿದರು.

ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ.ಮಹೇಶ್, ಸದಸ್ಯ ಟಿ.ಡಿ.ಮೇಘರಾಜ್, ಸಹಾಯಕ ಆಯುಕ್ತೆ ಪಲ್ಲವಿ ಸಾತೇನಹಳ್ಳಿ, ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್, ಸಾಗರ ಮತ್ತು ಹೊಸನಗರ ತಾಲೂಕಿನ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

10

Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Rahul Gandhi: 400 ಮಹಿಳೆಯರ ಮೇಲೆ  ಪ್ರಜ್ವಲ್‌ ಅತ್ಯಾಚಾರ – ರಾಹುಲ್‌ ಗಾಂಧಿ

Rahul Gandhi: 400 ಮಹಿಳೆಯರ ಮೇಲೆ  ಪ್ರಜ್ವಲ್‌ ಅತ್ಯಾಚಾರ – ರಾಹುಲ್‌ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.