ಜಾರ್ಖಂಡ್ನಲ್ಲಿ ಗುಂಡಿನ ಚಕಮಕಿ: ಇಬ್ಬರು ನಕ್ಸಲರ ಹತ್ಯೆ
Team Udayavani, Sep 2, 2022, 1:01 PM IST
ಸೆರೈಕೆಲಾ: ಜಾರ್ಖಂಡ್ನ ಸೆರೈಕೆಲಾ-ಖಾರ್ಸಾವಾನ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಭದ್ರತಾ ಪಡೆಗಳೊಂದಿಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಆರ್ಪಿಎಫ್ನ ಕೋಬ್ರಾ, ಜಾರ್ಖಂಡ್ ಜಾಗ್ವಾರ್ ಮತ್ತು ರಾಜ್ಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕುಚೈ ಪೊಲೀಸ್ ಠಾಣೆ ವ್ಯಾಪ್ತಿಯ ಬರುಡಾ ಅರಣ್ಯದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಸಿಪಿಐ(ಮಾವೋವಾದಿ) ಸದಸ್ಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೃತದೇಹಗಳನ್ನು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ವಶಪಡಿಸಿಕೊಳ್ಳಲಾಗಿದೆ. ಕೊನೆಯ ವರದಿ ಬಂದಾಗ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ ಎಂದು ಕೊಲ್ಹಾನ್ ವಿಭಾಗದ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಅಜಯ್ ಲಿಂಡಾ ಪಿಟಿಐಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ