ಅಕ್ರಮವಾಗಿ ಮಗಳಿಗೆ ಗುತ್ತಿಗೆ: ಎಲ್ಜಿ ವಿರುದ್ಧ ಆಪ್ ಆರೋಪ
Team Udayavani, Sep 2, 2022, 8:30 PM IST
ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ(ಕೆವಿಐಸಿ)ದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅವರ ಮಗಳಿಗೆ ಅಕ್ರಮವಾಗಿ ಖಾದಿ ಲಾಂಜ್ನ ಒಳಾಂಗಣ ವಿನ್ಯಾಸದ ಗುತ್ತಿಗೆ ನೀಡಿದ್ದರು ಎಂದು ಅಮ್ ಆದ್ಮಿ ಪಕ್ಷ(ಆಪ್) ಆರೋಪಿಸಿದೆ.
ಜತೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ಸಕ್ಸೇನಾ ಅವರನ್ನು ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ವಜಾಗೊಳಿಸಬೇಕು,” ಎಂದು ಆಪ್ ನಾಯಕ ಸಂಜಯ್ ಸಿಂಗ್ ಆಗ್ರಹಿಸಿದರು. ಅಲ್ಲದೇ, ಸಕ್ಸೇನಾ ವಿರುದ್ಧ ಕೋರ್ಟ್ ಮೆಟ್ಟಿಲೇರುವುದಾಗಿಯೂ ಎಚ್ಚರಿಸಿದರು.
ಸಕ್ಸೇನಾ ಅವರ ವಿರುದ್ಧ ಆರೋಪಗಳ ಸರಣಿಯನ್ನು ಆಪ್ ಮುಂದುವರಿಸಿದೆ. ಕೆವಿಐಸಿ ಅಧ್ಯಕ್ಷರಾಗಿದ್ದ ಸಕ್ಸೇನಾ ಅವರು ನೋಟು ಅಮಾನ್ಯದ ಸಂದರ್ಭದಲ್ಲಿ 1,400 ಕೋಟಿ ರೂ.ಗಳ ವಿನಿಮಯಕ್ಕೆ ಅನುಕೂಲ ಮಾಡಿಕೊಟ್ಟಿದ್ದರು ಎಂದು ಇತ್ತೀಚೆಗೆ ಆಪ್ ಆರೋಪಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ