ದಲಿತ ಕುಟುಂಬಗಳಿಗೆ ಹಕ್ಕು ಪತ್ರ ನೀಡಿ; ಯಮನಪ್ಪ ಗುಣದಾಳ

ನೊಂದ ಕುಟುಂಬಗಳಿಗೆ ನಿವೇಶನ ಗುರುತಿಸಿ ಅವರಿಗೆ ನ್ಯಾಯ ಒದಗಿಸಿಕೊಡಬೇಕು

Team Udayavani, Sep 3, 2022, 1:19 PM IST

ದಲಿತ ಕುಟುಂಬಗಳಿಗೆ ಹಕ್ಕು ಪತ್ರ ನೀಡಿ; ಯಮನಪ್ಪ ಗುಣದಾಳ

ರಬಕವಿ-ಬನಹಟ್ಟಿ: ರಬಕವಿಯ ನಗರದ ಸರ್ವೆ ನಂ. 64/1+2 ರಲ್ಲಿ ಅಂದಾಜು 100 ದಲಿತ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಮಾಡದೆ ಇರುವುದರಿಂದ ಈ ದಲಿತ ಕುಟುಂಬಗಳು ಜೀವನ ನಿರ್ವಹಿಸುವುದು ಕಠಿಣವಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಗಮನ ನೀಡಿ ಹದಿನೈದು ದಿನಗಳ ಒಳಗಾಗಿ ನಿವೇಶನ ನೀಡದೆ ಹೋದರೆ ನಗರಸಭೆ ಹಾಗೂ ಸ್ಥಳೀಯ ಶಾಸಕರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘದ ಮುಖಂಡ ಯಮನಪ್ಪ ಗುಣದಾಳ ಹೇಳಿದರು. ಸ್ಥಳೀಯ ನಗರಸಭೆ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಭೀಮವಾದ ಸಂಘವು ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಈಗಾಗಲೇ ಇಲ್ಲಿಯ 900ಕ್ಕೂ ಹೆಚ್ಚು ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಆದರೆ, ದಲಿತ ಕುಟುಂಬಗಳಿಗೆ ಮಾತ್ರ ನಿವೇಶನ ನೀಡಿಲ್ಲ. ಈ ಕುರಿತು ಇಲ್ಲಿಯ ಜನರು ಜಿಲ್ಲಾ ಧಿಕಾರಿಗಳಿಗೆ, ಪೌರಾಯುಕ್ತರಿಗೆ, ತಹಶೀಲ್ದಾರ್‌ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ನೀಡಿದರೂ ಪ್ರಯೋಜನವಾಗಿಲ್ಲ.

ಬಾಗಲಕೋಟೆಯ ಪೊಲೀಸ್‌ ವರಿಷ್ಠಾಧಿಕಾರಿಗಳು ಕರೆದ ದಲಿತರ ಕುಂದುಕೊರತೆ ಸಭೆಯಲ್ಲೂ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ದಲಿತ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಮಾಡಬೇಕು ಎಂದು ಯಮನಪ್ಪ ಗುಣದಾಳ ತಿಳಿಸಿದರು.

ಮತ್ತೋರ್ವ ಮುಖಂಡ ಪರಶುರಾಮ ನೀಲನಾಯಕ ಮಾತನಾಡಿದರು. ನಿವೇಶನರಹಿತರಿಗೆ ಆದಷ್ಟು ಬೇಗನೆ ಹಕ್ಕು ಪತ್ರಗಳನ್ನು ನೀಡಬೇಕು, ನಕಾಶೆಯನ್ನು ತಿದ್ದುಪಡಿ ಮಾಡಿದ ಕಾರಣ ನಿವೇಶನಗಳನ್ನು ನೀಡಲು ವಿಳಂಬವಾಗಿದೆ. ಈ ಕುಟುಂಬಗಳಿಗೆ ಅನ್ಯಾಯವಾಗಲು ಕಾರಣರಾದ ನಗರಸಭೆಯ ಅ ಧಿಕಾರಿ ಮುಖೇಶ ಬನಹಟ್ಟಿಯವರನ್ನು ಅಮಾನತು ಮಾಡಬೇಕು. ನೊಂದ ಕುಟುಂಬಗಳಿಗೆ ನಿವೇಶನ ಗುರುತಿಸಿ ಅವರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ತಮ್ಮ ಹಕ್ಕೊತ್ತಾಯಗಳನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಭೀಮವಾದ ಕಾರ್ಯಕರ್ತರು ಮಂಡಿಸಿದರು. ಪ್ರತಿಭಟನಾಕಾರರು ರಬಕವಿಯ ಹೊಸ ಬಸ್‌ ನಿಲ್ದಾಣದಿಂದ ರಬಕವಿ ಬನಹಟ್ಟಿ ನಗರಸಭೆಯವರೆಗೆ ಪ್ರತಿಭಟನಾ ಮೆರವಣಿಗೆ ಕೈಗೊಂಡರು. ಪ್ರತಿಭಟನಾಕಾರರು ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಸಂಘದ ಮುಖಂಡರಾದ ಶಾಮ ಕಾಳೆ, ಸುನೀಲ ಹರಿಜನ, ಸುರೇಶ ನಡುವಿನಮನಿ, ಮಾರುತಿ ಮಾದರ, ಯಮನಪ್ಪ ಮಹಾಜನ, ಕುಮಾರ ಬುದ್ನಿ ಸದಸ್ಯರು ಇದ್ದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಭೀಮವಾದ ಸಂಘದ ಸದಸ್ಯರು ನೀಡಿದ ಮನವಿಯನ್ನು ಆಶ್ರಯ ಸಮಿತಿಯ ಮುಂಡಿಡಲಾಗುವುದು. ಸಮಿತಿಯ ಕೈಗೊಂಡ ನಿರ್ಣಯದಂತೆ ಕ್ರಮ ಕೈಗೊಳ್ಳಲಾಗುವುದು.
ಅಶೋಕ ಗುಡಿಮನಿ,
ಪೌರಾಯುಕ್ತರು, ರಬಕವಿ ಬನಹಟ್ಟಿ ನಗರಸಭೆ

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

3-mahalingapur

Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.