ಬಿ.ಸಿ.ರೋಡ್‌-ಜಕ್ರಿಬೆಟ್ಟು ಹೆದ್ದಾರಿ; ಕೊನೆಗೂ ಉರಿದ ಬೀದಿದೀಪ

Team Udayavani, Sep 4, 2022, 10:37 AM IST

3

ಬಂಟ್ವಾಳ: ಬಿ.ಸಿ.ರೋಡ್‌- ಜಕ್ರಿಬೆಟ್ಟು ಚತುಷ್ಪಥ ಕಾಂಕ್ರೀಟ್‌ ಹೆದ್ದಾರಿಯು ಉದ್ಘಾಟನೆಗೊಂಡು 5 ತಿಂಗಳು ಕಳೆದ ಬಳಿಕ ಹೆದ್ದಾರಿ ಮಧ್ಯೆ ಅಳವಡಿಸಿದ ಎಲ್‌ಇಡಿ ಬೀದಿ ದೀಪಗಳು ಉರಿಯಲಾರಂಭಿಸಿವೆ. ಬೀದಿದೀಪಗಳ ನಿರ್ವಹಣೆಯ ಜವಾಬ್ದಾರಿಯನ್ನು ಬಂಟ್ವಾಳ ಪುರಸಭೆ ತೆಗೆದುಕೊಂಡ ಬಳಿಕ ವಿದ್ಯುತ್‌ ಸಂಪರ್ಕ ನೀಡಲಾಗಿದೆ.

ಸುಮಾರು 5 ತಿಂಗಳ ಹಿಂದೆ ಜಿಲ್ಲೆಗೆ ಆಗಮಿಸಿದ್ದ ಕೇಂದ್ರ ಹೆದ್ದಾರಿ ಇಲಾಖೆ ಸಚಿವ ನಿತಿನ್‌ ಘಡ್ಕರಿ ಹೆದ್ದಾರಿಯನ್ನು ಉದ್ಘಾಟಿಸಿದ್ದರು. ಆದರೆ ಹೆದ್ದಾರಿ ಸಂಚಾರಕ್ಕೆ ಮುಕ್ತಗೊಂಡರೂ ಬೀದಿ ದೀಪ ಗಳು ಉರಿಯುತ್ತಿರಲಿಲ್ಲ.

ಈ ಕುರಿತು “ಉದಯವಾಣಿ ಸುದಿನ’ದಲ್ಲಿ ಜು. 30ರಂದು “ಬಿ.ಸಿ.ರೋಡ್‌-ಜಕ್ರಿಬೆಟ್ಟು ಚತು ಷ್ಪಥ ಹೆದ್ದಾರಿ-ಉದ್ಘಾಟನೆಯಾಗಿ 5 ತಿಂಗಳು ಕಳೆದರೂ ಉರಿಯದ ಬೀದಿ ದೀಪ’ ಎಂಬ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಿತ್ತು. ಅದಕ್ಕೆ ಸ್ಪಂದನೆ ಎಂಬಂತೆ ಬೀದಿದೀಪಗಳು ಉರಿಯಲಾರಂಭಿಸಿವೆ. ಹೆದ್ದಾರಿ ಕಾಮಗಾರಿ ಸಂದರ್ಭ ರಾಷ್ಟ್ರೀಯ ಹೆದ್ದಾರಿ ಇಲಾಖೆಯು ಡಿವೈಡರ್‌ಗೆ ಉತ್ತಮ ಗುಣಮಟ್ಟದ ಬೀದಿ ದೀಪಗಳನ್ನು ಅಳವಡಿಸಿತ್ತು. ಅದನ್ನು ಎರಡೂ ರಸ್ತೆ ಗಳಿಗೂ ಹೊಂದಿಕೆಯಾಗುವಂತೆ ಸಿದ್ಧಗೊಳಿಸಲಾಗಿತ್ತು. ಆದರೆ ಅವುಗಳು ಉರಿಯದಿರುವ ಕುರಿತು ಸಾರ್ವಜನಿಕರು ಆಕ್ರೋಶಗಳು ವ್ಯಕ್ತಪಡಿಸಿದ್ದರು.

ಇಲಾಖೆಯು ಬೀದಿ ದೀಪಗಳನ್ನು ಅಳವಡಿಸಿದ್ದರೂ ನಿರ್ವಹಣೆಗೆ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಬಂಟ್ವಾಳ ಪುರಸಭೆಗೆ ಪತ್ರ ಬರೆಯಲಾಗಿತ್ತು. ಪುರಸಭೆಯು ಕಳೆದ ಸಾಮಾನ್ಯ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾವಿಸಿ ಕೌನ್ಸಿಲ್‌ನ ಅನುಮತಿಯನ್ನೂ ಪಡೆಯಲಾಗಿತ್ತು.

ಎಲ್ಲ ಕಡೆ ಅಳವಡಿಸಿಲ್ಲ

ಸುಮಾರು 3.85 ಕಿ.ಮೀ. ಉದ್ದದ ಹೆದ್ದಾರಿ ಮಧ್ಯೆ ಸುಮಾರು 80ರಷ್ಟು ಬೀದಿ ದೀಪಗಳನ್ನು ಅಳವಡಿಸಲಾಗಿದೆ. ಬಂಟ್ವಾಳ ಬೈಪಾಸ್‌ ಜಂಕ್ಷನ್‌, ಭಂಡಾರಿಬೆಟ್ಟು ಹಾಗೂ ಕಾಮಾಜೆ ಕ್ರಾಸ್‌ ಬಳಿ ಬೀದಿದೀಪಗಳನ್ನು ಇನ್ನೂ ಅಳವಡಿಸಿಲ್ಲ ಎಂಬ ಆರೋಪಗಳು ಕೇಳಿ ಬಂದಿದೆ. ಈ ಭಾಗಕ್ಕೂ ಶೀಘ್ರ ದೀಪಗಳನ್ನು ಅಳವಡಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.