ಸ್ವಯಂಪ್ರೇರಿತ ರಕ್ತದಾನಕ್ಕೆ ನೋಂದಣಿ ಆರಂಭ
Team Udayavani, Sep 13, 2022, 8:00 AM IST
ನವದೆಹಲಿ: “ರಕ್ತದಾನ ಅಮೃತ ಮಹೋತ್ಸವ’ದ ಅಂಗವಾಗಿ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಆರೋಗ್ಯ ಸೇತು ಆ್ಯಪ್ ಮತ್ತು ಇ-ರಕ್ತಕೋಶ ಪೋರ್ಟಲ್ನಲ್ಲಿ ನೋಂದಣಿ ಆರಂಭವಾಗಿದೆ.
ಪ್ರಧಾನಿ ಮೋದಿ ಅವರ ಜನ್ಮದಿನವಾದ ಸೆ.17ರಿಂದ ಅ.1ರವರೆಗೆ ದೇಶಾದ್ಯಂತ ಸ್ವಯಂಪ್ರೇರಿತ ಬೃಹತ್ ರಕ್ತದಾನ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಅ.1ರಂದು “ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನ’ ಆಚರಿಸಲಾಗುತ್ತದೆ. ರಕ್ತದಾನದ ಬಗ್ಗೆ ಅರಿವು ಮೂಡಿಸುವ ಜತೆಗೆ ಅಂದು ಒಂದೇ ದಿನ ದೇಶಾದ್ಯಂತ ರಕ್ತದಾನಿಗಳಿಂದ ಒಂದು ಲಕ್ಷ ಯುನಿಟ್ ರಕ್ತ ಸಂಗ್ರಹಿಸುವ ಗುರಿ ಹೊಂದಲಾಗಿದೆ.
ಸ್ವಯಂಪ್ರೇರಿತ ರಕ್ತದಾನಿಗಳ ದೊಡ್ಡ ಗುಂಪನ್ನು ರಚಿಸುವುದು ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಅಭಿಯಾನದ ಅಂಗವಾಗಿ ಕನಿಷ್ಠ ಒಂದು ರಕ್ತದಾನ ಶಿಬಿರ ಆಯೋಜಿಸುವಂತೆ ಪ್ರತಿ ರಕ್ತ ನಿಧಿಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್