ರಾಷ್ಟ್ರೀಯ ಸಿನಿಮಾ ದಿನ ಮುಂದೂಡಿಕೆ; ಸೆ.23ಕ್ಕೆ 75 ರೂ.ಗೆ ಸಿನಿಮಾ ಟಿಕೆಟ್
Team Udayavani, Sep 14, 2022, 7:40 AM IST
ನವದೆಹಲಿ: ಸೆ.16ರಂದು ಆಚರಿಸಬೇಕೆಂದು ನಿರ್ಧರಿಸಲಾಗಿದ್ದ ರಾಷ್ಟ್ರೀಯ ಸಿನಿಮಾ ದಿನವನ್ನು ಸೆ.23ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ(ಎಂಎಐ) ತಿಳಿಸಿದೆ.
ಈ ವಿಶೇಷ ದಿನದ ಆಚರಣೆಯನ್ನು ಹೆಚ್ಚಿನ ಜನರಿಗೆ ತಲುಪಿಸಲು ಸಮಯಾವಕಾಶ ಬೇಕು ಎಂದು ಷೇರುದಾರರು ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆ ಮುಂದೂಡಿಕೆಯ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.
ಸೆ.23ರಂದು ದೇಶಾದ್ಯಂತ ಪಿವಿಆರ್, ಐನಾಕ್ಸ್, ಸಿನಿಪೊಲಿಸ್ ಸೇರಿದಂತೆ ಒಟ್ಟು 4,000 ತೆರೆಗಳಲ್ಲಿ ಸಿನಿಮಾ ಟಿಕೆಟ್ ದರವನ್ನು 75 ರೂ.ಗೆ ವಿತರಿಸಲಾಗುವುದು.
ಕೊರೊನಾ ನಂತರ ಭಾರತೀಯ ಸಿನಿ ಕ್ಷೇತ್ರ ಅತ್ಯುತ್ತಮವಾಗಿ ಚೇತರಿಸಿಕೊಂಡಿರುವ ಹಿನ್ನೆಲೆ ಜನರಿಗೆ ಕೃತಜ್ಞಾಪೂರ್ವವಾಗಿ ಈ ರೀತಿಯ ವಿಶೇಷ ರಿಯಾಯಿತಿ ನೀಡುವುದಾಗಿ ಎಂಎಐ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್