ಗೋಡೆ ಕುಸಿದು 13 ಮಂದಿ ದುರ್ಮರಣ; 4 ಲಕ್ಷ ರೂ. ಪರಿಹಾರ
ಆರ್ಮಿ ಎನ್‌ಕ್ಲೇವ್‌ನ ನಿರ್ಮಾಣ ಹಂತದ ಗಡಿ ಗೋಡೆ ಕುಸಿದು ದುರಂತ
Team Udayavani, Sep 16, 2022, 6:25 PM IST
ಲಕ್ನೋ: ಶುಕ್ರವಾರ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಗೋಡೆಗಳು ಕುಸಿದು ಬಿದ್ದಿದ್ದು, ರಾಜಧಾನಿಯಲ್ಲಿ ಗೋಡೆ ಕುಸಿದು ಒಂಬತ್ತು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಜೀವಂತ ಸಮಾಧಿಯಾದ ಅವಘಡ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ.
ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ 4 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿದೆ. ಲಕ್ನೋದಲ್ಲಿ, ರಾತ್ರಿಯ ಮಳೆಯ ನಂತರ ಆರ್ಮಿ ಎನ್‌ಕ್ಲೇವ್‌ನ ನಿರ್ಮಾಣ ಹಂತದ ಗಡಿ ಗೋಡೆ ಕುಸಿದು ಒಂಬತ್ತು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಯಡಿಯೂರಪ್ಪ ಶುದ್ಧ ಹಸ್ತರಾಗಿ ಹೊರಬರುತ್ತಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
“ಕೆಲವು ಕಾರ್ಮಿಕರು ದಿಲ್ಕುಶಾ ಪ್ರದೇಶದಲ್ಲಿನ ಆರ್ಮಿ ಎನ್‌ಕ್ಲೇವ್‌ನ ಹೊರಗೆ ಗುಡಿಸಲುಗಳಲ್ಲಿ ವಾಸಿಸುತ್ತಿದ್ದರು. ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಸೇನಾ ಆವರಣದ ಗಡಿ ಗೋಡೆ ಕುಸಿದಿದೆ ಎಂದು ಜಂಟಿ ಪೊಲೀಸ್ ಕಮಿಷನರ್ ಪಿಯೂಷ್ ಮೊರ್ಡಿಯಾ ಪಿಟಿಐಗೆ ತಿಳಿಸಿದ್ದಾರೆ.
“ನಾವು ಸುಮಾರು 3 ಗಂಟೆಗೆ ಸ್ಥಳಕ್ಕೆ ತಲುಪಿದೆವು. ಒಂಬತ್ತು ದೇಹಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ. ಒಬ್ಬ ವ್ಯಕ್ತಿಯನ್ನು ಜೀವಂತವಾಗಿ ರಕ್ಷಿಸಲಾಗಿದೆ, ”ಎಂದು ಅವರು ಹೇಳಿದರು.
ಮೃತರು ಝಾನ್ಸಿ ಜಿಲ್ಲೆಯವರಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶದ ರಾಜ್ಯಪಾಲ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಅವರು ಘಟನೆಯಲ್ಲಿ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ
MUST WATCH
ಹೊಸ ಸೇರ್ಪಡೆ