ಮೈಸೂರಿನಲ್ಲೇ ತಯಾರಾದ ರೇಷ್ಮೆ ಸೀರೆಯುಟ್ಟು ದಸರೆಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Team Udayavani, Sep 26, 2022, 1:41 PM IST

ಮೈಸೂರಿನಲ್ಲೇ ತಯಾರಾದ ರೇಷ್ಮೆ ಸೀರೆಯುಟ್ಟು ದಸರೆಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು: ದಸರಾ ಮಹೋತ್ಸವ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನಲ್ಲೇ ತಯಾರಾದ ರೇಷ್ಮೆ ಸೀರೆ ಧರಿಸಿ, ದಸರಾ ಉದ್ಘಾಟಿಸುವ ಮೂಲಕ ಮೈಸೂರಿಗೆ ವಿಶೇಷ ಗೌರವ ನೀಡಿದ್ದಾರೆ.

ರಾಷ್ಟ್ರಪತಿಯವರಿಗಾಗಿ ವಿಶೇಷವಾಗಿ ನೇಯ್ದ ಮೈಸೂರು ರೇಷ್ಮೆ ಸೀರೆ ಇದು. ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಜಿಲ್ಲಾಡಳಿತದ ಪರವಾಗಿ ರಾಷ್ಟ್ರಪತಿಯವರನ್ನು ಅಧಿಕೃತವಾಗಿ ಆಹ್ವಾನಿಸುವಾಗ ಗೌರವ ಸೂಚಕವಾಗಿ ಈ ಮೈಸೂರು ರೇಷ್ಮೆ ಸೀರೆ, ಫಲ ತಾಂಬೂಲ ನೀಡಿ ಗೌರವಿಸಿದ್ದರು.  ಇದೇ ಉಡುಪು ಧರಿಸಿ ರಾಷ್ಟ್ರಪತಿಯವರು ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿದ್ದು ಮೈಸೂರಿಗರಿಗೆ ಸಂತಸ ತಂದಿದೆ.

ಇದನ್ನೂ ಓದಿ:ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸದಸ್ಯರಿಗಿಲ್ಲ ಆಸನ; ಹುಬ್ಬಳ್ಳಿಯಲ್ಲಿ ಆಗಿದ್ದೇನು?

ರಾಷ್ಟ್ರಪತಿಯವರು ಬಿಳಿ ಸೀರೆ ಇಷ್ಟಪಡುತ್ತಾರೆ ಎಂಬುದನ್ನು ಅರಿತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರಿ ಸ್ವಾಮ್ಯದ ಕೆ.ಎಸ್.ಐ.ಸಿ.ಯ ಸರ್ಕಾರಿ ರೇಷ್ಮೆ ಕಾರ್ಖಾನೆಗೆ ಈ ಉಡುಪು ತಯಾರಿಕೆಗೆ ಆದೇಶ ನೀಡಿದ್ದರು.

ಮೈಸೂರಿನ ಮಹಾರಾಜರಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 1912ರಲ್ಲಿ ನಿರ್ಮಿಸಿದ ರೇಷ್ಮೆ ಕಾರ್ಖಾನೆ ಎಂಬ ಹೆಮ್ಮೆ ಈ ಕಾರ್ಖಾನೆಗೆ ಇದೆ.

ಮೈಸೂರು ಸಿಲ್ಕ್ ಸೀರೆ ಬ್ರಾಂಡ್ ವಿಶ್ವಪ್ರಸಿದ್ಧ ಬ್ರಾಂಡ್ ಆಗಿದೆ. ನೂರಾರು ವರ್ಷಗಳಿಂದ ಮಹಿಳೆಯರಿಗೆ ಮೈಸೂರು ಸಿಲ್ಕ್ ಸೀರೆ ಎಂದರೆ ಎಲ್ಲಿಲ್ಲದ ಅಚ್ಚುಮೆಚ್ಚು. ಹಾಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಷ್ಟಪಡುವ ನೈಸರ್ಗಿಕ ಬಿಳಿ ಬಣ್ಣದ ಅಪ್ಪಟ ರೇಷ್ಮೆ ಮತ್ತು ಅಪ್ಪಟ ಚಿನ್ನದ ಎಳೆಗಳನ್ನು ಬಳಸಿ ತಯಾರಿಸಿದ ಈ ಉಡುಪನ್ನು ಗೌರವಸೂಚಕವಾಗಿ ಅವರಿಗೆ ನೀಡಲಾಗಿತ್ತು.

Koo App

ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವವನ್ನು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮರ್ಮು ಅವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಒಂಬತ್ತು ದಿನಗಳ ಕಾಲ ನಡೆಯುವ ವೈಭವದ ನಾಡ ಹಬ್ಬ ದಸರಾ ಉತ್ಸವವನ್ನು ಪ್ರಪ್ರಥಮ ಬಾರಿಗೆ ರಾಷ್ಟ್ರಪತಿ ಸ್ಥಾನ ಅಲಂಕರಿಸಿದವರು ಉದ್ಘಾಟಿಸಿರುವುದು ಈ ಬಾರಿಯ ವಿಶೇಷವಾಗಿದ್ದು, ಈ ಐತಿಹಾಸಿಕ ಕ್ಷಣದಲ್ಲಿ ಸಂಭ್ರಮದಿಂದ ಪಾಲ್ಗೊಳ್ಳಲಾಯಿತು. ಹಲವಾರು ಧಾರ್ಮಿಕ, ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳು ನಡೆಯಲಿದ್ದು, ಮೈಸೂರು ಕಂಗೊಳಿಸಲಿದೆ.

Pralhad Joshi (@joshipralhad) 26 Sep 2022

ಟಾಪ್ ನ್ಯೂಸ್

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.