ಜೆ.ಕೆ.ಮೈದಾನದಲ್ಲಿ ರಂಗೇರಿದ ಮಹಿಳಾ, ಮಕ್ಕಳ ದಸರಾ

ಚಿಣ್ಣರ ಕಲರವ ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಹಲವು ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಿದೆ.

Team Udayavani, Sep 28, 2022, 1:14 PM IST

ಜೆ.ಕೆ.ಮೈದಾನದಲ್ಲಿ ರಂಗೇರಿದ ಮಹಿಳಾ, ಮಕ್ಕಳ ದಸರಾ

ಮೈಸೂರು: ಮಣ್ಣಿನಿಂದ ತಯಾರಾದ ವಿವಿಧ ಬಗೆಯ ಗೃಹಾಲಂಕಾರಿ ವಸ್ತುಗಳು, ಹಳೆಯ ಬಟ್ಟೆಯಲ್ಲಿ ತಯಾರಾದ ಬ್ಯಾಗುಗಳು, ಅಲಂಕಾರಿಕ ವಸ್ತುಗಳು ಮತ್ತು ವಿವಿಧ ನಮೂನೆಯ ಬಟ್ಟೆಗಳು ನೋಡುಗರ ಗಮನ ಸೆಳೆಯಿತು.

ದಸರಾ ಮಹೋತ್ಸವ ಅಂಗವಾಗಿ ನಗರದ ಜೆ.ಕೆ. ಮೈದಾನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆಯೋಜಿಸಿರುವ ಮಹಿಳಾ ಮತ್ತು ಮಕ್ಕಳ ದಸರಾದಲ್ಲಿ ಮೈಸೂರು ಸೇರಿದಂತೆ ಹೊರ ಜಿಲ್ಲೆಯ ವಿವಿಧ ಭಾಗಗಳ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಹಾಗೂ ಮಹಿಳಾ ಉದ್ಯಮಿಗಳು ತಯಾರಿಸಿದ ವಸ್ತುಗಳ ಪ್ರದರ್ಶನ ಮತ್ತು ಮಾರಾಟದಲ್ಲಿ ಕುಂದನ್‌ ರಂಗೋಲಿ, ಕರಕುಶಲ ವಸ್ತುಗಳು, ವಿವಿಧ ನಮೂನೆಯ ರೆಡಿಮೆಡ್‌ ಹಾರಗಳು, ರಾಗಿ ಉತ್ಪನ್ನ, ಮರದ ಆಟಿಕೆಗಳು, ಮಣ್ಣಿನಿಂದ ತಯಾರಿಸಿದ ಗೃಹಾಲಂಕಾರಿ ವಸ್ತುಗಳು ವೈನ್‌ ಮತ್ತು ಜೇನುತುಪ್ಪ, ಖಾದಿ ಬಟ್ಟೆಗಳು ಸೇರಿದಂತೆ ಹತ್ತಾರು ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನದಲ್ಲಿ ಕಂಡುಬಂದವು.

ಮಹಿಳಾ ದಸರಾ ಉದ್ಘಾಟಿಸಿದ ಸಚಿವ: ಡೊಳ್ಳುಕುಣಿತ ಮತ್ತು ಕಂಸಾಳೆಯೊಂದಿಗೆ ಪೂರ್ಣಕುಂಭದೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ಅವರನ್ನು ಮೊದಲಿಗೆ ಬರಮಾಡಿಕೊಳ್ಳಲಾಯಿತು. ಬಳಿಕ ಸ್ತ್ರೀಶಕ್ತಿ ಸ್ವಸಹಾಯ ಗುಮಪುಗಳ ಹಾಗೂ ಮಹಿಳಾ ಉದ್ಯಮಿಗಳು ತಯಾರಿಸಿದ ವಸ್ತುಗಳ ಮಾರಾಟ ಮತ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಬಳಿಕ ಮಾತನಾಡಿದ ಅವರು, ಐದು ದಿನ ಹಮ್ಮಿಕೊಳ್ಳಲಾಗಿರುವ ಈ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ, ಮಂಗಳಮುಖಿಯರಿಗೆ, ವಿಶೇಷಚೇತ ನರಿಗೆ ಮತ್ತು ಹಿರಿಯ ನಾಗರಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಸ್ತ್ರೀ ಸಬಲೀಕರಣಕ್ಕಾಗಿ ನಮ್ಮ ಸರ್ಕಾರ ಮಹಿಳಾ ಸ್ವಸಹಾಯ ಸಂಘಕ್ಕೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಮಹಿಳೆ ತಯಾರಿಸಿರುವ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದನ್ನು ಸದ್ಬಳಿಸಿಕೊಳ್ಳಬೇಕು ಎಂದರು.

ಶಾಸಕ ಎಲ್.ನಾಗೇಂದ್ರ, ಮೇಯರ್‌ ಶಿವಕುಮಾರ್‌, ಉಪ ಮೇಯರ್‌ ರೂಪಾ, ಜಿಪಂ ಉಪ ಕಾರ್ಯದರ್ಶಿ ಪ್ರೇಮಕುಮಾರ್‌, ನಗರ ಪಾಲಿಕೆ ಸದಸ್ಯರಾದ ಪ್ರಮಿಳಾ ಭರತ್‌, ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಮಂಗಳ ಸೋಮ ಶೇಖರ್‌, ಸಮಿತಿಯ ಅಧ್ಯಕ್ಷರಾದ ಸುನಾಂದ ರಾಜ್ , ಹೇಮ ನಂದೀಶ್‌, ತನುಜಾ ಮಹೇಶ್‌ ಇತರರು ಇದ್ದರು.

ಕಾರ್ಯಕ್ರಮಗಳ ವಿವರ
ಮೈಸೂರು: ನಗರದ ಜೆ.ಕೆ. ಮೈದಾನದಲ್ಲಿ ದಸರಾ ಮಹೋತ್ಸವ ಅಂಗವಾಗಿ ಏರ್ಪಡಿಸಿರುವ ಮಹಿಳಾ ಮತ್ತು ಮಕ್ಕಳ ದಸರಾ ಮಂಗಳವಾರದಿಂದ ಐದು ದಿನಗಳ ಕಾಲ ನಡೆಯಲಿದೆ. ಮೊದಲ ದಿನವಾದ ಮಂಗಳವಾರ ಉದ್ಘಾಟನೆ ಕಾರ್ಯಕ್ರಮ, ಮಹಿಳೆಯ ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬುಧವಾರ ಮಹಿಳೆಯರಿಗಾಗಿರಾಗಿ ಬೀಸುವ ಸ್ಪರ್ಧೆ, ವೇಷಭೂಷಣ ಸ್ಪರ್ಧೆ, ಒಲೆ ರಹಿತ ಅಡುಗೆ ತಯಾರಿಸುವ ಸ್ಪರ್ಧೆ, ಚುಟುಕು ಹಾಸ್ಯ ಮತ್ತು ನಾಟಕ
ಪ್ರದರ್ಶನ ನಡೆಯಲಿದೆ.

ಗುರುವಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಇಲಾಖಾ ಸಿಬ್ಬಂದಿಗೆ ನೀರು ತುಂಬಿದ ಬಿಂದಿಗೆ ಹೊತ್ತು ಓಡುವ ಸ್ಪರ್ಧೆ, ಲೆಮನ್‌ ಇನ್‌ ದ ಸ್ಪೂನ್‌, ಬಲೂನ್‌ ಊದು ಸ್ಪರ್ಧೆ, ಜಾನಪದ ಮತ್ತು ಭಾವ ಗೀತೆ ಸ್ಪರ್ಧೆ ನಡೆದರೆ ಮಹಿಳೆಯರಿಗೆ ಕೇಶ ವಿನ್ಯಾಸ, ಜಾನಪದ ಸಮೂಹ ಸ್ಪರ್ಧೆ ಕಾರ್ಯಕ್ರಮ ನಡೆಯಲಿದೆ. ಶುಕ್ರವಾರ ಮಕ್ಕಳಿಗಾಗಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದ್ದು, ವೇಶಭೂಷಣ ಸ್ಪರ್ಧೆ, ಚಿಣ್ಣರ ಕಲರವ ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಹಲವು ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಿದೆ. ಕೊನೆಯ ದಿನವಾದ ವಿಶೇಷ ಚೇತನರಿಗೆ ಮತ್ತು ಹಿರಿಯ ನಾಗರೀಕರಿಗೆ ವಿವಿಧ ಕಾರ್ಯಕ್ರಮ ಮತ್ತು ಸ್ಪರ್ಧೆ ಆಯೋಜಿಸಲಾಗಿದೆ. ಮೊದಲನೆಯದಾಗಿ ಹಿರಿಯ ನಾಗರೀಕರಿಗೆ 100 ಮೀಟರ್‌ ವಾಕಿಂಗ್‌ ಸ್ಪರ್ಧೆ, ಬಕೆಟ್‌ ಒಳಗೆ ಚೆಂಡು ಎಸೆಯುವ ಸ್ಪರ್ಧೆ ನಡೆಯಲಿದೆ. ಬಳಿಕ ಅಂಧ ಮಕ್ಕಳಿಂದ ಯೋಗ ಮತ್ತು ಜಾನಪದ ನೃತ್ಯ, ಶ್ರವಣ ದೋಷ ಮಕ್ಕಳಿಂದ ಜಾನಪದ ನೃತ್ಯ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿದೆ.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.