ಚೀನದ ರೆಸ್ಟೋರೆಂಟ್ನಲ್ಲಿ ಬೆಂಕಿ ಅವಘಡ: ಕನಿಷ್ಠ 17 ಜನ ಸಾವು
Team Udayavani, Sep 28, 2022, 2:18 PM IST
ಬೀಜಿಂಗ್: ಈಶಾನ್ಯ ಚೀನದ ರೆಸ್ಟೋರೆಂಟ್ನಲ್ಲಿ ಬುಧವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಚಾಂಗ್ಚುನ್ ನಗರದ ರೆಸ್ಟೋರೆಂಟ್ನಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಸರ್ಕಾರವು ವೈಬೋ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದ್ದು, ಅಗ್ನಿಶಾಮಕ ದಳದವರು ಘಟನಾ ಸ್ಥಳಕ್ಕೆ ಧಾವಿಸಿದ ರಕ್ಷಣಾ ಕಾರ್ಯವನ್ನು ಪೂರ್ಣಗೊಳಿಸಿದರು ಎಂದು ಹೇಳಿಕೆ ತಿಳಿಸಿದೆ.
ಘಟನೆಗೆ ಕಾರಣ ಏನೆಂದು ತನಿಖೆ ನಡೆಯುತ್ತಿದೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಮರಣೋತ್ತರ ಪ್ರಕ್ರಿಯೆಗಳಯನ್ನು ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.