ಪೂಜೆಯಲ್ಲಿ ಮಹಾತ್ಮ ಗಾಂಧಿಯನ್ನು ಮಹಿಷಾಸುರನಂತೆ ಬಿಂಬಿಸಿದ ಹಿಂದೂ ಮಹಾಸಭಾ! ಭಾರಿ ಆಕ್ರೋಶ

Team Udayavani, Oct 3, 2022, 12:29 PM IST

ಪೂಜೆಯಲ್ಲಿ ಮಹಾತ್ಮ ಗಾಂಧಿಯನ್ನು ಮಹಿಷಾಸುರನಂತೆ ಬಿಂಬಿಸಿದ ಹಿಂದು ಮಹಾಸಭಾ! ಭಾರಿ ಆಕ್ರೋಶ

ಕೋಲ್ಕತ್ತಾ : ಅಖಿಲ ಭಾರತ ಹಿಂದೂ ಮಹಾಸಭಾ ಆಯೋಜಿಸಿದ್ದ ದುರ್ಗಾ ಪೂಜೆಯಲ್ಲಿ ಮಹಾತ್ಮಾ ಗಾಂಧಿಯನ್ನು ಮಹಿಷಾಸುರನಂತೆ ಬಿಬಿಸಿರುವುದು ಭಾರಿ ವಿರೋದಕ್ಕೆ ಕಾರಣವಾಗಿದ್ದು ಕೇಂದ್ರ ಗೃಹ ಸಚಿವಾಲಯದ ಸೂಚನೆ ಮತ್ತು ಪಶ್ಚಿಮ ಬಂಗಾಳದ ಪೊಲೀಸರ ನಿರ್ದೇಶನದ ಮೇರೆಗೆ ಮಹಾತ್ಮಾ ಗಾಂಧಿಯ ಗೊಂಬೆಯನ್ನು ಅಖಿಲ ಭಾರತ ಹಿಂದೂ ಮಹಾಸಭಾ ತೆಗೆದು ಹಾಕಿದ ಪ್ರಸಂಗ ನಡೆದಿದೆ.

ದೇಶದೆಲ್ಲೆಡೆ ನವರಾತ್ರಿಯ ಪರ್ವಕಾಲದಲ್ಲಿ ದುರ್ಗಾ ಪೂಜೆಯನ್ನು ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಅದರಂತೆ ಕೋಲ್ಕತ್ತಾದ ಅಖಿಲ ಭಾರತ ಹಿಂದೂ ಮಹಾಸಭಾವೂ ದುರ್ಗಾ ಪೂಜೆಯನ್ನು ಬಹಳ ಅದ್ದೂರಿಯಾಗಿ ಆಚರಿಸುತ್ತಿದೆ. ಆದರೆ ರವಿವಾರ ನಡೆದ ದುರ್ಗಾ ಪೂಜೆಯಲ್ಲಿ ಮಹಿಷಾಸುರ ಮರ್ದಿನಿಯಂತೆ ಚಿತ್ರಿಸಲಾಗಿತ್ತು. ಅಂದರೆ ದೇವಿ, ಮಹಿಷಾಸುರ ಎಂಬ ರಾಕ್ಷಸನನ್ನು ವಧಿಸಿದಂತೆ ಗೊಂಬೆಗಳನ್ನು ಜೋಡಿಸಲಾಗಿತ್ತು. ಅದರಂತೆ ದೇವಿಯ ಕಾಲಡಿಯಲ್ಲಿ ಬಿದ್ದ ಮಹಿಷಾಸುರನಾಗಿ ಮಹಾತ್ಮ ಗಾಂಧಿ ಗೊಂಬೆಯನ್ನು ಇಡಲಾಗಿತ್ತು. ಅದನ್ನು ಕಂಡ ಅನೇಕ ಮಂದಿ ಆಕ್ರೋಶ ಹೊರಹಾಕಿದ್ದಾರೆ.

ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕೇಂದ್ರ ಸಚಿವಾಲಯ ಹಾಗೂ ಪೊಲೀಸರ ನಿರ್ದೇಶನದಂತೆ ಗಾಂಧಿಯ ಮೂರ್ತಿಯನ್ನು ತೆಗೆಯಲಾಗಿದೆ ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ಮುಖಂಡರು ಹೇಳಿದ್ದಾರೆ.

ಈ ಕುರಿತು ಸ್ಪಷ್ಟನೆ ನೀಡಿದ ಅಖಿಲ ಭಾರತ ಹಿಂದೂ ಮಹಾಸಭಾದ ಪಶ್ಚಿಮ ಬಂಗಾಳ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಚಂದ್ರಚೂರ್ ಗೋಸ್ವಾಮಿ “ನಾವು ಗಾಂಧಿಯನ್ನು ನಿಜವಾದ ಅಸುರನಂತೆ ನೋಡುತ್ತೇವೆ. ಹಾಗಾಗಿ ಗಾಂಧಿ ಮೂರ್ತಿಯನ್ನು ಈ ರೀತಿಯಲ್ಲಿ ಬಿಂಬಿಸಿದ್ದೇವೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಅಖಿಲ ಭಾರತ ಹಿಂದೂ ಮಹಾಸಭಾದ ಈ ಕ್ರಮವನ್ನು ತೃಣಮೂಲ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಾರ್ಟಿ, ಸಿಪಿಐ-ಎಂ ಮತ್ತು ಕಾಂಗ್ರೆಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಖಂಡಿಸಿವೆ.

ಇದನ್ನೂ ಓದಿ : ಅತ್ಯಂತ ಕಡಿಮೆ ಅವಧಿಯಲ್ಲಿಯೇ ಹತ್ತು ಮಿಲಿಯನ್ ಹಾರ್ಟ್ಸ್ ಗೆದ್ದ ಬನಾರಸ್ ಟ್ರೇಲರ್

ಟಾಪ್ ನ್ಯೂಸ್

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.