ಸಿಡಿಎಸ್ ಅನಿಲ್ ಚೌಹಾಣ್ಗೆ Z+ ಭದ್ರತೆ ಒದಗಿಸಿದ ದೆಹಲಿ ಪೊಲೀಸರು
Team Udayavani, Oct 3, 2022, 7:49 PM IST
ನವದೆಹಲಿ : ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ದೆಹಲಿ ಪೊಲೀಸರು ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಅನಿಲ್ ಚೌಹಾಣ್ ಅವರಿಗೆ Z+ ಭದ್ರತೆಯನ್ನು ಒದಗಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ರಾಷ್ಟ್ರವು ಎದುರಿಸುತ್ತಿರುವ ಭವಿಷ್ಯದ ಭದ್ರತಾ ಸವಾಲುಗಳಿಗೆ ಸಶಸ್ತ್ರ ಪಡೆಗಳನ್ನು ಸಿದ್ಧಪಡಿಸುವ ಗುರಿಯನ್ನು ಹೊಂದಿರುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಕಾರ್ಯಗತಗೊಳಿಸುವ ಆದೇಶದೊಂದಿಗೆ ಚೌಹಾಣ್ ಶುಕ್ರವಾರ ಭಾರತದ ಮೂರೂ ಸೇನೆಗಳ ರಕ್ಷಣಾ ಸಿಬಂದಿಗಳ ಹೊಸ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದರು.
ಇದನ್ನೂ ಓದಿ : ವಿದೇಶಾಂಗ ಸಚಿವ ಜೈಶಂಕರ್ ಹೇಳಿಕೆಗೆ ಆಕ್ರೋಶ ವ್ಯಕ್ತ ಪಡಿಸಿದ ಪಾಕ್
“ಗೃಹ ಸಚಿವಾಲಯದ ಆದೇಶದ ಮೇರೆಗೆ ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಅವರಿಗೆ Z+ ಭದ್ರತೆಯನ್ನು ಒದಗಿಸಲಾಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.
ತಮಿಳುನಾಡಿನಲ್ಲಿ ನಡೆದ ಹೆಲಿಕ್ಯಾಪ್ಟರ್ ಅಪಘಾತದಲ್ಲಿ ದೇಶದ ಮೊದಲ ರಕ್ಷಣಾ ಸಿಬ್ಬಂದಿ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಸಾವನ್ನಪ್ಪಿದ ಒಂಬತ್ತು ತಿಂಗಳ ನಂತರ ಮಾಜಿ ಸೇನಾ ಕಮಾಂಡರ್ ಜನರಲ್ ಚೌಹಾಣ್ ಮಿಲಿಟರಿ ಕಮಾಂಡರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ