ಬಿತ್ತನೆ ಆಲೂಗಡ್ಡೆಗೆ ದಿಢೀರ್‌ ಬೆಲೆ ಏರಿಕೆ

Team Udayavani, Oct 12, 2022, 2:52 PM IST

ಬಿತ್ತನೆ ಆಲೂಗಡ್ಡೆಗೆ ದಿಢೀರ್‌ ಬೆಲೆ ಏರಿಕೆ

ದೇವನಹಳ್ಳಿ: ದೇವನಹಳ್ಳಿ ಬಯಲುಸೀಮೆ ಪ್ರದೇಶಆಗಿರುವುದರಿಂದ ನೀರಿನ ಅಭಾವದ ನಡುವೆಯೂ ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆ ಬೆಳೆಯುವುದರ ಮೂಲಕ ತಮ್ಮ ಜೀವನ ಕಟ್ಟಿಕೊಂಡಿರುವ ರೈತರಿಗೆ ಬರೀ 1600 ರೂ.ಗೆ ಮಾರಾಟ ಆಗುತ್ತಿದ್ದ ಬಿತ್ತನೆ ಆಲೂಗಡ್ಡೆ ಮೂಟೆ 3,200ರಿಂದ 4,300 ರೂ.ಗೆ ದಿಢೀರ್‌ ಬೆಲೆ ಏರಿಕೆ ಆಗುವ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಲೂಗಡ್ಡೆ ಬೆಳೆಗಾರರನ್ನು ಬೆಲೆ ಏರಿಕೆ ಬಿಸಿ ದಂಗಾಗಿಸಿದೆ.

ತಿಂಗಳ ಹಿಂದೆ ತೀವ್ರ ಮಳೆಯಿಂದ ಬಿತ್ತನೆ ಆಲೂಗಡ್ಡೆ ಯಾರೂ ಖರೀದಿ ಮಾಡಿರಲಿಲ್ಲ. ಆದರೆ, ಇದೀಗ ಮಳೆ ಪ್ರಮಾಣ ಕಡಿಮೆ ಆಗಿರುವುದರಿಂದ ರೈತರು ಬಿತ್ತನೆಗೆ ಮುಂದಾಗಿರುವ ಕಾರಣಕ್ಕೆ ವಿವಿಧ ಕಡೆಗಳಿಂದ ಬಿತ್ತನೆ ಆಲೂಗಡ್ಡೆ ತರಿಸಿ ಬಿತ್ತನೆ ಕಾರ್ಯಕ್ಕೆ ಮುಂದಾಗಿದ್ದಾರೆ. ಬಿತ್ತನೆ ಆಲೂಗಡ್ಡೆ ಬೆಲೆ ಹೆಚ್ಚಿಸಿರುವುದು ರೈತರ ಸಂಕಷ್ಟಕ್ಕೆ ಕಾರಣವಾಗಿದೆ.

ರೈತರಿಗೆ ಸಂಕಷ್ಟ: ಮಳೆಯಿಂದ ಆದ ಬೆಳೆನಷ್ಟದಿಂದ ಈಗಷ್ಟೇ ರೈತರು ಚೇತರಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಬೆಳೆ ನಷ್ಟ ಪರಿಹಾರವು ಬಹಳಷ್ಟು ರೈತರ ಕೈ ಸೇರಿಲ್ಲ. ಹೂವು, ಹಣ್ಣು, ತರಕಾರಿ ಮಳೆಗೆ ಕೊಚ್ಚಿಹೋಗಿ ರೈತರು ಇನ್ನಿಲ್ಲದ ಪರಿಪಾಟು ಅನುಭವಿಸುತ್ತಿದ್ದಾರೆ. ಪ್ರಸ್ತುತ ಬಿತ್ತನೆ ಆಲೂಗಡ್ಡೆ 50 ಕೆ.ಜಿ. ಮೂಟೆ ದರ 3000 ರೂಪಾಯಿಗಳಿಂದ 4300 ರೂಪಾಯಿಗಳಿಗೆ ಏರಿಕೆ ಕಂಡಿದೆ. ದೇವನಹಳ್ಳಿ ತಾಲೂಕಿನ ಬಹುತೇಕ ರೈತರು, ಬಿತ್ತನೆ ಆಲೂಗಡ್ಡೆ ತರಲಿಕ್ಕಾಗಿ ಚಿಕ್ಕಬಳ್ಳಾಪುರದ ಎಪಿಎಂಸಿ ಮಾರುಕಟ್ಟೆಗೆ ಹೋಗುತ್ತಿದ್ದು, ಅಲ್ಲಿನ ಬೆಲೆ ಕೇಳಿ ಸುಸ್ತಾಗುತ್ತಿದ್ದಾರೆ.

ರೈತರ ಅಸಮಾಧಾನ: ವ್ಯಾಪಾರಸ್ಥರು, ಪಂಜಾಬ್‌ನ ಜಲಂಧರ್‌ನಿಂದ ಚಿಪ್ರೋನಾ, ಚೆಂಬಲ್‌, ಪೆಪ್ಸಿ, ಜ್ಯೋತಿ ಸೇರಿದಂತೆ ಬಗೆ ಬಗೆಯ ಬಿತ್ತನೆ ಆಲೂಗಡ್ಡೆ ಯನ್ನು ಮಾರುಕಟ್ಟೆಗೆ ತರಿಸುತ್ತಾರೆ. ಬಿತ್ತನೆಗೆ ಅಕ್ಟೋ ಬರ್‌ ಬಳಿಕ ಸೂಕ್ತ ಸಮಯವಾಗಿರುವ ಕಾರಣ ಕೃತಕ ಅಭಾವ ಸೃಷ್ಟಿ ಮಾಡಲಾಗುತ್ತಿದೆ. ಆದರೆ, ಇತ್ತಿಚೆಗೆ ಸುರಿದ ಧಾರಾಕಾರ ಮಳೆಗೆ ಬಿತ್ತನೆಯ ಆಲೂಗಡ್ಡೆ ತೋಟದಲ್ಲಿ ಕೊಳೆತು ಹಾಳಾಗಿದ್ದು, ಹೊಸದಾಗಿ ಬಿತ್ತನೆ ಕೈಗೊಳ್ಳಲು ಬಯಸಿರುವ ರೈತರಿಗೆ ದರದ ಏರಿಕೆಯ ಬಿಸಿ ತಟ್ಟಿದೆ ಎಂದು ಅಧಿಕಾರಿಗಳು ಹೇಳುತ್ತಾರೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೃತಕ ಅಭಾವ ಸೃಷ್ಟಿ : ಕೆಲ ರೈತರು ಹೇಳುವ ಪ್ರಕಾರ, ಅಗತ್ಯ ದಾಸ್ತಾನಿ ದ್ದರೂ ಮಧ್ಯವರ್ತಿಗಳು ಕೃತಕ ಅಭಾವ ಸೃಷ್ಟಿಸುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಬೆಲೆ ಇಳಿಕೆ, ರೈತರಿಗೆ ಅನುಕೂಲವಾಗುವ ವಿಚಾರವಾಗಿ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ತೋರಿರು ವುದು ಬೆಳೆಗಾರರ ಅಸಮಾಧಾನಕ್ಕೆ ಕಾರಣವಾಗಿದೆ.

ದೇವನಹಳ್ಳಿ ಭಾಗದಲ್ಲಿ 80ರಿಂದ 120 ಹೆಕ್ಟೇರ್‌ ಪ್ರದೇಶದಲ್ಲಿ ಆಲೂ ಗಡ್ಡೆ ಬಿತ್ತನೆ ಮಾಡ್ತಾರೆ. ಇವರೆಲ್ಲರೂ ಚಿಕ್ಕಬಳ್ಳಾಪುರದ ಎಪಿಎಂಸಿ.ಮಾರುಕಟ್ಟೆಗೆ ಹೋಗಿ ಬಿತ್ತನೆಗಡ್ಡೆ ತರುತ್ತಾರೆ. ಚಿಕ್ಕಬಳ್ಳಾ ಪುರ ಜಿಲ್ಲೆಯ ಉಪನಿರ್ದೇಶಕರನ್ನು ಸಂಪರ್ಕ ಮಾಡಿದ್ದೇವೆ. ಅವರು ಜಿಲ್ಲಾಧಿ ಕಾರಿ ಸಂಪರ್ಕ ಮಾಡುತ್ತಿದ್ದಾರೆ. ನಾವು ಕೂಡಾ ಜಿಲ್ಲಾಧಿಕಾರಿಯೊಂದಿಗೆ ಚರ್ಚೆ ನಡೆಸುತ್ತೇವೆ. ಗುಣವಂತ, ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ

ಬೆಲೆಯು ದಿಢೀರನೇ ಏರಿಕೆ ಆಗಿರುವುದರಿಂದ ರೈತರು ತೊಂದರೆ ಅನುಭವಿಸು ವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ ಅನಿವಾರ್ಯವಾಗಲಿದೆ. ಕಳೆದ ಹತ್ತು ವರ್ಷಗಳಿಂದ ಆಲೂಗೆಡ್ಡೆ ಬೆಳೆ ಬೆಳೆದು ಜೀವನ ಸಾಗಿಸುತ್ತಿದ್ದೇವೆ. 4,300 ರೂ. ಕೊಟ್ಟು ಆಲೂಗಡ್ಡೆ ಬಿತ್ತನೆ ಬೀಜ ತರುತ್ತಿದ್ದೇವೆ. ಸರಿಯಾದ ರೀತಿ ಬಿತ್ತನೆ ಬೀಜ ಸಿಗುತ್ತಿಲ್ಲ. ಪುರುಷೋತ್ತಮ್‌ಕುಮಾರ್‌, ಆಲೂಗಡ್ಡೆ ರೈತ ಬೈಚಾಪುರ

ಎಸ್‌. ಮಹೇಶ್‌

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.