ರೋಹಿತ್ ಅಭಿಮಾನಿಯನ್ನು ಹತ್ಯೆಗೈದ ವಿರಾಟ್ ಕೊಹ್ಲಿ ಫ್ಯಾನ್: ಏನಿದು ‘ಫ್ಯಾನ್ಸ್ ವಾರ್’?

Team Udayavani, Oct 15, 2022, 10:19 AM IST

Virat Kohli  Rohit Sharma

ಮಲ್ಲೂರ್: ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಭಾರತದ ಅತ್ಯುತ್ತಮ ಬ್ಯಾಟರ್ ಗಳು. ರನ್ ಸುರಿಮಳೆಗೈಯುವ ಮಾಜಿ ನಾಯಕ ಮತ್ತು ಹಾಲಿ ನಾಯಕ ಭಾರತ ಮಾತ್ರವಲ್ಲದೆ ವಿಶ್ವದೆಲ್ಲೆಡೆ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದಾರೆ. ಭಾರತದಲ್ಲಿ ಸದಾ ವಿರಾಟ್- ರೋಹಿತ್ ನಡುವೆ ಯಾರು ಶ್ರೇಷ್ಠ ಎಂಬ ರೀತಿಯ ಗಲಾಟೆ ಅಭಿಮಾನಿಗಳ ನಡುವೆ ನಡೆಯುತ್ತಲೇ ಇರುತ್ತದೆ. ಆದರೆ ಇಂತಹ ಜಗಳವೊಂದು ಮಿತಿಮೀರಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಮಲ್ಲೂರಿನ ಇಬ್ಬರು ಗೆಳೆಯರಾದ ಪಿ ವಿಘ್ನೇಶ್ ಮತ್ತು ಧರ್ಮರಾಜ್ ಎಂಬುವರು ಮಂಗಳವಾರ ರಾತ್ರಿ ಸಿಡ್ಕೋ ಇಂಡಸ್ಟ್ರಿಯಲ್ ಎಸ್ಟೇಟ್ ಬಳಿ ಮದ್ಯಪಾನ ಮಾಡಿ ಕ್ರಿಕೆಟ್ ಬಗ್ಗೆ ಚರ್ಚಿಸುತ್ತಿದ್ದರು. ಈ ವೇಳೆ ಮಾತಿನ ಚಕಮಕಿ ನಡೆದಿದ್ದು, ಇಬ್ಬರ ನಡುವೆ ಸಿಟ್ಟಿಗೆದ್ದ ಕೊಹ್ಲಿ ಹಾಗೂ ಆರ್‌ಸಿಬಿ ಅಭಿಮಾನಿ ಧರ್ಮರಾಜ್, ರೋಹಿತ್ ಅಭಿಮಾನಿ ವಿಘ್ನೇಶ್ ಮೇಲೆ ಬಾಟಲಿ ಹಾಗೂ ಕ್ರಿಕೆಟ್ ಬ್ಯಾಟ್‌ ನಿಂದ ಹಲ್ಲೆ ನಡೆಸಿದ್ದಾನೆ. ಪರಿಣಾಮ ವಿಘ್ನೇಶ್ ಸಾವನ್ನಪ್ಪಿದ್ದು, ನಂತರ ಧರ್ಮರಾಜ್ ಸ್ಥಳದಿಂದ ಪರಾರಿಯಾಗಿದ್ದಾನೆ.

ಮಾತುಕತೆಯ ಸಂದರ್ಭದಲ್ಲಿ ವಿಘ್ನೇಶ್ ಅವರು ಧರ್ಮರಾಜ್ ಅವರನ್ನು ಅಪಹಾಸ್ಯ ಮಾಡಲು ಪ್ರಾರಂಭಿಸಿದರು. ಧರ್ಮರಾಜ್ ಮಾನಾಡುವಾಗ ತೊದಲುವುದರಿಂದ ವಿಘ್ನೇಶ್ ಬಾಡಿಶೇಮ್ ಮಾಡಿದರು. ಅಲ್ಲದೆ ಅದನ್ನು ಕೊಹ್ಲಿ ಮತ್ತು ಆರ್‌ಸಿಬಿ ತಂಡದ ಪ್ರದರ್ಶನಗಳಿಗೆ ಹೋಲಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಪಡುಬಿದ್ರಿ : ಕೆಎಸ್ಸಾರ್ಟಿಸಿ ಬಸ್‌ ಸಿಬಂದಿ ಮೇಲೆ ಹಲ್ಲೆ, ಆರೋಪಿಗಳ ಬಂಧನ

ಧರ್ಮರಾಜ್‌ಗೆ ಬಾಡಿ ಶೇಮ್ ಮಾಡುವ ಅಭ್ಯಾಸ ವಿಘ್ನೇಶ್‌ ಗೆ ಮೊದಲಿನಿಂದಲೂ ಇತ್ತು. ಆದರೆ ಈ ಬಾರಿ ಆರ್‌ಸಿಬಿ ತಂಡವನ್ನು ಧರ್ಮರಾಜ್ ಅವರ ಮಾತಿನ ತೊಂದರೆಗೆ ಹೋಲಿಸಿ ಟೀಕೆ ಮಾಡಿದ್ದರು. ಇದರಿಂದ ಕುಪಿತಗೊಂಡ ಧರ್ಮರಾಜ್ ವಿಘ್ನೇಶ್ ಮೇಲೆ ಬಾಟಲಿಯಿಂದ ಹಲ್ಲೆ ನಡೆಸಿ, ಕ್ರಿಕೆಟ್ ಬ್ಯಾಟ್ ನಿಂದ ತಲೆಗೆ ಹೊಡೆದಿದ್ದಾನೆ. ಕೂಡಲೇ ಧರ್ಮರಾಜ್ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಡ್ಕೋ ಕಾರ್ಖಾನೆಗೆ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರಿಗೆ ಬೆಳಗ್ಗೆ ವಿಘ್ನೇಶ್ ಶವ ಪತ್ತೆಯಾಗಿದೆ. ಪೊಲೀಸರು ಇದೀಗ ವಿಘ್ನೇಶ್ ಶವವನ್ನು ಅರಿಯಾಲೂರಿನ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೆಂಡ್ ಆಗುತ್ತಿದೆ. ಅರೆಸ್ಟ್ ಕೊಹ್ಲಿ ಎಂದು ಭಾರಿ ಟ್ವೀಟ್ ಗಳಾಗುತ್ತಿದೆ. ಇದಕ್ಕೆ ಕೊಹ್ಲಿ ಅಭಿಮಾನಿಗಳು ತಿರುಗೇಟು ನೀಡುತ್ತಿದ್ದಾರೆ.

ಟಾಪ್ ನ್ಯೂಸ್

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.