ಅಂಬೇಡ್ಕರ್‌ ಆದರ್ಶವೇ ಸಾಧನೆಗೆ ಕಾರಣ


Team Udayavani, Oct 22, 2022, 6:21 PM IST

ಅಂಬೇಡ್ಕರ್‌ ಆದರ್ಶವೇ ಸಾಧನೆಗೆ ಕಾರಣ

ಕೋಲಾರ: ಅಂಬೇಡ್ಕರ್‌ ಆಶಯ ಮತ್ತು ಆದರ್ಶಗಳೇ ಸಾಧನೆಗೆ ಕಾರಣ, ಅಂಬೇಡ್ಕರ್‌ ಅವರ ಮಾನವ ಹಕ್ಕುಗಳ ಸಂರಕ್ಷಣೆಯ ಉದ್ದೇಶಗಳನ್ನು ವಿಶ್ವಸಂಸ್ಥೆಯಲ್ಲಿ ಜಾರಿ ಮಾಡಲು ಚರ್ಚಿಸುತ್ತೇನೆ ಎಂದು ವಿಶ್ವಸಂಸ್ಥೆ ಮಾನವ ಹಕ್ಕು ಸಮಿತಿ ನೂತನ ಸದಸ್ಯೆ ಡಾ.ಕೆ.ಪಿ ಅಶ್ವಿ‌ನಿ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶ್ರೀ ರೇಣುಕಾ ಯಲ್ಲಮ್ಮ ಬಳಗದ ಅಭಿವೃದ್ಧಿ ಸಂಘದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಎಷ್ಟೋ ಪ್ರಯತ್ನದ ಫಲವಾಗಿ ಒಬ್ಬ ದಲಿತ ಸಮುದಾಯದ ಮಗಳು ವಿಶ್ವಸಂಸ್ಥೆಯಲ್ಲಿ ಸ್ಥಾನ ಪಡೆದಿದ್ದು ಮುಂದಿನ ದಿನಗಳಲ್ಲಿ ವಿಶೇಷವಾಗಿ ದಲಿತ ಸಮುದಾಯದ ಹಾಗೂ ದೇಶದ ಬೆಳವಣಿಗೆ ಶ್ರಮಿಸುತ್ತೇನೆ ಎಂದು ಹೇಳಿದರು. ನಾನು ಮೂಲತಃ ದಲಿತ ಕುಟುಂಬದಲ್ಲಿ ಜನಿಸಿ ದಲಿತರ ಕಷ್ಟ ಸುಖವನ್ನು ಅರಿತಿದ್ದೇನೆ. ದೇಶದ ಬುಡಕಟ್ಟು ಜನಾಂಗದ ಪರಿಸ್ಥಿತಿಗಳ ಬಗ್ಗೆ ಜನಾಂಗೀಯ ಭೇಧ ವರ್ಣಭೇದ ನಿಂದನೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಬದಲಾವಣೆಗೆ ಪ್ರಯತ್ನಿಸಿದ್ದು, ಇದಕ್ಕೆ ಕುಟುಂಬದ ಹಾಗೂ ಸಮುದಾಯದ ಸಹಕಾರ ಮುಖ್ಯವಾಗಿದ್ದು ವಿಶ್ವಸಂಸ್ಥೆ ತಮ್ಮ ಕಾರ್ಯವನ್ನು ಗುರುತಿಸಿ ಗೌರವಿಸುವ ಮೂಲಕ ಉನ್ನತ ಸ್ಥಾನ ನೀಡಿದ್ದಾರೆ ಎಂದರು.

ವಿಶ್ವದ 190 ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸುವ ಸಭೆಯಲ್ಲಿ ಮಾನವ ಹಕ್ಕುಗಳ ಸಂರಕ್ಷಣೆ ಕುರಿತು ಮಾತನಾಡುವ ಅವಕಾಶ ತಮಗೆ ದೊರೆತಿದ್ದು, ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವುದಾಗಿ ಘೋಷಿಸಿದರು.

ಶ್ರೀ ರೇಣುಕಾ ಯಲ್ಲಮ್ಮ ಬಳಗದ ಅಭಿವೃದ್ಧಿ ಸಂಘದ ರಾಜ್ಯ ಅಧ್ಯಕ್ಷ ನಾಗೇಂದ್ರ ಮಾತನಾಡಿ ದಲಿತರಿಗೂ ಇಂತಹ ಉನ್ನತ ಸ್ಥಾನ ಪಡೆಯಲು ಶಿಕ್ಷಣ ಸಂವಿಧಾನದಿಂದ ಸಾಧ್ಯವಾಗಿದೆ ಯುವಕರು ಶಿಕ್ಷಣ ಸಂಘಟನೆ ಹೋರಾಟದ ಮನೋಭಾವ ಬೆಳಸಿಕೊಳ್ಳಬೇಕು ಎಂದರು. ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಣಿ ಸದಸ್ಯ ಕೆ.ಎಸ್‌ ಗಣೇಶ್‌ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ದಲಿತರ, ಮಹಿಳೆಯರ, ಬಡವರ ಸಮಸ್ಯೆಗಳಿಗೆ ಪರಿಹಾರ ನೀಡಲು ಸಾಧ್ಯವಾಗಿಲ್ಲ. ಅಷ್ಟು ಇಷ್ಟು ಏನಾದರೂ ಸಾಧನೆ ಮಾಡಿದ್ದರೆ ವ್ಯಯಕ್ತಿಕ ಸಾಧನೆಯುಷ್ಟೆ. ಅಶ್ವಿ‌ನಿಯವರ ಸಾಧನೆ ಕೋಲಾರ ಮಾತ್ರವಲ್ಲ ಭಾರತವೇ ಮೆಚ್ಚುವಂಥದ್ದು ಎಂದರು.

ಶ್ರೀ ರೇಣುಕಾ ಯಲ್ಲಮ್ಮ ಬಳಗದ ರಾಜ್ಯ ಕಾರ್ಯದರ್ಶಿ ಬೆಳ್ಳಾರಪ್ಪ ಮಾತನಾಡಿ, ಅಂಬೇಡ್ಕರ್‌ ನಂತರ ಅದೇ ಸಮುದಾಯದ ಕೋಲಾರ ಜಿಲ್ಲೆಯ ದಲಿತ ಹೆಣ್ಣು ಮಗಳು ವಿಶ್ವದ ವೇದಿಕೆಯಲ್ಲಿ ಸ್ಥಾನ ಸಂಪಾದಿಸಿಕೊಂಡಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಜಿಪಂ ಮಾಜಿ ಸದಸ್ಯರಾದ ಅಶ್ವಿ‌ನಿ ಸಂಪಂಗಿ, ಆರ್‌ ಕೃಷ್ಣಪ್ಪ, ನಿವೃತ್ತ ಐಪಿಎಸ್‌ ಅಧಿಕಾರಿ ಮುನಿಸ್ವಾಮಿ, ಕಾರ್ಮಿಕ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ, ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ. ಡಾ.ಡಿ.ಕೆ ರಮೇಶ್‌, ಶ್ರೀ ರೇಣುಕಾ ಯಲ್ಲಮ್ಮ ಬಳಗದ ಜಿಲ್ಲಾ ಅಧ್ಯಕ್ಷ ಬಂಡೂರು ನಾರಾಯಣಸ್ವಾಮಿ, ತಾಲೂಕು ಅಧ್ಯಕ್ಷ ಕೊಡಿಯಪ್ಪ, ಅಶ್ವಿ‌ನಿ ಪೋಷಕರಾದ ವಿ.ಪ್ರಸನ್ನ ಕುಮಾರ್‌, ಜಯಮ್ಮ, ಅರಿವು ಶಿವಪ್ಪ ಇತರರಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.