ರಾಜ್ಯೊತ್ಸವ ಪ್ರಶಸ್ತಿ ಆಯ್ಕೆ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ
Team Udayavani, Oct 28, 2022, 2:38 PM IST
ಬೆಂಗಳೂರು: ಈ ವರ್ಷದ ರಾಜ್ಯೊತ್ಸವ ಪ್ರಶಸ್ತಿ ಆಯ್ಕೆಗೆ ಸಂಬಂಧಪಟ್ಟಂತೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಸುನಿಲ್ ಕುಮಾರ್, ಆರ್. ಅಶೋಕ್, ಶಿವರಾಮ್ ಹೆಬ್ಬಾರ್ ಹಾಗು ಸಮಿತಿ ಸದಸ್ಯರು ಭಾಗಿಯಾಗಿದ್ದರು.
ಇದನ್ನೂ ಓದಿ:ಮೈಸೂರು ಅರಮನೆ ಮುಂಭಾಗದಲ್ಲಿ ಮೊಳಗಿದ ಕೋಟಿ ಕಂಠ ಗಾಯನ
67ನೇ ರಾಜ್ಯೋತ್ಸವ ಹಿನ್ನೆಲೆಯಲ್ಲಿ 67 ಗಣ್ಯರಿಗೆ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ 1:2ರ ಅನುಪಾತದಲ್ಲಿ 134 ಜನರ ಪಟ್ಟಿಯನ್ನು ಸಿಎಂ ಬೊಮ್ಮಾಯಿ ಅವರಿಗೆ ಸಲ್ಲಿಸಲಾಗಿದೆ.
ನಾಳೆ ಅಂತಿಮ ಪಟ್ಟಿ ಘೋಷಣೆಯಾಗುವ ಸಾಧ್ಯತೆ ಇದೆ.