ಕಡಬ: ಆಟೋ ರಿಕ್ಷಾ-ಪಿಕಪ್ ಢಿಕ್ಕಿ; 4 ವರ್ಷದ ಬಾಲಕ ಮೃತ್ಯು
Team Udayavani, Nov 10, 2022, 6:21 PM IST
ಕಡಬ: ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಬಾಲಕನೋರ್ವ ಮೃತಪಟ್ಟ ಘಟನೆ ಕಡಬ – ಪಂಜ ರಸ್ತೆಯ ಕೋಡಿಂಬಾಳ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಪಿಕಪ್ ನಡುವೆ ಕೋಡಿಂಬಾಳ ಸಮೀಪದ ಮುರಚೆಡವು ಎಂಬಲ್ಲಿ ಢಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ನೆಟ್ಟಣದ ಮೆಡಿಕಲ್ ಶಾಪ್ ಮಾಲಕ ಪಂಜ ನಿವಾಸಿ ನವೀನ್ ಎಂಬವರ ಪುತ್ರ, ಕಡಬದ ವಿದ್ಯಾನಗರ ಸರಸ್ವತೀ ವಿದ್ಯಾಲಯದ ಶಿಶು ಮಂದಿರದ ವಿದ್ಯಾರ್ಥಿ ಹಾರ್ದಿಕ್ (4) ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ