ಹೆದ್ದಾರಿ ಬದಿ ತ್ಯಾಜ್ಯಕ್ಕೆ ಬೇಕಿದೆ ಮುಕ್ತಿ

ಅಡ್ಯಾರ್‌ಕಟ್ಟೆ- ಕಣ್ಣೂರು ನಡುವೆ ಇದೆ ಹಾಟ್‌ಸ್ಪಾಟ್‌!

Team Udayavani, Nov 14, 2022, 10:27 AM IST

3

ಮಹಾನಗರ: ನಗರ ಹೊರ ವಲಯದ ಅಡ್ಯಾರ್‌ ಕಟ್ಟೆ ಮತ್ತು ಕಣ್ಣೂರು ನಡುವಿನ ರಾಷ್ಟ್ರೀಯ ಹೆದ್ದಾರಿ 75ರ ಎರಡೂ ಬದಿ, ತ್ಯಾಜ್ಯ ತಂದು ಎಸೆಯುವವರಿಗೆ ಹಾಟ್‌ ಸ್ಪಾಟ್‌ ಆಗಿ ಪರಿಣಮಿಸಿದೆ.

ಮಂಗಳೂರು ಮಹಾನಗರ ಪಾಲಿಕೆ ಮತ್ತು ಅಡ್ಯಾರ್‌ ಗ್ರಾ.ಪಂ.ನ ಗಡಿ ಪ್ರದೇಶವಾದ್ದರಿಂದ, ಎರಡು ಆಡಳಿತಗಳು ಈ ಸಮಸ್ಯೆಗೆ ಮುಕ್ತಿ ಕಾಣಿಸುವಲ್ಲಿ ಅಷ್ಟಾಗಿ ಗಮನ ಹರಿಸಿದಂತಿಲ್ಲ. ಇದು ಕಸ ಎಸೆಯುವವರಿಗೆ ವರವಾಗಿ ಪರಿಣಮಿಸಿದ್ದು, ದಿನದಿಂದ ದಿನಕ್ಕೆ ಇಲ್ಲಿನ ಕಸದ ರಾಶಿ ಹೆಚ್ಚಾಗುತ್ತಿದೆ.

ರಸ್ತೆಯ ಬದಿಯಲ್ಲಿ ಕಸದ ರಾಶಿ ಬಿದ್ದು, ನಡೆದುಕೊಂಡು ಹೋಗುವವರಿಗೆ ಜಾಗವೇ ಇಲ್ಲ ಎನ್ನುವಂತಾಗಿದೆ. ಈ ಹಿಂದೆ ತ್ಯಾಜ್ಯ ಎಸೆಯದಂತೆ ಎಚ್ಚರಿಕೆ ನೀಡುವ ಬೋರ್ಡ್‌ ಅಳವಡಿಸಲಾಗಿತ್ತು. ಪ್ರಸ್ತುತ ಅದೂ ಬಿದ್ದು ಹೋಗಿದೆ. ಒಂದೆಡೆ ರಸ್ತೆ ಬದಿ ಹುಲ್ಲು ಪೊದೆಗಳಿಂದ ತುಂಬಿ ಹೋಗಿದ್ದು, ಇನ್ನೊಂದೆಡೆ ತ್ಯಾಜ್ಯ ರಾಶಿ. ಇದರಿಂದ ಒಟ್ಟು ಪ್ರದೇಶವೇ ಗಬ್ಬೆದ್ದು ಹೋಗಿದೆ. ಹೆದ್ದಾರಿಯಲ್ಲಿ ಸಂಚರಿಸುವವರಿಗೆ ಇಲ್ಲಿನ ವಾಸನೆ ಉಚಿತ ಎನ್ನಬಹುದು. ಆಹಾರದ ಉಳಿಕೆ, ಮೀನಿನ ತ್ಯಾಜ್ಯವನ್ನು ಪ್ಲಾಸ್ಟಿಕ್‌ನಲ್ಲಿ ಕಟ್ಟಿ ಎಸೆಯುವುದು, ಮನೆಯಲ್ಲಿ ಹಾಳಾದ ಬೆಡ್‌ಗಳು, ಸೋಫಾ ಕುಷನ್‌, ಕಮೋಡ್‌ ಎಲ್ಲವೂ ಹೆದ್ದಾರಿ ಬದಿಗೆ ಬಂದಿವೆ.

ಸ್ಥಳದಲ್ಲಿ ರಾಶಿಬಿದ್ದಿರುವ ತ್ಯಾಜ್ಯವನ್ನು ತೆರವುಗೊಳಿಸಿ, ಮತ್ತೆ ಮುಂದಿನ ದಿನಗಳಲ್ಲಿ ಯಾವುದೇ ತ್ಯಾಜ್ಯ ಬೀಳದಂತೆ ಎಚ್ಚರಿಕೆ ವಹಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ದಂಡದ ಹೆದರಿಕೆ ಇಲ್ಲ

ಬೀದಿ ಬದಿಯಲ್ಲಿ ಕಸ ಎಸೆಯುವವರಿಗೆ ದಂಡ ವಿಧಿಸುವ ಪ್ರಕ್ರಿಯೆ ಈಗ ಗ್ರಾಮ ಮಟ್ಟದಲ್ಲಿ ಜಾರಿಯಲ್ಲಿದೆ. ಆದರೆ ದಂಡದ ಕುರಿತಂತೆ ಜನರಲ್ಲಿ ಹೆದರಿಕೆಯೇ ಇಲ್ಲ ಎನ್ನಬಹುದು. ಕೆಲವರು ರಾತ್ರಿ ವೇಳೆ ಅಥವಾ ಬೆಳಕು ಹರಿಯುವ ಮುನ್ನ ಕಸವನ್ನು ಸುರಿದು ಹೋಗುವುದರಿಂದ ಪತ್ತೆ ಮಾಡುವುದೂ ಅಧಿಕಾರಿಗಳ ಪಾಲಿಗೆ ಕಷ್ಟವಾಗಿದೆ. ಈ ಹಿಂದೆ ಒಂದು ಬಾರಿ ತ್ಯಾಜ್ಯದಲ್ಲಿದ್ದ ಬಿಲ್‌ನ ಆಧಾರದಲ್ಲಿ ಹೊಟೇಲ್‌ ಒಂದಕ್ಕೆ ದಂಡ ವಿಧಿಸಲಾಗಿತ್ತು. ಕಸ ಎಸೆಯುವುದು ಕಂಡು ಬಂದು ಸಾರ್ವಜನಿಕರು ಯಾರಾದರೂ ಪ್ರಶ್ನಿಸಲು ಹೋದರೆ ಅಂತಹವರನ್ನು ಗದರಿಸುವ ಉದಾಹರಣೆಯೂ ಇದೆ.

ಜನರಲ್ಲೂ ಇಲ್ಲವಾಗಿದೆ ಕಾಳಜಿ

ರಸ್ತೆ ಬದಿಯಲ್ಲಿ ಕಸ ಎಸೆಯಬಾರದು ಎನ್ನುವ ಕನಿಷ್ಠ ಜ್ಞಾನ ಜನರಲ್ಲೂ ಇಲ್ಲ. ಪರಿಸರ ಕಾಳಜಿಯಂತೂ ಮೊದಲೇ ಇಲ್ಲ. ಇಲ್ಲಿ ಕಸ ಎಸೆಯುವವರು ಬಹುತೇಕ ಗ್ರಾಮೀಣ ಭಾಗದ ಮಂದಿಯೇ ಎನ್ನಬಹುದು. ವಾಹನಗಳಲ್ಲಿ ಬಂದು ಎಸೆದು ಜಾಗ ಖಾಲಿ ಮಾಡುತ್ತಾರೆ. ಇಂದು ಎಲ್ಲ ಗ್ರಾಮಗಳಲ್ಲಿ ಮನೆ-ಮನೆ ಕಸ ಸಂಗ್ರಹ ವ್ಯವಸ್ಥೆ ಜಾರಿಯಲ್ಲಿದೆ. ಆದರೂ ಈ ರೀತಿ ತಂದು ಎಸೆಯುವುದು ಬೇಜವಾಬ್ದಾರಿಯ ಪರಮಾವಧಿ ಎನ್ನುವುದು ಪರಿಸರ ಪ್ರಿಯರ ಅಭಿ ಪ್ರಾಯ. ರಸ್ತೆ ಬದಿಯಲ್ಲಿ ನಿಂತರೆ ಕನಿಷ್ಠ 10 ಮಂದಿಯನ್ನು ಕಸ ಹಾಕುವವರನ್ನು ಹಿಡಿದು ದಂಡ ಹಾಕಬಹುದಾಗಿದೆ.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.