ವಿದ್ಯುತ್‌ ಕಡಿತ: ಕಚೇರಿಯಲ್ಲಿ ಸಾರ್ವಜನಿಕ ಕೆಲಸ ಸ್ಥಗಿತ

Team Udayavani, Nov 19, 2022, 4:59 PM IST

tdy-16

ಕೋಲಾರ: ಸುಮಾರು 4 ಲಕ್ಷಕ್ಕೂ ಅಧಿಕ ರೂ. ವಿದ್ಯುತ್‌ ಬಿಲ್‌ ಬಾಕಿ ಇಟ್ಟುಕೊಂಡಿದ್ದರಿಂದ ಬೆಸ್ಕಾಂ ಅಧಿಕಾರಿಗಳು ವಿದ್ಯುತ್‌ ಕಡಿತ ಮಾಡಿಕೊಂಡು ಹೋಗಿದ್ದರಿಂದ ಶುಕ್ರವಾರ ಇಡೀ ದಿನ ನಗರದ ತಾಲೂಕು ಕಚೇರಿಯಲ್ಲಿ ಕೆಲಸ ಕಾರ್ಯಗಳು ಸ್ಥಗಿತಗೊಂಡು ಸಾರ್ವಜನಿಕರು ಅನಗತ್ಯವಾಗಿ ಪರದಾಡಬೇಕಾಯಿತು.

ತಾಲೂಕು ಕಚೇರಿಯ ವಿದ್ಯುತ್‌ ಬಿಲ್‌ ಸುಮಾರು 4 ಲಕ್ಷ ರೂ.ಗೂ ಅಧಿಕ ಮೊತ್ತ ಪಾವತಿಸದೆ ನಿರ್ಲಕ್ಷ್ಯಸಿತ್ತು. ಇದರಿಂದ ಬೆಸ್ಕಾಂ ಸಿಬ್ಬಂದಿ ಶುಕ್ರವಾರ ಬೆಳಗ್ಗೆಯೇ ತಾಲೂಕು ಕಚೇರಿಗೆ ವಿದ್ಯುತ್‌ ಕಡಿತ ಮಾಡಿ ಹೋಗಿದ್ದರು. ವಿದ್ಯುತ್‌ ಕಡಿತಗೊಂಡ ನೆಪವನ್ನಿಟ್ಟುಕೊಂಡು ಕಚೇರಿಯ ಸಿಬ್ಬಂದಿ ಇಡೀ ದಿನ ವಿದ್ಯುತ ಇಲ್ಲ ಎಂಬ ನೆಪವೊಡ್ಡಿ ಕಳುಹಿಸುತ್ತಿದ್ದರು.ಸಾರ್ವಜನಿಕರು ವಿದ್ಯುತ್‌ ಈಗ ಬರಬಹುದು, ಆಗ ಬರಬಹುದು ಎಂದು ಸಂಜೆಯವರೆವಿಗೂ ಕಾದರೂ ಪ್ರಯೋಜನವಾಗಲಿಲ್ಲ.

ಸಾರ್ವಜನಿಕರು ಪರದಾಟ: ಸಾರ್ವಜನಿಕರ ದೂರಿನ ಮೇರೆಗೆ ತಹಶೀಲ್ದಾರ್‌ ನಾಗರಾಜ್‌ರಿಗೆ ಮಧ್ಯಾಹ್ನ 3.45ರ ಸುಮಾರಿಗೆ ಸಾರ್ವಜನಿಕರು ದೂರವಾಣಿ ಮಾಡಿ, ಕಚೇರಿಯಲ್ಲಿ ವಿದ್ಯುತ್‌ ಬಾಕಿ ಕಾರಣ ವಿದ್ಯುತ್‌ ಕಡಿತಗೊಂಡಿದ್ದು, ಸಾರ್ವಜನಿಕರು ಪರದಾಟ ನಡೆಸುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇದಕ್ಕೆ ಉತ್ತರಿಸಿದ ತಹಶೀಲ್ದಾರ್‌ ನಾಗರಾಜ್‌, ಯಾರು ಹೇಳಿದ್ದು, ತಮ್ಮ ಕಚೇರಿಯಲ್ಲಿ ಈಗಲೂ ವಿದ್ಯುತ್‌ ಇದೆ ಎಂಬ ಸುಳ್ಳು ಮಾಹಿತಿಯನ್ನು ಉತ್ತರವಾಗಿ ನೀಡಿದ್ದಾರೆ.

ಇದಾದ ನಂತರ ಬೆಸ್ಕಾಂ ಅಧಿಕಾರಿಗಳಿಗೆ ದೂರವಾಣಿ ಮಾಡಿ ಕೇಳಿದಾಗ, ತಾಲೂಕು ಕಚೇರಿಯಲ್ಲಿ 4 ಲಕ್ಷಕ್ಕೂ ಅಧಿಕ ವಿದ್ಯುತ್‌ ಬಿಲ್‌ ಬಾಕಿ ಇಟ್ಟು ಕೊಂಡಿದ್ದರಿಂದ ತಮ್ಮ ಸಿಬ್ಬಂದಿ ವಿದ್ಯುತ್‌ ಕಡಿತ ಗೊಳಿಸಿದ್ದಾರೆ. ಸಾರ್ವಜನಿಕರ ಕೆಲಸ ಕಾರ್ಯ ಗಳಿಗೆ ಅಡ್ಡಿ ಯುಂಟಾಗುತ್ತಿದೆಯೆಂಬ ಕಾರಣ ಕ್ಕಾಗಿ ಮಧ್ಯಾಹ್ನದ ನಂತರ ವಿದ್ಯುತ್‌ ಮರು ಸಂಪರ್ಕ ಕಲ್ಪಿ ಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉತ್ತರಿಸಿದರು.

ಕೊನೆಗೆ ಸುಮಾರು 4.05 ನಿಮಿಷಕ್ಕೆ ಕಡಿತಗೊಂಡಿದ್ದ ವಿದ್ಯುತ್‌ ಮರು ಸಂಪರ್ಕವಾಯಿತು. ಕಚೇರಿ ಸಿಬ್ಬಂದಿ ಯಥಾ ಪ್ರಕಾರ ಸರ್ವರ್‌ ಡೌನ್‌ ಇತ್ಯಾದಿ ಉತ್ತರಗಳನ್ನು ನೀಡಿ,ಬೆಳಗ್ಗೆಯಿಂದಲೂ ಕಾದು ನಿಂತಿದ್ದ ಸಾರ್ವಜನಿಕರನ್ನು ಬರಿ ಗೈಯಲ್ಲಿ ವಾಪಸ್‌ ಕಳುಹಿಸಿದರು.

ಇದೇ ಅವಧಿಯಲ್ಲೇ ಉಪ ವಿಭಾಗಾಧಿಕಾರಿ ವೆಂಕಟಲಕ್ಷ್ಮಮ್ಮನವರು ತಾಲೂಕು ಕಚೇರಿಗೆ ಸಾಮಾನ್ಯರಂತೆ ಭೇಟಿ ನೀಡಿ ಕಚೇರಿಯ ಅವ್ಯವಸ್ಥೆಗಳನ್ನು ಗಮನಿಸಿ, ತಹಶೀಲ್ದಾರ್‌ ಮತ್ತು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡು ಸಾರ್ವಜನಿಕರಲ್ಲಿ ಭರವಸೆ ಮೂಡಿಸಿದರು.

ಟಾಪ್ ನ್ಯೂಸ್

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.