ದುಬೈ ಪ್ರವಾಸಕ್ಕೆ ಅನುಮತಿ ಕೋರಿ ಡಿಕೆ ಶಿವಕುಮಾರ್‌ ಅರ್ಜಿ

Team Udayavani, Nov 24, 2022, 11:55 AM IST

ದುಬೈ ಪ್ರವಾಸಕ್ಕೆ ಅನುಮತಿ ಕೋರಿ ಡಿಕೆ ಶಿವಕುಮಾರ್‌ ಅರ್ಜಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ದುಬೈ ಪ್ರವಾಸಕ್ಕೆ ಅನುಮತಿ ಕೋರಿದ್ದಾರೆ. ಬುಧವಾರ ದೆಹಲಿ ಚುನಾಯಿತ ಪ್ರತಿನಿಧಿಗಳ ಪ್ರಕರಣಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿದ್ದ ಅವರು, ಡಿಸೆಂಬರ್‌ ಮೊದಲ ವಾರದಲ್ಲಿ ವಿದೇಶಿ ಪ್ರವಾಸಕ್ಕೆ ಅನುಮತಿ ಕೋರಿದರು. ಆದರೆ, ನ.26ರಂದು ಈ ಬಗ್ಗೆ ಅಭಿಪ್ರಾಯ ತಿಳಿಸುವುದಾಗಿ ನ್ಯಾಯಾಲಯ ತಿಳಿಸಿತು.

ವಿಚಾರಣೆ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್‌ ಪರ ವಕೀಲರು, ಈ ಹಿಂದೆ ಆರೋಪ ಪಟ್ಟಿಯ ಪ್ರತಿ ನೀಡುವಂತೆ ಇಡಿ ಅಧಿಕಾರಿಗಳಿಗೆ ಮನವಿ ಮಾಡಲಾಗಿ ಕೆಲವೇ ದಿನಗಳಲ್ಲಿ ನೀಡುವುದಾಗಿ ತಿಳಿಸಿದ್ದರು.

ಆದರೆ, ಇನ್ನೂ ಸಮರ್ಪಕವಾಗಿ ಮಾಹಿತಿ ನೀಡಿಲ್ಲ. ಹೀಗಾಗಿ, ವಾದ ಮಂಡಿಸಲು ಸಮಯಾವಕಾಶ ಬೇಕು ಎಂದು ಮನವಿ ಮಾಡಿದರು. ಇದಕ್ಕೆ ಒಪ್ಪಿದ ನ್ಯಾಯಾಲಯ, 2023 ಜ.18ಕ್ಕೆ ವಿಚಾರಣೆ ಮುಂದೂಡಿತು.

ತನಿಖೆ ರದ್ದತಿಗೆ ಇಡಿ ವಿರೋಧ: ಇನ್ನೊಂದೆಡೆ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ದಾಖಲಿಸಿರುವ ಪ್ರಕರಣದ ಕುರಿತ ಸಂಪೂರ್ಣ ತನಿಖೆಯನ್ನೇ ರದ್ದುಗೊಳಿಸಬೇಕು ಎಂದು ಕೋರಿ ದೆಹಲಿ ಹೈಕೋರ್ಟ್‌ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಲ್ಲಿಸಿರುವ ಅರ್ಜಿಗೆ ಇಡಿ ವಿರೋಧ ವ್ಯಕ್ತಪಡಿಸಿದೆ. ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಡಿ ವತಿಯಿಂದ ದಾಖಲಿಸಲಾದ ಎರಡು ಇಸಿಐಆರ್‌ ಗಳಲ್ಲಿರುವ ಸಂಗತಿಗಳು ಒಂದಕ್ಕೊಂದು ಪೂರಕವಾಗಿದ್ದರೂ ಇದನ್ನು ಮರುತನಿಖೆ ಎಂದು ಕರೆಯಲು ಆಗುವುದಿಲ್ಲ ಎಂದು ಅಫಿಡವಿಟ್‌ ನಲ್ಲಿ ಇಡಿ ಉಲ್ಲೇಖಿಸಿದೆ.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.