ಚಿರತೆ ಹಾವಳಿ: ಕೆಆರ್‌ಎಸ್‌ಗೆ 50 ಲಕ್ಷಕ್ಕೂಹೆಚ್ಚು ನಷ್ಟ

ರಾತ್ರಿ ವೇಳೆ ದಾಳಿ ಮಾಡುವ ಸಾಧ್ಯತೆ ಇದೆ.

Team Udayavani, Nov 25, 2022, 6:34 PM IST

ಚಿರತೆ ಹಾವಳಿ: ಕೆಆರ್‌ಎಸ್‌ಗೆ 50 ಲಕ್ಷಕ್ಕೂಹೆಚ್ಚು ನಷ್ಟ

ಮಂಡ್ಯ: ವಿಶ್ವ ವಿಖ್ಯಾತ ಕೆಆರ್‌ಎಸ್‌ ಬೃಂದಾವನದಲ್ಲಿ ಆಗಾಗ್ಗೆ ಕಾಣಿಸಿಕೊಂಡು ಆತಂಕ ಉಂಟು ಮಾಡುತ್ತಿರುವ ಚಿರತೆ ಸೆರೆ ಹಿಡಿಯಲು ಗುರುವಾರ ಜಿಲ್ಲಾ ಉಪಅರಣ್ಯ ಸಂರಕ್ಷಣಾಧಿಕಾರಿ ರುತ್ರೇನ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದಾಳಿ ಮಾಡದಂತೆ ಕ್ರಮ: ಕೆಆರ್‌ಎಸ್‌ ವ್ಯಾಪ್ತಿಯ ಅರಣ್ಯ ಪ್ರದೇಶವಾಗಿದ್ದು, ವಿಶಾಲವಾಗಿದೆ. ಅಲ್ಲದೆ, ತುಂಬಾ ವ್ಯತ್ಯಾಸಗಳಿಂದ ಕೂಡಿದೆ. ಆದ್ದರಿಂದ ಚಿರತೆ ಹಿಡಿಯಲು ಎಲ್ಲ ರೀತಿಯ ಕ್ರಮ ವಹಿಸಲಾಗುತ್ತಿದೆ. ಚಿರತೆ ಚಲನ ವಲನ ಗುರುತಿಸಿ ಹಾಗೂ ಮನುಷ್ಯರ ಮೇಲೆ ದಾಳಿ ಮಾಡದಂತೆ ಕ್ರಮ ವಹಿಸಲಾಗುತ್ತಿದೆ ಎಂದರು.

ಚಿರತೆ ಹಗಲು ವೇಳೆ ದಾಳಿ ಮಾಡುವ ಸಾಧ್ಯತೆ ಇಲ್ಲ. ಆದರೆ ರಾತ್ರಿ ವೇಳೆ ದಾಳಿ ಮಾಡುವ ಸಾಧ್ಯತೆ ಇದೆ. ಆದರೆ, ರಾತ್ರಿ ವೇಳೆಯಲ್ಲಿ ಸಂಪೂರ್ಣ ಬಂದ್‌ ಆಗುವುದರಿಂದ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದೆ. ಅದನ್ನು ಶೀಘ್ರ ಸೆರೆ ಹಿಡಿಯಲಾಗುವುದು ಎಂದು ತಿಳಿಸಿದರು.

ಪ್ರವಾಸಿಗರ ನಿರ್ಬಂಧದಿಂದ ನಷ್ಟ: ಚಿರತೆ ಹಾವಳಿಯಿಂದಾಗಿ ಬೃಂದಾವನ ನಿರ್ಬಂಧ ಹೇರಿರುವ ಹಿನ್ನೆಲೆ ಕಾವೇರಿ ನೀರಾವರಿ ನಿಗಮಕ್ಕೆ ಸುಮಾರು 50 ಲಕ್ಷ ರೂ.ಗೂ ಹೆಚ್ಚು ನಷ್ಟ ಸಂಭವಿಸಿದೆ. ಕಳೆದ 25 ದಿನಗಳಿಂದ ಚಿರತೆ ಸೆರೆ ಹಿಡಿಯದ ಹಿನ್ನೆಲೆ ಸ್ಥಳೀಯರು, ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ವಾರಾಂತ್ಯದಲ್ಲಿ ಹೆಚ್ಚು ಮಂದಿ:ಪ್ರತಿದಿನ 3ರಿಂದ 4 ಸಾವಿರ ಮಂದಿ ಪ್ರವಾಸಿಗರು ಭೇಟಿ ನೀಡುತ್ತಿದ್ದರು. ವಾರಾಂತ್ಯಗಳಲ್ಲಿ 5 ಸಾವಿರಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಬೃಂದಾವನ ಪ್ರವೇಶಿಸುತ್ತಿದ್ದರು. ಒಬ್ಬರಿಗೆ 50 ರೂ. ಟಿಕೆಟ್‌ ನಿಗದಿಪಡಿಸಲಾಗಿದೆ. ಆದರೆ, ಬೃಂದಾವನ ಬಂದ್‌ನಿಂದ ನಿಗಮಕ್ಕೆ ಆದಾಯ ಬಾರದಂತಾಗಿದೆ. ಅಲ್ಲದೆ, ಅಲ್ಲಿನ ವ್ಯಾಪಾರಿಗಳಿಗೂ ವ್ಯಾಪಾರವಿಲ್ಲದೆ ಸಂಕಷ್ಟ ಎದುರಾಗಿದೆ.

60 ಕಡೆ ಕ್ಯಾಮೆರಾ, 8 ಕಡೆ ಬೋನು
ಚಿರತೆ ಸೆರೆಗೆ ಶ್ರೀರಂಗಪಟ್ಟಣ, ಪಾಂಡವಪುರ ವಲಯದಿಂದ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಚಿರತೆ ಗುರುತಿಸಲು 60 ಕಡೆ ಕ್ಯಾಮೆರಾ ಅಳವಡಿಸಲಾಗಿದೆ. 8 ಬೋನು ಇರಿಸಲಾಗಿದೆ. ಚಿರತೆ ಓಡಾಟದ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಡ್ರೋನ್‌ ಮೂಲಕವೂ ಗುರುತಿಸುವ ಪ್ರಯತ್ನ ನಡೆಯುತ್ತಿದೆ. ಅಲ್ಲದೆ, ಕೂಬಿಂಗ್‌ ನಡೆಸಲಾಗುತ್ತಿದೆ ಎಂದು ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿ ಕಾರಿ ರುತ್ರೇನ್‌ ಹೇಳಿದರು.

ಟಾಪ್ ನ್ಯೂಸ್

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.